ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣದಲ್ಲಿ ಕಬ್ಬನ್ ಪಾರ್ಕ್ ಠಾಣಾ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ನಾಲ್ವರೂ ಆರ್ಸಿಬಿ ಸಿಬ್ಬಂದಿಗೆ ಜಾಮೀನು
ಸಲ್ಮಾನ್ ಖಾನ್ ಸಹೋದರ, ಬಾಲಿವುಡ್ ನಟ, ನಿರ್ಮಾಪಕ ಅರ್ಬಾಜ್ ಖಾನ್ 57ನೇ ವಯಸ್ಸಿನಲ್ಲಿ ಮತ್ತೊಮ್ಮೆ ತಂದೆಯಾಗುತ್ತಿರುವುದಾಗಿ ತಿಳಿಸಿದ್ದಾರೆ. ಈ ಮೂಲಕ ತನ್ನ ಪತ್ನಿ ಶೂರಾ ಖಾನ್ ಗರ್ಭಿಣಿಯಾಗಿರುವುದನ್ನು ಖಚಿತಪಡಿಸಿದ್ದಾರೆ.
ಕಮಲ್ ಹಾಸನ್ ನಿರ್ದೇಶನದ ‘ಥಗ್ಲೈಫ್’ ರಿಲೀಸ್ ಆದ ವಾರದೊಳಗೇ ಅರ್ಧಕ್ಕರ್ಧ ಥೇಟರ್ನಿಂದ ಹೊರದಬ್ಬಲ್ಪಟ್ಟಿದೆ.
ಸಂದರ್ಶನವೊಂದರಲ್ಲಿ ಮಾತನಾಡಿದ ನಟಿ, ‘ಭಾರತೀಯ ಚಿತ್ರರಂಗದಲ್ಲಿ, ಅದರಲ್ಲೂ ಬಾಲಿವುಡ್ನಲ್ಲಿ ವಿವಾಹಿತ ನಟಿಯನ್ನು ಪ್ರತ್ಯೇಕಿಸಿ ನೋಡುವ ಮನೋಭಾವವಿದೆ’ ಎಂದಿದ್ದಾರೆ.
ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಆರ್ಸಿಬಿ ಸಂಭ್ರಮಾಚರಣೆಗೆ ವೇಳೆ ನಡೆದ ಕಾಲ್ತುಳಿತ ಘಟನೆಯಿಂದ ಬಿಸಿಸಿಐ ಎಚ್ಚೆತ್ತಿದೆ.
ಐಪಿಎಲ್ ಚಾಂಪಿಯನ್ ಆರ್ಸಿಬಿ ತಂಡವನ್ನು ಖರೀದಿಸುವ ಬಗ್ಗೆ ಹರಿದಾಡುತ್ತಿರುವ ಊಹಾಪೋಹಗಳ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ
ರಾಜ್ಯ ಬಿಜೆಪಿಯ ಬಾಕಿ ಉಳಿದಿದ್ದ ಹತ್ತು ಜಿಲ್ಲೆಗಳಿಗೆ ನೂತನ ಅಧ್ಯಕ್ಷರ ನೇಮಕವಾಗಿದೆ. ಇದರೊಂದಿಗೆ ರಾಜ್ಯ ಬಿಜೆಪಿಯ ಎಲ್ಲ ಜಿಲ್ಲೆಗಳ ಸಂಘಟನಾತ್ಮಕ ಜಿಲ್ಲಾಧ್ಯಕ್ಷರ ನೇಮಕ ಪ್ರಕ್ರಿಯೆ ಪೂರ್ಣಗೊಂಡಂತಾಗಿದ್ದು, ರಾಜ್ಯಾಧ್ಯಕ್ಷರ ನೇಮಕಕ್ಕೆ ಹಾದಿ ಮತ್ತಷ್ಟು ಸುಗಮವಾಗಿದೆ.
ರಾಜ್ಯ ಸರ್ಕಾರ ಪ್ರತಿ ವರ್ಷ 19,000 ಕೋಟಿ ರು.ಗಳನ್ನು ರೈತರ ಕೃಷಿ ಪಂಪ್ ಸೆಟ್ಗಳಿಗೆ ಸಬ್ಸಿಡಿಯಾಗಿ ನೀಡುತ್ತಿದೆ. ನಾವೇ ಅಧಿಕಾರಕ್ಕೆ ಬಂದು ಈ ಯೋಜನೆಯನ್ನು ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿ ಯಾವುದೇ ರೀತಿಯ ಕಿರುಕುಳ ನೀಡಲು ಮುಂದಾದರೆ ರಾಜ್ಯ ಬಿಜೆಪಿ ಸುಮ್ಮನೆ ಕೂರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ರಾಜ್ಯ ಸರ್ಕಾರ ಸದ್ಯ ಮಾಡಲಾಗಿರುವ ಜಾತಿ ಗಣತಿ ವರದಿಯನ್ನು ಕೈಬಿಟ್ಟು ಮರು ಸಮೀಕ್ಷೆ ಮಾಡಲು ಮುಂದಾಗಿದೆ. ಇದಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ