ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲ ತಾಪದಿಂದ ಇನ್ನೂ ಎರಡು ದಿನ ಉಷ್ಣ ಅಲೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೆಎಎಸ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡದ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ, ವೇದಿಕೆ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಈ ಸಲ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಪಂದ್ಯಗಳ ವೇಳಾಪಟ್ಟಿ ಅಂತಿಮಗೊಂಡಿದೆ. ಮಂಗಳವಾರ ದುಬೈನಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಸೆಣಸಾಡಲಿವೆ.
ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧ ಭಾನುವಾರದ ಪಂದ್ಯದಲ್ಲಿ ಕಣಕ್ಕಿಳಿದರು. ಈ ಮೂಲಕ 300 ಏಕದಿನ ಪಂದ್ಯ ಆಡಿದ ಭಾರತದ 7ನೇ ಹಾಗೂ ವಿಶ್ವದ 22ನೇ ಆಟಗಾರ ಎನಿಸಿಕೊಂಡರು. 463 ಪಂದ್ಯಗಳನ್ನಾಡಿರುವ ಸಚಿನ್, ವಿಶ್ವದಲ್ಲೇ ಅತಿ ಹೆಚ್ಚು ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದ ದಾಖಲೆ ಹೊಂದಿದ್ದಾರೆ.
ನನಗೆ ಇಂಥ ವೀಡಿಯೋ ಬೇಕು ಎಂದು ವಿಸ್ತೃತವಾಗಿ ಬರೆದುಕೊಟ್ಟರೆ ಸೋರಾ ನಮ್ಮ ಬೇಡಿಕೆಗೆ ಹತ್ತಿರವಾದಂತಹ ವಿಡಿಯೋ ಸೃಷ್ಟಿಸಿಕೊಡುತ್ತದೆ. ಈ ಮೊದಲು ನೀವು ಎಐ ಉಪಕರಣಗಳಿಂದ ಚಿತ್ರಗಳನ್ನು ಬರೆಸಿಕೊಂಡಿದ್ದರೆ ಇದು ಅದರ ಮುಂದುವರಿಕೆಯಷ್ಟೇ.
ಈಶ ಫೌಂಡೇಶನ್ನಲ್ಲಿ ನಡೆದ ಶಿವರಾತ್ರಿ ಉತ್ಸವದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸದ್ಗುರು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ವೇದಿಕೆ ಹಂಚಿಕೊಂಡ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಸಂಪುಟದ ಸಚಿವರಿಂದ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ.
ವಿಧಾನಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ಸದಸ್ಯ ಸಿ.ಟಿ.ರವಿ ನೀಡಿದ ಆಕ್ಷೇಪಾರ್ಹ ಹೇಳಿಕೆ ಪ್ರಕರಣವನ್ನು ವಿಧಾನಪರಿಷತ್ ನೈತಿಕ ಸಮಿತಿಗೆ ವಹಿಸಲಾಗಿದ್ದು, ವರದಿ ಬಂದ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ವೀರಶೈವ ಲಿಂಗಾಯತ ಸಮುದಾಯದ ಹೆಸರಲ್ಲಿ ಸಮಾವೇಶ ನಡೆಸುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಮಾವೇಶ ನಡೆಸದಂತೆ ಹಿತೈಷಿಗಳಿಗೆ ಮತ್ತು ಬೆಂಬಲಿಗರಿಗೆ ಸೂಚನೆ ನೀಡಿದ್ದಾರೆ.
ವಿಧಾನಮಂಡಲ ಅಧಿವೇಶನ ಮಾ.3 ರಿಂದ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಪ್ರತಿಪಕ್ಷಗಳನ್ನು ಸಮರ್ಥವಾಗಿ ಎದುರಿಸುವ ಕುರಿತು ಚರ್ಚಿಸಲು ಮಾ.4 ರಂದು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.
ಹಣಕಾಸು ವಂಚನೆ ಆರೋಪ ಎದುರಿಸುತ್ತಿರುವ ವಿದ್ಯಾರ್ಥಿಯೊಬ್ಬನಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಿ ಪೊಲೀಸರು ವಾಟ್ಸಾಪ್ ಮೂಲಕ ಜಾರಿಗೊಳಿಸಿದ್ದ ನೋಟಿಸ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ.