ರಾಜರಾಜೇಶ್ವರಿನಗರ ಶಾಸಕ ಮುನಿರತ್ನ ಅವರು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕ್ಷೇತ್ರದ ಜನರಿಗೆ ಪಟಾಕಿ ಹಂಚಲು ಪಟಾಕಿ ದಾಸ್ತಾನು ಮಾಡಿದ್ದ ಕಚೇರಿಗೆ ಪೊಲೀಸರು ಬೀಗ ಹಾಕಿದರು. ಇದರಿಂದ ಸ್ಥಳದಲ್ಲಿ ಕೆಲ ಕಾಲ ಹೈಡ್ರಾಮವೇ ನಡೆಯಿತು.
ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿಯಿಂದ ಉಂಟಾಗಬಹುದಾದ ಗಾಯ, ಹಾನಿಗಳಿಗೆ ಚಿಕಿತ್ಸೆ ನೀಡಲು ದಿನದ 24 ಗಂಟೆಯೂ ಸೇವೆ ನೀಡಲು ಬೆಂಗಳೂರು ನಗರದ ಮಿಂಟೋ ಕಣ್ಣಿನ ಆಸ್ಪತ್ರೆ ಸಜ್ಜಾಗಿದೆ. ಸೇವೆ ನೀಡಲು 25 ಬೆಡ್ ವ್ಯವಸ್ಥೆ ಮಾಡಲಾಗಿದೆ.
ನಮ್ಮ ಇಲಾಖೆಯಿಂದ ಮುಂದಿನ ತಿಂಗಳು ಇನ್ನೂ 49 ಸಾವಿರ ಮನೆಗಳನ್ನು ಫಲಾನುಭವಿ ಬಡವರಿಗೆ ಹಂಚಿಕೆ ಮಾಡುತ್ತಿದ್ದೇವೆ. ಹಂಚಿಕೆಯಾದ ಬಳಿಕ ಮನೆ ಕಟ್ಟಿರುವ ಗುತ್ತಿಗೆದಾರರಿಗೆ 900 ಕೋಟಿ ರು.ಗೂ ಹೆಚ್ಚು ಹಣ ಬಿಡುಗಡೆ ಮಾಡಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ತಿಳಿಸಿದ್ದಾರೆ.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ಶನಿವಾರ ಕಡೆ ದಿನವಾಗಿದ್ದು, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ 7.5 ಲಕ್ಷ ಮನೆಗಳಿಂದ 13 ಲಕ್ಷ ಜನರನ್ನು ಸಮೀಕ್ಷೆಗೆ ಒಳಪಡಿಸಲಾಗಿದೆ. 27 ಸಾವಿರ ಜನರು ಸಮೀಕ್ಷೆಯನ್ನು ತಿರಸ್ಕರಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿ ಹೊರತುಪಡಿಸಿ ರಾಜ್ಯಾದ್ಯಂತ ಶುಕ್ರವಾರದ ವೇಳೆಗೆ ಶೇ.95.20 ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ. ಆದರೆ, ಶೇ.85.72 ರಷ್ಟು ಜನರ ಗಣತಿಯ ಅಂಕಿ-ಅಂಶ ಮಾತ್ರ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಭಾನುವಾರವೂ ಸಮೀಕ್ಷೆ ಮುಂದುವರೆಸಲು ನಿರ್ಧರಿಸಲಾಗಿದೆ.
ಸರ್ಕಾರಿ ಜಾಗದಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಬಗ್ಗೆ 2013ರಲ್ಲಿ ಅಂದಿನ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರೇ ಆದೇಶ ಹೊರಡಿಸಿದ್ದರು. ಈ ಆದೇಶ ಆರ್ಎಸ್ಎಸ್ಗೂ ಅನ್ವಯವಾಗುತ್ತದೆ. ಅದನ್ನೇ ನಾವು ಈಗ ಜಾರಿಗೊಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರವು ಆರ್ಎಸ್ಎಸ್ನಂತಹ ಸಂಘಟನೆಗಳ ಚಟುವಟಿಕೆಗಳಿಗೆ ಕಡಿವಾಣ ಹಾಕಿದ ಬೆನ್ನಲ್ಲೇ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕಿಡಿಕಾರಿದ್ದು, ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಶುಕ್ರವಾರ ಪತ್ರ ಬರೆದು ಆಗ್ರಹಿಸಿದ್ದಾರೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ಏರ್ಪಡಿಸಿದ್ದ ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ರಾಯಚೂರು ಜಿಲ್ಲೆ ಸಿರವಾರ ತಾಲೂಕು ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಪ್ರವೀಣ್ಕುಮಾರ್ ಕೆ.ಪಿ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರ ಅಮಾನತು ಮಾಡಿದೆ.
ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿ, ಕಸ ವಿಲೇವಾರಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ, ಇದೀಗ ಸ್ವಂತ ಖರ್ಚಿನಲ್ಲಿ 13 ರಿಂದ 15 ರಸ್ತೆಗಳ ದುರಸ್ತಿ ಮತ್ತು ನಿರ್ವಹಣೆ ಕುರಿತು ಸರ್ಕಾರದ ಮಂದೆ ಪ್ರಸ್ತಾಪ ಇಟ್ಟಿದ್ದಾರೆ
ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ, ಆರ್ಥಿಕ ಗಣತಿಗೆ ಮಾಹಿತಿ ನೀಡಲು ನಿರಾಕರಿಸಿರುವ ಇನ್ಫೋಸಿಸ್ ನಾರಾಯಣ ಮೂರ್ತಿ ಹಾಗೂ ಸುಧಾಮೂರ್ತಿ ಅವರು ಬೃಹಸ್ಪತಿಗಳೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.