ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮುಸ್ಲಿಂ ಮೀಸಲು ವಿಚಾರವಾಗಿ ‘ಸಂವಿಧಾನ ಬದಲು’ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ
ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿ ಮೇಲೆ ನಿಂತಿರಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸ್ವೀಕರಿಸದೆ, ಅರ್ಹರ ಸಾಧನೆ ಗುರುತಿಸಿ ಪ್ರಶಸ್ತಿಯನ್ನು ಮನೆಬಾಗಿಲಿಗೆ ಕೊಂಡೊಯ್ದು ನೀಡುವಂತಹ ಹೊಸ ಅಧ್ಯಾಯ ಆರಂಭಿಸುವ ಚಿಂತನೆಯಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್.ತಂಗಡಗಿ ಹೇಳಿದರು.
ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ಬಳಿ ಆರು ಎಕರೆ ಸರ್ಕಾರಿ ಜಮೀನು ಒತ್ತುವರಿ ಆರೋಪ ಸಂಬಂಧ ಸ್ಥಳೀಯ ತಹಶೀಲ್ದಾರ್ ನೀಡಿರುವ ನೋಟಿಸ್ ಪ್ರಶ್ನಿಸಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ
ಒಳಮೀಸಲಾತಿ ಸಂಬಂಧ ರಚಿಸಲಾಗಿರುವ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ವರದಿ ನೀಡಿ ಒಳಮೀಸಲಾತಿಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವವರೆಗೆ ಯಾವುದೇ ರೀತಿಯ ನೇಮಕಾತಿ, ಬಡ್ತಿ ಸೇರಿ ಇನ್ನಿತರ ಪ್ರಕ್ರಿಯೆಗಳನ್ನು ನಡೆಸದಿರಲು ಸರ್ಕಾರ ನಿರ್ಧರಿಸಿದೆ.
ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ದಾಖಲೆ ಮಟ್ಟದಲ್ಲಿ ಏರಿಕೆಯಾಗಿದ್ದು, ಕಳೆದ ಎರಡು ತಿಂಗಳಲ್ಲಿ ಗರಿಷ್ಠ ಬೇಡಿಕೆ 18 ಸಾವಿರ ಮೆ.ವ್ಯಾಟ್ ದಾಟಿದೆ. ಏಪ್ರಿಲ್ ತಿಂಗಳ ವೇಳೆಗೆ 18,500 ರಿಂದ 19,000 ಮೆ.ವ್ಯಾಟ್ವರೆಗೂ ಏರಿಕೆಯಾಗುವ ಸಾಧ್ಯತೆ
ರಾಜ್ಯಾದ್ಯಂತ ಸೋಮವಾರವೂ ಮುಂಗಾರು ಪೂರ್ವ ಅಕಾಲಿಕ ಮಳೆ ಹಾವೇರಿ, ಗದಗ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರವಾಗಿ ಸುರಿದಿದೆ.
ದುಬೈನಿಂದ ನಗರಕ್ಕೆ ಚಿನ್ನ ಅಕ್ರಮ ಸಾಗಣೆ ಪ್ರಕರಣದಲ್ಲಿ ಜಾಮೀನು ಕೋರಿ ನಟಿ ರನ್ಯಾ ರಾವ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರಕ್ಕೆ ಮುಂದೂಡಿದೆ.
ದೆಹಲಿಯಿಂದ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಏರ್ ಇಂಡಿಯಾ ವಿಮಾನ ಇನ್ನೇನು ರನ್ವೇಯಲ್ಲಿ ಇಳಿಯಬೇಕು ಎನ್ನುವಾಗ ಮಾರ್ಗ ಬದಲಿಸಿ ಚೆನ್ನೈನಲ್ಲಿ ಇಳಿದಿದೆ.
ಸ್ವಂತ ಶ್ರಮದ ಹಣ ಮತ್ತು ಸರ್ಕಾರದ ಪಂಚ ಗ್ಯಾರಂಟಿ ಮತ್ತು ಇತರ ಯೋಜನೆಗಳ ಮೂಲಕ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದೇನೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು.