ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ವಾಯುಭಾರ ಕುಸಿತವು, ಚಂಡಮಾರುತ ಸ್ವರೂಪ ಪಡೆದುಕೊಂಡು ಮಂಗಳವಾರ ಸಂಜೆ ಅಥವಾ ರಾತ್ರಿ ಗಂಟೆಗೆ 90/100 ಕಿ.ಮೀ. ವೇಗದಲ್ಲಿ ಆಂಧ್ರ ಕರಾವಳಿಗೆ ಅಪ್ಪಳಿಸಲಿದೆ.
ರಾಜ್ಯ ಸರ್ಕಾರ ಯಾವುದೇ ಬಿಪಿಎಲ್ ಕಾರ್ಡ್ ರದ್ದು ಮಾಡಲ್ಲ. ಆದರೆ, ಅವರು ಅನರ್ಹ ಆಗಿದ್ದರೆ ಎಪಿಎಲ್ ಕಾರ್ಡ್ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ಅಕ್ಕಿ ಬದಲಾಗಿ ಬೇರೆ ಬೇರೆ ಧಾನ್ಯ ಕೊಡಲು ಕರ್ನಾಟಕ ಸರ್ಕಾರ ತೀರ್ಮಾನ ಮಾಡಿದೆ.
ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಪ್ರಸಕ್ತ ವರ್ಷದಲ್ಲಿ ಮೂರನೇ ಬಾರಿಗೆ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗಿದ್ದು, ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಬ್ಬನ್ ಪಾರ್ಕ್ನಲ್ಲಿರುವ ಹೈಕೋರ್ಟ್ ಸ್ಥಳಾಂತರದ ಬಗ್ಗೆ ಸರ್ಕಾರ ಸ್ಥಳ ಪರಿಶೀಲಿಸಲಿದೆ. ಒಂದಷ್ಟು ಜನ ವಕೀಲರು ಭೇಟಿ ಮಾಡಿ ರೇಸ್ ಕೋರ್ಸ್ ಜಾಗ ಬಳಸಿಕೊಳ್ಳುವ ಬಗ್ಗೆ ತಿಳಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಬೆಂಗಳೂರಲ್ಲಿ 46 ಬಾವಿ ಹಾಗೂ ಕೆರೆಗಳ ಪುನರುಜ್ಜೀವನ ಮಾಡಿದ ಪರಿಸರ ಪ್ರೇಮಿ ಎಂಜಿನಿಯರ್ ಕಪಿಲ್ ಶರ್ಮಾ ಎಂಬುವರನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. 40 ಬಾವಿ ಮತ್ತು 6 ಕೆರೆ ಪುನರುಜ್ಜೀವನಗೊಳಿಸಿದ್ದಾರೆ.
ಕರ್ನೂಲ್ ಬಸ್ ಅಗ್ನಿ ಅವಘಡ ಹಿನ್ನೆಲೆ ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಬಸ್ಸುಗಳ ಸುರಕ್ಷತಾ ವ್ಯವಸ್ಥೆ ಆಡಿಟ್ ತಪಾಸಣೆ ನಡೆಸುವಂತೆ ಹಾಗೂ ನ್ಯೂನತೆ ಇದ್ದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಸಚಿವ ರಾಮಲಿಂಗಾರೆಡ್ಡಿ ಅವರು ಸೂಚಿಸಿದ್ದಾರೆ.
‘ಸರ್ಕಾರಕ್ಕೀಗ ಎರಡೂವರೆ ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಹೈಕಮಾಂಡ್ ಜೊತೆ ಚರ್ಚಿಸಿ, ಸಂಪುಟ ಪುನಾರಚನೆಗೆ ಮುಂದಾಗುವೆ’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೇ ಸಂಪುಟ ಪುನಾರಚನೆ ಕುರಿತು ಕಾಂಗ್ರೆಸ್ನಲ್ಲಿ ಬಿಸಿ ಬಿಸಿ ಚರ್ಚೆ ಶುರುವಾಗಿದೆ.
ಕಳೆದ ಐದು ದಶಕಗಳಿಗೂ ಹೆಚ್ಚು ಕಾಲ ನಾಟಕ ರಚನೆ, ರಂಗ ನಿರ್ದೇಶನದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಪ್ರಸನ್ನ ಅವರು ಸ್ವತಃ ಚಿತ್ರಕಲಾವಿದರು ಎಂಬುದು ಅನೇಕರಿಗೆ ಗೊತ್ತಿರಲಾರದು. ಅವರು ರಚಿಸಿದ ಚಿತ್ರಗಳ ಪ್ರದರ್ಶನ ಈ ತಿಂಗಳಾಂತ್ಯಕ್ಕೆ ಚಿತ್ರಕಲಾ ಪರಿಷತ್ನಲ್ಲಿ ನಡೆಯಲಿದೆ
ಕೆಲಸ, ಕೆರಿಯರ್ ಬದುಕಿನ ಬಹುಭಾಗವನ್ನು ಗುಳುಂ ಮಾಡುತ್ತಿರುವಾಗ ನಿದ್ರೆ ಅನ್ನೋದಿಲ್ಲಿ ಮರೀಚಿಕೆ. ಅದನ್ನೇ ಮುಖ್ಯವಾಗಿಟ್ಟುಕೊಂಡು ಸ್ಲೀಪ್ ಟೂರಿಸಂ ಭರ್ಜರಿ ಮೈಲೇಜ್ ಗಿಟ್ಟಿಸಿಕೊಳ್ಳುತ್ತಿದೆ. ಇಲ್ಲಿ ಸುತ್ತಾಟಕ್ಕಿಂತ ನಿದ್ರೆಗೆ, ರೆಸ್ಟ್ಗೆ, ಮನಸ್ಸಿನ ಫ್ರೆಶ್ನೆಸ್ಗೇ ಪ್ರಾಧಾನ್ಯತೆ.
"ಲೋಕೋಃ ಪುರುಷಸ್ಸಮಿತಿ" (ಚ.ಸಂ.) – ಮಾನವನ ದೇಹವು ಪ್ರಕೃತಿಯ ಪ್ರತಿಬಿಂಬ. ಪ್ರಕೃತಿಯ ಬದಲಾವಣೆಗಳು ದೇಹದೊಳಗೂ ಪ್ರತಿಫಲಿಸುತ್ತವೆ. ಆಯುರ್ವೇದವು “ದೇಹವು ಪ್ರಕೃತಿಯೊಂದಿಗೆ ಲಯ ಹೊಂದಿಕೊಂಡಿದೆ” ಎಂದು ಹೇಳುತ್ತದೆ