ಸಮ್ಮಿಶ್ರ ಸರ್ಕಾರದ ಬಿಕ್ಕಟ್ಟಿನ ಸಂದರ್ಭದಲ್ಲಿ ಬಿಜೆಪಿಯ ಹಿರಿಯ ನಾಯಕರೊಬ್ಬರು ಉಪಮುಖ್ಯಮಂತ್ರಿ ಆಮಿಷವೊಡ್ಡಿದ್ದರು, ಇಲ್ಲದಿದ್ದರೆ ಜೈಲಿಗೆ ಕಳುಹಿಸುವ ಬೆದರಿಕೆ ಹಾಕಿದ್ದರು ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ತಾಲೂಕಿನ ಇಂಡ್ಲವಾಡಿ ಗ್ರಾಮದ 75 ಎಕರೆ ವಿಸ್ತೀರ್ಣದಲ್ಲಿ ಬರೋಬ್ಬರಿ 2,350 ಕೋಟಿ ರು. ವೆಚ್ಚದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಮತ್ತು ಕ್ರೀಡಾಂಗಣ ಸಂಕೀರ್ಣ ನಿರ್ಮಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕ ಅನುಮೋದನೆ ನೀಡಲಾಗಿದೆ.
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಅ.17ರಿಂದ ಹೆಚ್ಚಲಿರುವ ಪ್ರಯಾಣಿಕರ ಒತ್ತಡ ನಿವಾರಣೆಗಾಗಿ ಕೆಎಸ್ಸಾರ್ಟಿಸಿ ಜತೆಗೆ ಬಿಎಂಟಿಸಿಯಿಂದ 960 ಹೆಚ್ಚುವರಿ ಬಸ್ಗಳನ್ನು ನಿಯೋಜಿಸಲಾಗುತ್ತಿದೆ.
ಬೆಂಗಳೂರು ಒಂದರಲ್ಲೇ ಪ್ರತೀ ವರ್ಷ 943 ಟನ್ ಆಹಾರ ವ್ಯರ್ಥ ಆಗುತ್ತಿದೆ. ಸುಮಾರು 360 ಕೋಟಿ ಮೌಲ್ಯದ ಆಹಾರ ವ್ಯರ್ಥ ಮಾಡಲಾಗುತ್ತಿದೆ. ಗೊತ್ತಿದ್ದು ಆಹಾರ ವ್ಯರ್ಥ ಮಾಡುವುದು ಅನ್ನಕ್ಕೆ ತೋರುವ ಅಹಂಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
5 ತಿಂಗಳ ಕಾಲ ದೇಶಾದ್ಯಂತ ಉತ್ತಮ ಮಳೆ ಸುರಿಸಿದ ಮುಂಗಾರು ಮಾರುತಗಳು ಅ.16ರಂದು ಪೂರ್ಣ ಪ್ರಮಾಣದಲ್ಲಿ ನಿರ್ಗಮನಗೊಂಡಿವೆ. ಈ ಬಾರಿ ಅವಧಿಗಿಂತ ಮೊದಲೇ, ಮೇ 24ಕ್ಕೆ ಕೇರಳ ಕರಾವಳಿ ಪ್ರವೇಶಿಸಿದ್ದ ಮಾರುತಗಳ 5 ತಿಂಗಳ ಅವಧಿಯಲ್ಲಿ ಒಟ್ಟು 937 ಮಿ.ಮೀ ಮಳೆ ಸುರಿಸಿವೆ.
: 2027ರ ಮೊದಲ ಹಂತದ ಜನಗಣತಿಗೆ ಪೂರ್ವಭಾವಿಯಾಗಿ ಇದೇ ವರ್ಷದ ನ.10ರಿಂದ 30ರ ವರೆಗೆ ಗಣತಿಪೂರ್ವ ಸಿದ್ಧತೆಗಳ ಭಾಗವಾಗಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಯ್ದ ಸ್ಥಳಗಳಲ್ಲಿರುವ ಮನೆಗಳ ಪಟ್ಟಿ ಮಾಡಿ, ಗಣತಿ ನಡೆಸಲಾಗುವುದು.
ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾಗಿರುವ ಮತಕಳ್ಳತನ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ವಿಶೇಷ ತನಿಖಾ ತಂಡ (ಎಸ್ಐಟಿ) ಕಲಬುರಗಿಯಲ್ಲಿ ತಲಾಶ್ ಮುಂದುವರಿಸಿದೆ. ಪ್ರಮುಖ 5 ಸ್ಥಳಗಳಲ್ಲಿ ನಡೆದ ತಪಾಸಣೆಯಲ್ಲಿ ಸಾವಿರಾರು ಮತದಾರರ ಗುರುತಿನ ಚೀಟಿಗಳು ಪತ್ತೆ
ಗೋಲ್ಡನ್ಸ್ಟಾರ್ ಗಣೇಶ್ ಹಾಗೂ ನಿರ್ದೇಶಕ ಶ್ರೀನಿವಾಸರಾಜು ಕಾಂಬಿನೇಶನ್ನ ಚಿತ್ರದಲ್ಲಿ ನಾಯಕಿಯಾಗಿ ತಮಿಳಿನ ಮಾಳವಿಕಾ ಶರ್ಮಾ ನಟಿಸುತ್ತಿದ್ದಾರೆ.
ನಿರ್ದೇಶಕ ಜೋಗಿ ಪ್ರೇಮ್ ಅವರು ಬಾಲಿವುಡ್ನಲ್ಲಿ ಸಿನಿಮಾ ಮಾಡುವ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಈಗಾಗಲೇ ನಟ ಅಜಯ್ ದೇವಗನ್ ಅವರೊಂದಿಗೆ ಮಾತುಕತೆ ಮಾಡಿದ್ದು ಅಧಿಕೃತ ಘೋಷಣೆ ಮಾಡುವ ಸಾಧ್ಯತೆ
ಸಂಗೀತ ನಿರ್ದೇಶಕ ರಘು ದೀಕ್ಷಿತ್ ಅವರು ಗಾಯಕಿ ಹಾಗೂ ಕೊಳಲು ವಾದಕಿ ವಾರಿಜಾಶ್ರೀ ಅವರನ್ನು ವಿವಾಹ ಆಗಲಿದ್ದಾರೆ. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಎರಡೂ ಮನೆಯವರ ಒಪ್ಪಿಗೆ ಮೇರೆಗೆ ವಿವಾಹ ಬಂಧನಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ತಿಂಗಳ ಕೊನೆಯಲ್ಲಿ ಇಬ್ಬರು ಮದುವೆ ಆಗಲಿದ್ದಾರೆ.