‘ಇಬ್ಬರು ಪುತ್ರರನ್ನು ಹೊಂದಿದ ತಾಯಿಗೆ ತವರಿಗೆ ಕರೆಸಿ ಉಡಿತುಂಬಿ, ಹಸಿರು ಸೀರೆ ಉಡಿಸಿ, ಹಸಿರು ಬಳೆ ತೊಡೆಸಬೇಕು. ಇಲ್ಲದಿದ್ದರೆ ಕೆಡುಕಾಗಲಿದೆ’. ಹೀಗೊಂದು ಗಾಳಿಸುದ್ದಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಳೆದ ವಾರದಿಂದ ವದಂತಿಯಾಗಿದೆ
ಕಳೆದ ವರ್ಷ ಹುಬ್ಬಳಿಯಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಸಲ್ಲಿಸಿರುವ ಜಾಮೀನು ಅರ್ಜಿ ಸಂಬಂಧ ಇಂದು ತೀರ್ಪು ಪ್ರಕಟವಾಗಲಿದೆ.
ಸಾಧಾರಣವಾಗಿ ಲಿಂಬೆ ಹಣ್ಣು, ಅರಿಶಿಣ ಕುಂಕುಮ ಇಟ್ಟು ವಾಮಾಚಾರ ಮಾಡೋದು ಸಾಮಾನ್ಯ. ಆದರೆ ಬೆಳಗಾವಿಯಲ್ಲೊಂದು ಹೈಟೆಕ್ ವಾಮಾಚಾರ ಪ್ರಕರಣ ಬೆಳಕಿಗೆ ಬಂದಿದೆ.
ರೈತನ ಬ್ಯಾಂಕ್ ಖಾತೆಯಲ್ಲಿದ್ದ ಕೋಟ್ಯಂತರ ರುಪಾಯಿಯನ್ನು ಆನ್ಲೈನ್ ಮೂಲಕ ವಂಚಿಸಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆನರಾ ಬ್ಯಾಂಕ್ ಶಾಖೆಯಲ್ಲಿ ಜರುಗಿದೆ.
ನಗರದಲ್ಲಿ ಎರಡು ದಿನ ಅದ್ಧೂರಿಯಾಗಿ ನಡೆದ 19ನೇ ರಾಜ್ಯಮಟ್ಟದ ಸುಗಮ ಸಂಗೀತ ಸಮ್ಮೇಳನಕ್ಕೆ ಭಾನುವಾರ ತೆರೆ ಬಿತ್ತು.
ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಆ.5ರಂದು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಬಂದೋಬಸ್ತ್ ಕರ್ತವ್ಯಕ್ಕೆ 4,459 ಪೊಲೀಸರನ್ನು ನಿಯೋಜಿಸಲಾಗಿದೆ.
ಬೆಂಗಳೂರು ಉಪನಗರ ರೈಲು ಯೋಜನೆ (ಬಿಎಸ್ಆರ್ಪಿ) ಕಾಮಗಾರಿ ಗುತ್ತಿಗೆಯನ್ನು ಎಲ್ ಆ್ಯಂಡ್ ಟಿ ಕಂಪನಿ ರದ್ದುಪಡಿಸಿದೆ.
ಜೀವನ ಪರ್ಯಂತ ಜೈಲು ಶಿಕ್ಷೆಗೆ ಗುರಿಯಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಭಾನುವಾರ ಬೆಳಗ್ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಜಾ ಕೈದಿ ಸಂಖ್ಯೆ 15528 ನೀಡಲಾಗಿದೆ.
ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಕೃಷ್ಣರಾಜಸಾಗರ ಜಲಾಶಯ (ಕನ್ನಂಬಾಡಿ)ಕ್ಕೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದೆ.
ಮುಂಗಾರು ಅವಧಿಯ ದ್ವಿತೀಯಾರ್ಧದಲ್ಲಿ ರಾಜ್ಯದಲ್ಲಿ ಭಾರೀ ಮಳೆ ಕೊರತೆ ಉಂಟಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.