ರಾಜ್ಯದಲ್ಲಿ ಉತ್ತಮ ರಾಜಕಾರಣಿಗಳನ್ನು ತಯಾರು ಮಾಡುವ ದೃಷ್ಟಿಯಿಂದ ರಾಜಕೀಯ ಕಾಲೇಜು ಆರಂಭಿಸುವ ಚಿಂತನೆ ನಡೆಸಿರುವುದಾಗಿ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ.
ಸದನದಿಂದ ಆರು ತಿಂಗಳ ಕಾಲ ಅಮಾನತಾಗಿದ್ದ 18 ಮಂದಿ ಬಿಜೆಪಿ ಶಾಸಕರ ಅಮಾನತು ಹಿಂಪಡೆದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.
ಸಾಧನೆ ಸಮಾವೇಶದ ಹೆಸರಲ್ಲಿ ಜನತೆಯ ವೇದನೆ ಸಮಾವೇಶ ಮಾಡಬಾರದು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ
ಇದೇ ಮೇ 12ರಂದು ಹೊರಡಿಸಿರುವ ಸರ್ಕಾರದ ವರ್ಗಾವಣೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಹಾಗೂ ಪ್ರಮುಖ ಏಳು ಆಕ್ಷೇಪಣೆಗಳು ಉದ್ಭವಿಸದಂತೆ ಎಚ್ಚರ ವಹಿಸಿ ವರ್ಗಾವಣೆ ಆದೇಶ ಮಾಡುವಂತೆ ಎಲ್ಲ ಇಲಾಖೆಗಳ ಕಾರ್ಯದರ್ಶಿಗಳು/ಮುಖ್ಯಸ್ಥರಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಆದೇಶಿಸಿದ್ದಾರೆ.
ತೀವ್ರ ಮಾತಿನ ಚಕಮಕಿ ನಡುವೆ ಬೆಂಗಳೂರು ಹಾಲು ಒಕ್ಕೂಟ ನಿಯಮಿತದ (ಬಮುಲ್) ಒಂಬತ್ತು ನಿರ್ದೇಶಕ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಏಳು ಸ್ಥಾನ ಗಳಿಸಿ ಪಾರಮ್ಯ ಸಾಧಿಸಿದ್ದಾರೆ.
ಖಾಸಗಿ ಲೇಔಟ್ಗೆ ರಸ್ತೆ ನಿರ್ಮಿಸಲು ಮತ್ತು ಅಕ್ರಮ ಕಲ್ಲು ಗಣಿಗಾರಿಕೆ ನಡೆಸಲು ಒತ್ತುವರಿ ಮಾಡಿಕೊಂಡಿದ್ದ ಸರ್ಕಾರಿ ಗೋಮಾಳ ಜಮೀನು ಸೇರಿದಂತೆ ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ 74.98 ಕೋಟಿ ರು. ಮೌಲ್ಯದ 19.3 ಎಕರೆ ಜಮೀನನನ್ನು ನಗರ ಜಿಲ್ಲಾಡಳಿತ ವಶಕ್ಕೆ ಪಡೆದಿದೆ.
ತನ್ನ ಪತ್ನಿಯನ್ನು ಮತ್ತೆ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕಕ್ಕೆ ಮರು ನೇಮಕ ಮಾಡಲಿಲ್ಲ ಎಂದು ಆಕ್ರೋಶದಿಂದ ಪಕ್ಷದ ಕಚೇರಿಗೆ ಪತಿ ಬೆಂಕಿ ಹಾಕಿದ್ದಕ್ಕೆ ಪತ್ನಿಗೆ ಕೆಪಿಸಿಸಿ ಶಿಕ್ಷೆ ನೀಡಿದೆ. ಮಾಜಿ ಅಧ್ಯಕ್ಷೆ ಮಂಜುಳಾ ಗೂಳಿ ಅವರನ್ನು ಅಮಾನತು ಮಾಡಿ ಆದೇಶಿಸಲಾಗಿದೆ.
ವಕೀಲಿಕೆ ನಡೆಸಲು ಕರ್ನಾಟಕ ವಕೀಲರ ಪರಿಷತ್ನಲ್ಲಿ ಸನ್ನದು ನೋಂದಣಿ ಮಾಡಿಕೊಂಡ ನಂತರ ನ್ಯಾಯಾಂಗ ಸೇರಿ ಸರ್ಕಾರದ ವಿವಿಧ ಇಲಾಖೆಯಲ್ಲಿ ಉದ್ಯೋಗಕ್ಕೆ ಸೇರಿರುವ ಒಟ್ಟು 830 ಜನ ತಮ್ಮ ಸನ್ನದು ಅಮಾನತು ಪಡಿಸಿಕೊಂಡಿದ್ದಾರೆ.
‘ಸುವರ್ಣ ಶಿಕ್ಷಣ ಮೇಳ’ ಆಯೋಜನೆಯಿಂದ ಒಂದೇ ಸೂರಿನಡಿ ವಿದ್ಯಾರ್ಥಿಗಳು, ಪೋಷಕರಿಗೆ ಶಿಕ್ಷಣ ಸಂಸ್ಥೆಗಳ ಮಾಹಿತಿ ಸಿಗುತ್ತಿದೆ ಎಂದು ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರೀತಿಸಿ ಮದುವೆಯಾದ ಮೂರು ತಿಂಗಳಿಗೆ ಪತಿ ಹಾಗೂ ಆತನ ಕುಟುಂಬದ ಸದಸ್ಯರು ವರದಕ್ಷಿಣೆ ಕಿರುಕುಳ ನೀಡಿ ಮನೆಯಿಂದ ಹೊರ ಹಾಕಿದ್ದಾರೆ