ಉತ್ತರ ಕನ್ನಡದಲ್ಲಿ ಪ್ರತಿ ಮಳೆಗಾಲದಲ್ಲೂ ಭಾರಿ ಮಳೆ ಸಾಮಾನ್ಯ. ಮಳೆಯಾಗುತ್ತಿದ್ದಂತೆ ಶಾಲೆಗಳಿಗೆ ರಜೆ ನೀಡಲೇಬೇಕು. ತುಂಬಿ ಹರಿಯುವ ಹಳ್ಳಕೊಳ್ಳಗಳು, ಪ್ರವಾಹ... ಹೀಗಾಗಿ ಮಕ್ಕಳು ಶಾಲೆಗೆ ಹೋಗುವುದು ಅಪಾಯಕರವೇ ಸೈ.
ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಘಟನೆಗಳ ಚಟುವಟಿಕೆಗಳಿಗೆ ಅವಕಾಶವಿಲ್ಲ ಎನ್ನುವುದು ಹೊಸದೇನಲ್ಲ. 2013ರಲ್ಲಿ ಜಗದೀಶ್ ಶೆಟ್ಟರ್ ಅವರ ನೇತೃತ್ವದ ಬಿಜೆಪಿ ಸರ್ಕಾರದಲ್ಲೇ ಆದೇಶ ಆಗಿದೆ.
ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಸೋಮವಾರ ತಮಿಳುನಾಡು, ಕೇರಳದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ಭಾನುವಾರ ಹೇಳಿದೆ. ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಇಲಾಖೆ ಅಂದಾಜಿಸಿದೆ.
ಈ ವರ್ಷದ ಭಾರೀ ಮಳೆ ಮತ್ತು ಪ್ರವಾಹದಿಂದ ಬಾಧಿತರಾದ ಜನರಿಗೆ ತಕ್ಷಣದ ನೆರವು ನೀಡಲು ರಾಜ್ಯ ವಿಪತ್ತು ಪ್ರತಿಕ್ರಿಯಾ ನಿಧಿಯ (ಎಸ್ಡಿಆರ್ಎಫ್) ಅಡಿ ಕರ್ನಾಟಕ ಮತ್ತು ಮಹಾರಾಷ್ಟ್ರಕ್ಕೆ 1,950.80 ಕೋಟಿ ರು. ಹಣವನ್ನು ಮುಂಗಡವಾಗಿ ಬಿಡುಗಡೆ ಮಾಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಒಪ್ಪಿಗೆ ನೀಡಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪೂರ್ಣಗೊಳಿಸುವ ಸಲುವಾಗಿ ಅಕ್ಟೋಬರ್ 31ರವರೆಗೆ ಕಾಲಾವಕಾಶ ವಿಸ್ತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಜಾರಕಿಹೊಳಿ ಹಾಗೂ ರಮೇಶ ಕತ್ತಿ ಬಣದ ನಡುವಿನ ಜಿದ್ದಾಜಿದ್ದಿಯ ಕಣವಾಗಿದ್ದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಚುನಾವಣೆಯ ಫಲಿತಾಂಶ ಭಾನುವಾರ ಹೊರಬಿದ್ದಿದೆ. 16 ಸ್ಥಾನಗಳ ಪೈಕಿ 13 ಸ್ಥಾನಗಳಲ್ಲಿ ಜಯ ಸಾಧಿಸುವ ಮೂಲಕ ಬ್ಯಾಂಕಿನ ಆಡಳಿತದ ಚುಕ್ಕಾಣಿ ಹಿಡಿಯುವಲ್ಲಿ ಜಾರಕಿಹೊಳಿ ಬಣ ಯಶಸ್ವಿ
ರಿಷಬ್ ಶೆಟ್ಟಿಯವರ ‘ಕಾಂತಾರ ಚಾಪ್ಟರ್ 1’ ವಿಜಯ ಯಾತ್ರೆ ಮುಂದುವರಿದಿದ್ದು, ವಿಶ್ವಾದ್ಯಂತ 717.50 ಕೋಟಿ ರು.ಗೂ ಗಳಿಕೆ ಮಾಡಿದೆ. ಭಾರತದಲ್ಲಿ 500 ಕೋಟಿ ರು.ಗೂ ಅಧಿಕ ಕಲೆಕ್ಷನ್ ಮಾಡಿದೆ. ಸಿನಿಮಾ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಈ ಗಳಿಕೆಯನ್ನು ಅಧಿಕೃತವಾಗಿ ಘೋಷಣೆ ಮಾಡಿದೆ.
ಸರೆಗಮಪ ರಿಯಾಲಿಟಿ ಶೋ ಮೂಲಕ ಜನಪ್ರಿಯರಾದ ಗಾಯಕಿ ಸುಹಾನಾ ಸಯ್ಯದ್ ತನ್ನ ಬಹುಕಾಲದ ಗೆಳೆಯ ನಿತಿನ್ ಶಿವಾಂಶ್ ಜೊತೆಗೆ ದಾಂಪತ್ಯ ಜೀವನಕ್ಕೆ ಅಡಿ ಇಟ್ಟಿದ್ದಾರೆ. ಕನಕಪುರ ಸಮೀಪದ ಖಾಸಗಿ ರೆಸಾರ್ಟ್ನಲ್ಲಿ ಕುವೆಂಪು ಅವರ ಮಂತ್ರಮಾಂಗಲ್ಯದ ವಿಧಿಯನುಸಾರ ವಿವಾಹ ನೆರೆವೇರಿದೆ.
ಗ್ರಾ. ಪಂ.ವ್ಯಾಪ್ತಿಯಲ್ಲಿ ಬರುವ ಕೃಷಿ ತೆರಿಗೆಗೆ ಒಳಪಡದ ಎಲ್ಲಾ ಆಸ್ತಿಗಳನ್ನು ಗುರುತಿಸಿ ನಿಯಮಬದ್ಧವಾಗಿ ತೆರಿಗೆ ಮತ್ತು ಶುಲ್ಕಗಳ ವಸೂಲಿಗೆ ತಂದಿರುವ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ರಾಜ್ ನಿಯಮ 2025ಅನ್ನು ಸರ್ಕಾರ ಶುಕ್ರವಾರ ಪ್ರಕಟಿಸಿದೆ.
ಕೌಶಲ್ಯ ತರಬೇತಿ ನೀಡಿದಾಕ್ಷಣ ಯುವನಿಧಿ ಯೋಜನೆ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರದಿಂದ ಎರಡು ವರ್ಷ ಯುವನಿಧಿ ಕೊಡಲಾಗುವುದು.