ಕೆಆರ್ಎಸ್ ಟಿಪ್ಪು ಸುಲ್ತಾನ್ ಕಟ್ಟಿಸಿದ್ದು ಎಂದು ನಾನೆಲ್ಲೂ ಹೇಳಿಲ್ಲ. ಕೆಆರ್ಎಸ್ ಅಣೆಕಟ್ಟು ನಿರ್ಮಿಸಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು. ನನ್ನ ಹೇಳಿಕೆಯನ್ನು ತಿರುಚಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ.
‘ನೌಕರರ ಬೇಡಿಕೆಯಂತೆ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ. ಕೇವಲ 14 ತಿಂಗಳ ಹಿಂಬಾಕಿ ನೀಡಲು ಸಿದ್ಧ’ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಆ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಮುಷ್ಕರ ನಡೆಸುವುದಾಗಿ ಘೋಷಿಸಿದರು.
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಕುರಿತು ನ್ಯಾ. ಎಚ್.ಎನ್. ನಾಗಮೋಹನ್ದಾಸ್ ಆಯೋಗದ ವರದಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಸಲ್ಲಿಕೆಯಾಗಿದ್ದು, ಆ.7ರಂದು ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡಿಸಿ ಜಾರಿ ಬಗ್ಗೆ ಸರ್ಕಾರ ತೀರ್ಮಾನ ಮಾಡಲಿದೆ.
ಎಲೆಕ್ಟ್ರಾನಿಕ್ ಸಿಟಿಯನ್ನು ಸಂಪರ್ಕಿಸುವ ಮೆಟ್ರೋ ಮಾರ್ಗ ಉದ್ಘಾಟನೆಗೆ ಇದೇ ತಿಂಗಳ 10ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರು ಬಿಜೆಪಿ ಆಯೋಜಿಸಿರುವ ಸಾರ್ವಜನಿಕ ಸಮಾವೇಶದಲ್ಲೂ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಸುಮಾರು ಅರ್ಧ ಕಿ.ಮೀ.ನಷ್ಟು ರೋಡ್ ಶೋ ಕೂಡ ನಡೆಸಲಿದ್ದಾರೆ.
ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರ ಮುಷ್ಕರವನ್ನು 1 ದಿನ ತಡೆ ಹಿಡಿಯುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಅದರ ಹೊರತಾಗಿಯೂ ಕೆಎಸ್ಸಾರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ, ಮಂಗಳವಾರ ಬೆಳಗ್ಗೆಯಿಂದಲೇ ಮುಷ್ಕರ ನಡೆಸುವುದಾಗಿ ಘೋಷಿಸಿದೆ.
ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿಕೆ ಬಗ್ಗೆ ಸುಪ್ರೀಂಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಅಂತಾರಾಷ್ಟ್ರೀಯ ವೈಜ್ಞಾನಿಕ ರಾಜತಾಂತ್ರಿಕತೆಯ ಮಹತ್ವಾಕಾಂಕ್ಷೆಯ ಹೊಸ ಅಧ್ಯಾಯದಲ್ಲಿ, ಭಾರತ ಮತ್ತು ಯುರೋಪಿಯನ್ ಒಕ್ಕೂಟದ ಸಂಶೋಧಕರು COMBAT ಡೆಂಘೀ ಯೋಜನೆಯಡಿಯಲ್ಲಿ ಕೈಜೋಡಿಸಿದ್ದಾರೆ.
ನಟ ಸುದೀಪ್ ಅವರ ಹೊಸ ಹೇರ್ ಸ್ಟೈಲ್ ಸಾಕಷ್ಟು ವೈರಲ್ ಆಗುತ್ತಿದೆ. ಮೊದಲ ಬಾರಿಗೆ ಹೀಗೆ ಕರ್ಲಿ ಹೇರ್ ಸ್ಟೈಲ್ನಲ್ಲಿ ಸುದೀಪ್ ಅವರು ಕಾಣಿಸಿಕೊಂಡಿದ್ದು, ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಈ ಹೊಸ ಲುಕ್ಕಿನ ಫೋಟೋಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ.
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ - -ಬೆಲ್ಲದ ಕಥೆ -ಕಲಬೆರಕೆ ಬೆಲ್ಲದ ವಿರುದ್ಧ ಕ್ರಾಂತಿ ಎಬ್ಬಿಸಿದ ಶಾಂಭವಿ ।
ಕ್ಯಾಮೆರಾ ನೋಡಿ ಮಾರ್ಷಲ್ಗಳ ಮುಂದೆ ಹೋಗಿ ನಿಂತ ಸದಸ್ಯರು ಛಾಯಾಗ್ರಾಹಕನೊಬ್ಬ, ಏನ್ರಿ ಮಾರ್ಷಲ್ಗಳು ಹೊತ್ತುಕೊಂಡು ಹೋಗುವಾಗ ಆ ಪರಿ ನಕ್ಕೊಂತ ಹೋದ್ರಿ.. ನಿಮ್ಮ ಫೋಟೋ ಬರೋದು ಡೌಟು ಎಂದು ಬಿಡೋದೆ!