ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರು. ಹಗರಣದ ಸಂಬಂಧ ಜಾರಿ ನಿರ್ದೇಶನಾಲಯ(ಇ.ಡಿ) ಅಧಿಕಾರಿಗಳು ಬೆಂಗಳೂರು ಮತ್ತು ಶಿವಮೊಗ್ಗ ಸೇರಿ 10 ಸ್ಥಳಗಳ ಮೇಲೆ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ರನ್ ಹೊಳೆ ಹರಿದ ಶುಕ್ರವಾರದ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 12 ರನ್ ವೀರೋಚಿತ ಸೋಲನುಭವಿಸಿದೆ. ಬೌಲಿಂಗ್ ಬಳಿಕ ಬ್ಯಾಟಿಂಗ್ನಲ್ಲೂ ಫೇಲಾದ ಮುಂಬೈ ಟೂರ್ನಿಯಲ್ಲಿ 3ನೇ ಸೋಲುಂಡಿತು. ರಿಷಭ್ ಪಂತ್ ನಾಯಕತ್ವದ ಲಖನೌ 4 ಪಂದ್ಯಗಳಲ್ಲಿ 2ನೇ ಗೆಲುವು ದಾಖಲಿಸಿತು.
ಈ ಬಾರಿ ಐಪಿಎಲ್ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿರುವ ಮುಂಬೈ ಇಂಡಿಯನ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡಗಳು ಶುಕ್ರವಾರ ಪರಸ್ಪರ ಮುಖಾಮುಖಿಯಾಗಲಿವೆ.
ಭರ್ಜರಿ ವಾಕ್ಸಮರದ ಬಳಿಕ ಸಂಸತ್ತಿನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ‘ಉಮೀದ್’ ಅಂಗೀಕಾರವಾಗಿದೆ. ಈ ಮಸೂದೆಯನ್ನು ರೂಪಿಸಿದ್ದು ಏಕೆ? ಅದರ ಪ್ರಯೋಜನ ಏನು? ಹಳೆ ಕಾಯ್ದೆಗೂ ಹೊಸ ಶಾಸನಕ್ಕೂ ಏನು ವ್ಯತ್ಯಾಸ ಎಂಬುದರ ಕಿರು ಚಿತ್ರಣ ಇಲ್ಲಿದೆ.
ಲೋಕಸಭೆಯಲ್ಲಿ ಐತಿಹಾಸಿಕ ಮಸೂದೆಗೆ ಅಂಗೀಕಾರ ಲಭಿಸಿದ್ದು, ಕಾಂಗ್ರೆಸ್ ಪಕ್ಷ ವಕ್ಫ್ ಕಾಯ್ದೆ ತಿದ್ದುಪಡಿಯನ್ನು ರಾಜ್ಯ ಮತ್ತು ದೇಶದಲ್ಲಿ ವಿರೋಧಿಸುವುದು ಒಂದು ದುರಂತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಸಾರ್ವಕಾಲಿಕ ದಾಖಲೆ ಪ್ರಮಾಣದಲ್ಲಿ ಹೆಚ್ಚಳ ಆಗುತ್ತಿದ್ದು, ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಕೆ ಆಗದ ಹಿನ್ನೆಲೆಯಲ್ಲಿ ಎಸ್ಕಾಂಗಳು ಅನಿಯಮಿತ ವಿದ್ಯುತ್ ಕಡಿತದ ಮೊರೆ ಹೋಗಿವೆ. ಪರಿಣಾಮ ರಾಜ್ಯಾದ್ಯಂತ ವಿದ್ಯುತ್ ಕಣ್ಣಾಮುಚ್ಚಾಲೆ ಶುರುವಾಗಿದೆ
ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತ ನಟಿ ರನ್ಯಾ ರಾವ್ ಕಳೆದ ನಾಲ್ಕು ತಿಂಗಳಲ್ಲಿ ಸುಮಾರು 38.39 ಕೋಟಿ ರು. ಹಣವನ್ನು ಹವಾಲಾ ಮೂಲಕ ದುಬೈಗೆ ವರ್ಗಾಹಿಸಿ 49.6 ಕೆ.ಜಿ. ಚಿನ್ನ ಖರೀದಿಸಿದ್ದರು.
ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿರುವ ಬೆನ್ನ ಹಿಂದೆಯೇ ಅವರ ಬಂಡಾಯ ಬಣದಲ್ಲಿ ಗುರುತಿಸಿಕೊಂಡಿರುವ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಮುಂಬೈನಲ್ಲಿ ಭೇಟಿಯಾಗಿ ರಾಜ್ಯ ಬಿಜೆಪಿಯಲ್ಲಿನ ಬೆಳವಣಿಗೆ ಕುರಿತು ಚರ್ಚೆ ನಡೆಸಿದ್ದಾರೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಬಳಿಕ ಡೆತ್ನೋಟ್ ಬರೆದಿಟ್ಟು ಜೆಸ್ಕಾಂ ಎಂಜಿನಿಯರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಕಲಬುರಗಿ ನಗರದ ಅಪಾರ್ಟ್ಮೆಂಟ್ವೊಂದರಲ್ಲಿ ನಡೆದಿದೆ.