ಸಸ್ಯಕಾಶಿ ಲಾಲ್ಬಾಗ್ನಲ್ಲಿ ಪ್ರೀ, ಪೋಸ್ಟ್ ವೆಡ್ಡಿಂಗ್ ಶೂಟ್ಸ್, ಬೇಬಿ, ಮಾಡೆಲಿಂಗ್ ಶೂಟ್ಸ್, ರೀಲ್ಸ್-ವೀಡಿಯೋ, ಸಿನಿಮಾ ಚಿತ್ರೀಕರಣಕ್ಕೆ ಕಡಿವಾಣ ಹಾಕಲು ತೋಟಗಾರಿಕೆ ಇಲಾಖೆ ಸಿದ್ಧತೆ ನಡೆಸಿದೆ.
ಗುಜರಾತ್ ವಿಮಾನ ದುರಂತದಲ್ಲಿ ಪವಾಡಸದೃಶವಾಗಿ ಬದುಕುಳಿದ ಏಕೈಕ ಪ್ರಯಾಣಿಕ ವಿಶ್ವಾಸ್ ಕುಮಾರ್ ರಮೇಶ್ ಅಪಘಾತದಿಂದ ತಾವು ಪಾರಾದ ರೀತಿಯನ್ನು ವಿವರಿಸಿದ್ದಾರೆ.
ಗುರುವಾರ ಪತನವಾದ ಏರ್ ಇಂಡಿಯಾ ವಿಮಾನ ಮನೆಗಳಿಗೆ ತೀರಾ ಸಮೀಪದಲ್ಲಿ ಹಾದುಹೋಗಿತ್ತು. ಪೈಲಟ್ ಸಮಯಪ್ರಜ್ಞೆ ತೋರಿದ್ದರಿಂದ ವಸತಿ ಪ್ರದೇಶದಲ್ಲಿದ್ದ ಸುಮಾರು 1,500ರಿಂದ 2,000 ಜನರ ಪ್ರಾಣ ಉಳಿಯಿತು
ಧಾರವಾಡದ ಮಾಜಿ ಜಿಪಂ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಆರೋಪಿ ಮಾಜಿ ಸಚಿವ, ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲು ಪಾಲಾಗಿದ್ದಾರೆ.
ಬೆಂಗಳೂರು ಸೇರಿ ರಾಜ್ಯದ ವಿವಿಧ ನಗರಗಳಲ್ಲಿ ಒದಗಿಸುತ್ತಿರುವ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸುವಂತೆ ಓಲಾ, ಉಬರ್ ಕಂಪನಿಗಳಿಗೆ ನಿರ್ದೇಶಿಸಿ ಹೈಕೋರ್ಟ್ ಏಕ ಸದಸ್ಯ ಪೀಠ ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡಲು ವಿಭಾಗೀಯ ಪೀಠ ನಿರಾಕರಿಸಿದೆ.
‘ಕೇಂದ್ರೀಯ ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. ಹೀಗಾಗಿ ದೇಶದ ಒಕ್ಕೂಟ ವ್ಯವಸ್ಥೆ ಬಲಪಡಿಸಿ, ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸಬೇಕು’ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ
ಹೆಚ್ಚುತ್ತಿರುವ ಆನ್ಲೈನ್ ಮತ್ತು ಮೊಬೈಲ್ ಬಳಕೆ ಮಕ್ಕಳ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತಿದ್ದು, ಅದರಿಂದ ಮಕ್ಕಳು ಹೆಚ್ಚಾಗಿ ಆನ್ಲೈನ್ ಲೈಂಗಿಕ ದೌರ್ಜನ್ಯಕ್ಕೆ ತುತ್ತಾಗುತ್ತಿರುವ ಅಘಾತಕಾರಿ ಅಂಶವನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬಹಿರಂಗಪಡಿಸಿದೆ.
ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ ಎಂಬ ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಅವರ ನಟನೆಯ ‘ಥಗ್ ಲೈಫ್’ ಚಿತ್ರ ಬಿಡುಗಡೆಗೆ ಪೊಲೀಸ್ ರಕ್ಷಣೆ ಕೋರಿ ರಾಜ್ಕಮಲ್ ಫಿಲ್ಮ್ಸ್ಇಂಟರ್ನ್ಯಾಷನಲ್ ಸಂಸ್ಥೆ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಜೂ.20ಕ್ಕೆ ಮುಂದೂಡಿರುವ ಹೈಕೋರ್ಟ್
ದೇಶದ ಟೆಕ್ ರಾಜಧಾನಿ ಬೆಂಗಳೂರು ಇದೀಗ ಮತ್ತೊಂದು ಮಹತ್ವದ ಸಾಧನೆ ಮಾಡಿದೆ. ವಿಶ್ವದ ಟಾಪ್ 20 ಸಾರ್ಟಪ್ ಇಕೋಸಿಸ್ಟಂ ನಗರಗಳ ಪಟ್ಟಿಯಲ್ಲಿ ಬೆಂಗಳೂರು 14ನೇ ಸ್ಥಾನಪಡೆದಿದೆ.
ಕಳೆದ 20 ತಿಂಗಳಿನಿಂದ ನೆರೆಯ ಪ್ಯಾಲೆಸ್ತೀನ್ನ ಗಾಜಾಪಟ್ಟಿ ಪ್ರದೇಶದ ಮೇಲೆ ಸತತ ದಾಳಿ ನಡೆಸುತ್ತಿರುವ ಇಸ್ರೇಲ್, ಶುಕ್ರವಾರ ಬೆಳಗ್ಗೆ ಹಾಗೂ ರಾತ್ರಿ ತನ್ನ ಮತ್ತೊಂದು ಶತ್ರು ದೇಶವಾದ ಇರಾನ್ ಮೇಲೆ ‘ಆಪರೇಷನ್ ರೈಸಿಂಗ್ ಲಯನ್’ ಹೆಸರಲ್ಲಿ 2 ಬಾರಿ ಭೀಕರ ವೈಮಾನಿಕ ದಾಳಿ ನಡೆಸಿದೆ.