1984ರಲ್ಲಿ 2 ಸ್ಥಾನದಲ್ಲಿ ಗೆಲುವು ಪಡೆದಿದ್ದ ಪಕ್ಷ ಇಂದು 18 ಕೋಟಿ ಸದಸ್ಯರ ದೊಡ್ಡ ಕುಟುಂಬವನ್ನು ಹೊಂದಿದೆ. 370ರ ರದ್ಧತಿ, ರಾಮ ಮಂದಿರ, ತ್ರಿವಳಿ ತಲಾಖ್ ರದ್ಧತಿ, ವಕ್ಫ್ ತಿದ್ದುಪಡಿ ಕಾಯ್ದೆಯಂತಹ ಹಲವು ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ.
ಮೂಲಗಳು ಹೇಳುವ ಪ್ರಕಾರ, ಸಂಪುಟ ಪುನಾರಚನೆ ಮತ್ತು ಹೊಸ ಅಧ್ಯಕ್ಷರ ಆಯ್ಕೆ ಒಂದೇ ಸಮಯಕ್ಕೆ ನಡೆದರೆ ಒಳ್ಳೆಯದು ಎಂಬ ಅಭಿಪ್ರಾಯದಲ್ಲಿ ಹೈಕಮಾಂಡ್ ಇದೆ.
ರಾಜ್ಯ ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ವಿರುದ್ಧದ ಹನಿಟ್ರ್ಯಾಪ್ ಯತ್ನ ಆರೋಪಕ್ಕೆ ಸಂಬಂಧಿಸಿ ಯಾವುದೇ ಪುರಾವೆಗಳು ಲಭ್ಯವಾಗಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಅಪರಾಧ ತನಿಖಾ ಇಲಾಖೆ (ಸಿಐಡಿ)ಯ ಡಿಜಿಪಿ ಡಾ.ಎಂ.ಎ.ಸಲೀಂ ಮೌಖಿಕವಾಗಿ ವಿವರಣೆ ನೀಡಿದ್ದಾರೆ ಎನ್ನಲಾಗಿದೆ.
ಸಾವಿಗೀಡಾಗುವ ನವಜಾತ ಶಿಶುಗಳ ತಾಯಂದಿರ ಮರಣ ಪ್ರಮಾಣ ಇಳಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಇಂಥ ಸಾವಿನ ಪ್ರಮಾಣ ಶೂನ್ಯಕ್ಕಿಳಿಸುವ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಒಣಗುತ್ತಿರುವ ಬೆಳೆಗಳ ಸಂರಕ್ಷಿಸಿಕೊಳ್ಳಲು ತುರ್ತಾಗಿ ನಾರಾಯಣಪುರದ ಎಡ-ಬಲದಂಡೆ ಕಾಲುವೆಗಳಿಗೆ ಬಸವಸಾಗರ ಜಲಾಶಯದ ಮೂಲಕ ನೀರು ಹರಿಸುವ ವಿಚಾರ ರಾಜಕೀಯ ಹಗ್ಗಜಗ್ಗಾಟಕ್ಕೆ ಸಾಕ್ಷಿಯಾಗಿದ್ದು, ಆಡಳಿತ ಮತ್ತು ವಿಪಕ್ಷ ನಾಯಕರ ಹೈಡ್ರಾಮಾ ಬಳಿಕ ಕೊನೆಗೂ ನೀರು ಹರಿಸಲು ಸರ್ಕಾರ ಮುಂದಾಗಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಶುಕ್ರವಾರ ಮುಕ್ತಾಯಗೊಂಡಿದ್ದು, ಏ.11ರಿಂದ ಮೌಲ್ಯಮಾಪನ ಪ್ರಕ್ರಿಯೆ ಕಾರ್ಯಗಳು ಶುರುವಾಗಲಿವೆ. ರಾಜ್ಯಾದ್ಯಂತ ಸುಮಾರು 240ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ.
ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್ಡಿಪಿಐನ ನೂರಾರು ಕಾರ್ಯಕರ್ತರು ಹಾಗೂ ಮುಸ್ಲಿಂ ಸಮುದಾಯದವರು ಶುಕ್ರವಾರ ಪ್ರತಿಭಟನೆ ನಡೆಸಿದರು. ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ವಕ್ಫ್ ಮಸೂದೆ ಅಸಂವಿಧಾನಿಕ.
ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ಬೆಳಗಾವಿಯ ಸುವರ್ಣ ಸೌಧದ ಅವರಣದಲ್ಲಿ ಪ್ರತಿಭಟನೆ ನಡೆಸಿದ್ದ ಹೋರಾಟಗಾರರ ಮೇಲೆ ಲಾಠಿ ಪ್ರಹಾರ ನಡೆದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ
ತನ್ನ ಮೇಲೆ ರಾಜಕೀಯ ಪ್ರೇರಿತ ಎಫ್ಐಆರ್ ದಾಖಲಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಕೊಡಗು ಮೂಲದ ಬಿಜೆಪಿ ಕಾರ್ಯಕರ್ತನೊಬ್ಬ ತಾನು ಕೆಲಸ ಮಾಡುತ್ತಿದ್ದ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಮುಂಜಾನೆ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರು. ಹಗರಣದ ಸಂಬಂಧ ಜಾರಿ ನಿರ್ದೇಶನಾಲಯ(ಇ.ಡಿ) ಅಧಿಕಾರಿಗಳು ಬೆಂಗಳೂರು ಮತ್ತು ಶಿವಮೊಗ್ಗ ಸೇರಿ 10 ಸ್ಥಳಗಳ ಮೇಲೆ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.