ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡಗಳನ್ನು ವಿಪತ್ತು ನಿರ್ವಹಣೆ ಕಾಯ್ದೆ ಅಡಿ ತೆರವುಗೊಳಿಸಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಿಬಿಎಂಪಿಯ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.
ಹೋಟೆಲ್ ಉದ್ಯಮ ದೇಶದ ಪ್ರವಾಸೋದ್ಯಮ ಮತ್ತು ಆರ್ಥಿಕತೆಗೆ ಗಮನಾರ್ಹ ಕೊಡುಗೆ ನೀಡುತ್ತಿದ್ದು, 30 ಲಕ್ಷಕ್ಕೂ ಅಧಿಕ ಜನರಿಗೆ ಉದ್ಯೋಗ ಕಲ್ಪಿಸಿದೆ ಎಂದು ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಶ್ಲಾಘಿಸಿದರು.
ರಿಸರ್ವ್ ಬ್ಯಾಂಕ್ನಿಂದ ತಿರಸ್ಕೃತಗೊಂಡ 50 ಲಕ್ಷ ರು. ನೋಟನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ ನಂಬಿಸಿ ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರಿಗೆ ನಂಬಿಸಿ ಹಣ ಸುಲಿಗೆ ಮಾಡಿದ್ದ ಕಾನ್ಸ್ಟೇಬಲ್ ಹಾಗೂ ಆತನ ಸಹಚರರನ್ನು ಪೀಣ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೂರು ದಿನಗಳ ಹಿಂದೆ ನಡೆದಿದ್ದ ಬಟ್ಟೆ ವ್ಯಾಪಾರಿ ಪತ್ನಿ ಲತಾ ಕೊಲೆ ಪ್ರಕರಣ ಸಂಬಂಧ ಮೃತಳ ಸೋದರ ಸಂಬಂಧಿ ಸೇರಿದಂತೆ ಇಬ್ಬರನ್ನು ಕಾಟನ್ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಗರದಲ್ಲಿ ನಾಡ ಪಿಸ್ತೂಲ್ ಮಾರಾಟಕ್ಕೆ ಯತ್ನಿಸಿದ್ದ ಕುಖ್ಯಾತ ರೌಡಿ ಸೇರಿದಂತೆ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸಾಕ್ಷ್ಯಧಾರಗಳ ಕೊರತೆ ಹಿನ್ನೆಲೆಯಲ್ಲಿ ರಾಜ್ಯ ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರ ಮೇಲಿನ ಹನಿಟ್ರ್ಯಾಪ್ ಯತ್ನ ಆರೋಪ ಕುರಿತ ವಿಚಾರಣೆಯನ್ನು ಮುಕ್ತಾಯಗೊಳಿಸಿ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಲು ಅಪರಾಧ ತನಿಖಾ ಇಲಾಖೆ (ಸಿಐಡಿ) ಸಿದ್ಧತೆ ನಡೆಸಿದೆ.
ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಇರಾಕೋಡಿಯಲ್ಲಿ ಮಂಗಳವಾರ ನಡೆದ ಪಿಕಪ್ ಚಾಲಕ ಅಬ್ದುಲ್ ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಕರಾವಳಿ ಭಾಗದಲ್ಲಿ ತಣಿಯದ ಕೋಮು ದ್ವೇಷದ ಹತ್ಯಾ ಸರಣಿಗೆ ಕಡಿವಾಣ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರವು, ಮಂಗಳೂರು ಪೊಲೀಸ್ ಆಯುಕ್ತ ಸೇರಿ ಮೂವರು ಐಪಿಎಸ್ ಅಧಿಕಾರಿಗಳನ್ನು ದಿಢೀರ್ ಗುರುವಾರ ವರ್ಗಾಯಿಸಿದೆ.
ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರುನುಮ್ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಕ್ಷಮೆಯಾಚಿಸುವಂತೆ ವಿಧಾನ ಪರಿಷತ್ ಬಿಜೆಪಿ ಸದಸ್ಯ ಎನ್.ರವಿಕುಮಾರ್ಗೆ ಹೈಕೋರ್ಟ್ ತಾಕೀತು ಮಾಡಿದೆ.
ಆರ್ಸಿಬಿ ತನ್ನ 18 ವರ್ಷಗಳ ಕಪ್ ಗೆಲುವಿನ ಆಸೆ ಈಡೇರಿಸಲು ಇನ್ನೊಂದೇ ಮೆಟ್ಟಿಲು ಹತ್ತಬೇಕಿದೆ. ‘ಈ ಸಲ ಕಪ್ ನಮ್ದೇ’ ಎನ್ನುತ್ತಿದ್ದ ಅಭಿಮಾನಿಗಳ ಸುದೀರ್ಘ ಕಾಲದ ಕನಸು ನನಸಾಗಲು ಆರ್ಸಿಬಿ ಗೆಲ್ಲಬೇಕಿರುವುದು ಇನ್ನೊಂದು ಪಂದ್ಯ ಮಾತ್ರ. ಅದು ಈ ಬಾರಿಯ ಫೈನಲ್ ಪಂದ್ಯ.