ಸಹ ನಟಿ ಮೇಲೆ ಅತ್ಯಾಚಾರ ಆರೋಪದಡಿ ನಟ ಮನು ಮಡೇನೂರು ಬಂಧನ ಪ್ರಕರಣದ ತನಿಖೆ ಮುಂದುವರೆದಿದ್ದು, ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರು ಸಂತ್ರಸ್ತೆ ಹಾಗೂ ಆರೋಪಿಯ ತಲಾ ಎರಡು ಮೊಬೈಲ್ಗಳನ್ನು ಜಪ್ತಿ ಮಾಡಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ(ಎಫ್ಎಸ್ಎಲ್) ಕಳುಹಿಸಿದ್ದಾರೆ.
ಡ್ರೋನ್ ಸರ್ವೇ ಮಾಹಿತಿ ಆಧಾರಿಸಿ ತಪ್ಪು ಮಾಹಿತಿ ನೀಡಿ ಆಸ್ತಿ ತೆರಿಗೆ ವಂಚಿಸಿದ ನಾಲ್ಕು ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ನೋಟಿಸ್ ನೀಡಲು ಪಾಲಿಕೆ ಮುಂದಾಗಿದೆ.
ರಾಜ್ಯದಲ್ಲಿ ಭಾನುವಾರ ಮತ್ತೆ 9 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಎಲ್ಲಾ ಸೋಂಕು ಪ್ರಕರಣ ಬೆಂಗಳೂರು ನಗರದಲ್ಲೇ ವರದಿಯಾಗಿದೆ. ತನ್ಮೂಲಕ ರಾಜ್ಯದಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.
ಫಾರ್ಮ್ ಹೌಸ್ನಲ್ಲಿ ರೇವ್ ಪಾರ್ಟಿ ಮಾಡಿ ಮಾದಕ ವಸ್ತು, ಮದ್ಯದ ನಶೆಯಲ್ಲಿ ತೇಲುತ್ತಿದ್ದ ಯುವಕ- ಯುವತಿಯರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಸಮೀಪ ನಡೆದಿದೆ.
ರೋಹಿತ್ ಶರ್ಮಾ ನಿವೃತ್ತಿ ಬಳಿಕ ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ನಾಯಕ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ
ರಾಜ್ಯ ವಿಧಾನಸಭೆಗೆ ಈಗ ಚುನಾವಣೆ ನಡೆದರೆ ಬಿಜೆಪಿ 150-160 ಸ್ಥಾನ ಗೆಲ್ಲುತ್ತೆ ಎಂದು ಖಾಸಗಿ ಸಮೀಕ್ಷೆಯೊಂದು ಹೇಳಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಪ್ರತಿಭಟನೆ ಮಾಡಬಾರದು ಎಂಬ ರೂಲ್ಸ್ ಇದೆಯೇ? ಬಿಜೆಪಿಯವರ ಜೊತೆ ಎಷ್ಟು ಜನ ಗೂಂಡಾಗಳಿದ್ದಾರೆ ಎಂಬ ಲಿಸ್ಟ್ ಕೊಡಬೇಕೇ? ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ
ಮತ್ತೆ ವಾಯುರೂಪದಲ್ಲಿ ಬಾಧೆ ಅಪ್ಪಳಿಸಲಿದ್ದು, ಕೋವಿಡ್ ಮಹಾಮಾರಿ ಬೇರೆ ಬೇರೆ ರೂಪದಲ್ಲಿ 5 ವರ್ಷ ಕಾಡಲಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.
ಅಬಕಾರಿ ಸನ್ನದುಗಳ ನವೀಕರಣ ಶುಲ್ಕ ಭಾರೀ ಪ್ರಮಾಣದಲ್ಲಿ ಹೆಚ್ಚಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ತಿಂಗಳಾಂತ್ಯದೊಳಗೆ ಒಂದು ದಿನ ಮದ್ಯ ಮಾರಾಟ ಬಂದ್ ಮಾಡಲು ಮದ್ಯ ಮಾರಾಟಗಾರರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಇಲ್ಲಿನ ವಸಂತನಗರದ ರೈಲ್ವೆ ಕಾಲನಿಯಲ್ಲಿ ವಾಣಿಜ್ಯ ಉದ್ದೇಶಕ್ಕೆ 368 ಮರಗಳಿಗೆ ಕೊಡಲಿ ಹಾಕುವುದನ್ನು ಪರಿಸರ ಪ್ರೇಮಿಗಳು ತೀವ್ರವಾಗಿ ವಿರೋಧಿಸಿದ್ದು, ಈ ಯೋಜನೆಯನ್ನು ಬೇರೆಡೆ ಸ್ಥಳಾಂತರಿಸಲು ಒತ್ತಾಯಿಸಿದ್ದಾರೆ.