ಹೊಂಬಾಳೆ ಫಿಲಂಸ್ ಜೊತೆ ಬಾಲಿವುಡ್ ನಟ ಹೃತಿಕ್ ರೋಷನ್ ಕೈ ಜೋಡಿಸಿದ್ದಾರೆ. ಇವರ ಕಾಂಬಿನೇಷನ್ನಲ್ಲಿ ಬಿಗ್ ಬಜೆಟ್ ಆ್ಯಕ್ಷನ್ ಸಿನಿಮಾ ಸಿದ್ಧಗೊಳ್ಳುತ್ತಿದೆ.
ಇಂದು 18ನೇ ಆವೃತ್ತಿ ಐಪಿಎಲ್ನ ಮೊದಲ ಕ್ವಾಲಿಫೈಯರ್: ಅಗ್ರ-2 ತಂಡಗಳ ನಡುವೆ ಸೆಣಸಾಟ । ಗೆದ್ದ ತಂಡ ನೇರವಾಗಿ ಫೈನಲ್ಗೆ
ಸೋತ ತಂಡಕ್ಕಿದೆ ಫೈನಲ್ಗೇರಲು ಮತ್ತೊಂದು ಅವಕಾಶ । 2016ರ ಬಳಿಕ ಮತ್ತೆ ಫೈನಲ್ ಪ್ರವೇಶಿಸುತ್ತಾ ರಾಯಲ್ ಚಾಲೆಂಜರ್ಸ್?
ಕನ್ನಡ ಮತ್ತು ಇತರ ದ್ರಾವಿಡ ನುಡಿಗಳ ಶಬ್ದಕೋಶ ಮತ್ತು ವ್ಯಾಕರಣಗಳ ಮೇಲೆ ಸಂಸ್ಕೃತದ ಪ್ರಭಾವವಿದೆ ಎಂಬುದು ನಿಜ. ಅಂದಮಾತ್ರಕ್ಕೆ ಕನ್ನಡ ಹುಟ್ಟಿದ್ದು ಸಂಸ್ಕೃತದಿಂದ ಅಲ್ಲ.
ಬಿಬಿಎಂಪಿಯ ಮಳೆಗಾಲದ ಸಿದ್ಧತೆಯ ವಾಸ್ತವವನ್ನು ಮೇ ತಿಂಗಳ ಬೇಸಿಗೆ ಕಾಲದ ಮಳೆಯೇ ಬಟಾ ಬಯಲು ಮಾಡಿದೆ. ನಗರದ ಹಲವು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿ ಜಲಸಾರಿಗೆ ಶುರುವಾಗಿದ್ದು, ಪ್ರಾಣಾಪಾಯ ನಷ್ಟ-ಕಷ್ಟಗಳ ಬಗ್ಗೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ
ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ಅವರನ್ನು ಪಾಕಿಸ್ತಾನಿ ಎಂದಿರುವ ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯಸಚೇತಕ ಎನ್. ರವಿಕುಮಾರ್ ವಿರುದ್ಧ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರಿಗೆ ದೂರು ನೀಡಲು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯರು ನಿರ್ಧರಿಸಿದ್ದಾರೆ.
ಬೆಂಗಳೂರಿನಲ್ಲಿ ಭೂಮಿ ಬೆಲೆ ಹೆಚ್ಚಾಗಿರುವುದರಿಂದ ಎಲ್ಲರೂ ಬೆಂಗಳೂರಿನಲ್ಲೇ ಉದ್ದಿಮೆ ಆರಂಭಿಸುವ ಬದಲು ಆಯಾ ಜಿಲ್ಲೆಯವರು ಆಯಾ ಜಿಲ್ಲೆಗಳಲ್ಲೇ ಕೈಗಾರಿಕೆ ಪ್ರಾರಂಭಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಳೆಪೀಡಿತ ಪ್ರದೇಶಗಳಲ್ಲಿ ಭೂ ಕುಸಿತ ಹಾಗೂ ಹಾನಿಗೊಳಗಾಗದವರಿಗೆ ತುರ್ತು ಪರಿಹಾರಕ್ಕೆ ತಕ್ಷಣ ಒಂದು ಸಾವಿರ ಕೋಟಿ ರು. ಅನುದಾನ ಬಿಡುಗಡೆಗೊಳಿಸಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.
ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಒಳಭಾಗದಲ್ಲಿ ಮಳೆ ಸ್ವಲ್ಪ ಮಟ್ಟಿಗೆ ತಗ್ಗಿದೆ. ಆದರೆ ಉಡುಪಿಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಕೆಲವೆಡೆ ಅಣೆಕಟ್ಟೆಗಳು ತುಂಬಿವೆ. ವಿದ್ಯುತ್ ತಂತಿ ಸ್ಪರ್ಶಿಸಿ ಮಹಿಳೆ ಸಾವನ್ನಪ್ಪಿದ್ದಾರೆ.
‘ಡೆವಿಲ್’ ಚಿತ್ರದ ಚಿತ್ರೀಕರಣಕ್ಕೆ ವಿದೇಶಕ್ಕೆ ತೆರಳಲು ಜೂ.1ರಿಂದ 25ರವರೆಗೆ ವಿದೇಶಕ್ಕೆ ತೆರಳಲು ಅನುಮತಿ ನೀಡುವಂತೆ ಕೋರಿ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ನಟ ದರ್ಶನ್ ಸಲ್ಲಿಸಿರುವ ಅರ್ಜಿ ಕುರಿತು ನಗರದ 64ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮೇ 30ರಂದು ಆದೇಶ ನೀಡಲಿದೆ.
: ಮುಂಬೈ ಇಂಡಿಯನ್ಸ್ ವಿರುದ್ಧ ನಿರ್ಣಾಯಕ ಪಂದ್ಯದಲ್ಲಿ 7 ವಿಕೆಟ್ ಭರ್ಜರಿ ಗೆಲುವು ಸಾಧಿಸಿದ ಪಂಜಾಬ್ ಕಿಂಗ್ಸ್, ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.