ಸಂಸದ ಪ್ರಜ್ವಲ್ ರೇವಣ್ಣ ಕಾರು ಚಾಲಕ ಕಾರ್ತಿಕ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜಗಾಗಿದ್ದು, ಪ್ರಜ್ವಲ್ ಮೊಬೈಲ್ನಲ್ಲಿ ಎರಡು ಸಾವಿರಕ್ಕೂ ಹೆಚ್ಚು ಅಶ್ಲೀಲ ಫೋಟೋಗಳು ಇದ್ದವು ಎಂಬುದಾಗಿ ಹೇಳಿಕೆ ನೀಡಿದ್ದಾರೆ.
ಚಿನ್ನದ ಕಳ್ಳಸಾಗಣೆ ಆರೋಪದಲ್ಲಿ ಜೈಲಿನಲ್ಲಿರುವ ನಟಿ ರನ್ಯಾ ರಾವ್ ವಿವಾಹದ ಸಂದರ್ಭದಲ್ಲಿ ಪರಮೇಶ್ವರ್ ‘ಗಿಫ್ಟ್’ ನೀಡಿರಬಹುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿ ಸರ್ಕಾರ ಜಾರಿಗೊಳಿಸಿದ್ದ ನೋಟಿಸ್ಗೆ ತಡೆಯಾಜ್ಞೆ ನೀಡಿ ಕೇಂದ್ರ ಆಡಳಿತಾತ್ಮಕ ನ್ಯಾಯಾಧಿಕರಣ (ಸಿಎಟಿ) ಮಧ್ಯಂತರ ಆದೇಶ ಮಾಡಿದೆ.
ಕಾಲೇಜು ಶಿಕ್ಷಣ ಇಲಾಖೆಯು 2025ನೇ ಸಾಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟಿಸಿದೆ.
ನ್ಯಾಯದಾನ ಪದ್ಧತಿಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ದೇಶದಲ್ಲಿಯೇ ಮೊದಲ ಬಾರಿ ರಾಜ್ಯವು ದಿಟ್ಟ ಹೆಜ್ಜೆ ಇಟ್ಟಿದ್ದು, ಬಡ ಕಕ್ಷಿದಾರರಿಗೆ ಶೀಘ್ರ ನ್ಯಾಯ ದೊರಕಿಸಲು ಸಿವಿಲ್ ಪ್ರಕ್ರಿಯಾ ಸಂಹಿತೆ (ಸಿಪಿಸಿ) ಕಾನೂನು ಜಾರಿಗೊಳಿಸಲಾಗುತ್ತಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಇನ್ನೂ ಆರು ದಿನ ಮುಂದುವರಿಯಲಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಮಂಗಳವಾರ ರೆಡ್ ಅಲರ್ಟ್ ಹಾಗೂ ಜೂನ್ 1ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಮೆಟ್ರೋ ಕಾಮಗಾರಿಯಿಂದ ಆಗುತ್ತಿರುವ ಸಂಚಾರ ದಟ್ಟಣೆ ನಿವಾರಿಸಲು ಮುಖ್ಯ ರಸ್ತೆ ಹಾಗೂ ಸರ್ವೀಸ್ ರಸ್ತೆ ನಡುವಣ ರಸ್ತೆ ವಿಭಜಕ (ಡಿವೈಡರ್) ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆ
ಬೆಂಗಳೂರಿನಲ್ಲಿ ಕಸದ ಸೆಸ್ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ. ಇಡೀ ಬೆಂಗಳೂರನ್ನು ಸರ್ಕಾರ ದುಬಾರಿ ಮಾಡಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಂಗಾರು ಪೂರ್ವ ಮತ್ತು ಮುಂಗಾರು ಮಳೆಯ ಅಬ್ಬರದಿಂದಾಗಿ ಬೆಂಗಳೂರಿನಲ್ಲಿ ಮೇ ತಿಂಗಳ ದಾಖಲೆಯ 307.9 ಮಿಮೀ ಮಳೆಯಾಗಿದೆ.
ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯನ್ನಾಗಿ ಡಾ.ಬಿ.ಕೆ.ಮೀರಾ ಅವರನ್ನು ನೇಮಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.