ರಾಜ್ಯದಲ್ಲಿ ಪ್ರಸಕ್ತ 2025-26ನೇ ಸಾಲಿನಿಂದಲೇ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ತೇರ್ಗಡೆ ಅಂಕಗಳನ್ನು ತಗ್ಗಿಸಿ ಆದೇಶ ಹೊರಡಿಸಲಾಗಿದೆ. ವಿದ್ಯಾರ್ಥಿಗಳು ಈ ಮುಂಚಿನ ಶೇ.35ರ ಬದಲು ಒಟ್ಟಾರೆ ಶೇ.33ರಷ್ಟು ಅಂಕಗಳನ್ನು ಪಡೆದರೆ ಉತ್ತೀರ್ಣರಾಗಲಿದ್ದಾರೆ.
ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳಿಗೆ ನಿಷೇಧ ಹೇರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದ ಸಚಿವ ಪ್ರಿಯಾಂಕ ಖರ್ಗೆಯವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ತಿರುಗೇಟು ನೀಡಿದ್ದಾರೆ.
‘ಆರ್ಎಸ್ಎಸ್ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದರಲ್ಲಿ ತಪ್ಪೇನಿದೆ? ಸರ್ಕಾರಿ ಜಾಗದಲ್ಲಿ ಅದರ ಚಟುವಟಿಕೆಗೆ ನಿರ್ಬಂಧ ಹಾಕುವಂತೆ ಅವರು ಪತ್ರ ಬರೆದಿದ್ದಾರೆ. ತಮಿಳುನಾಡಿನಲ್ಲಿ ಯಾವ ರೀತಿ ನಿಷೇಧ ಹೇರಲಾಗಿದೆ ಎಂಬ ಬಗ್ಗೆ ಮಾಹಿತಿ ತರಿಸುವಂತೆ ಸರ್ಕಾರದ ಕಾರ್ಯದರ್ಶಿಗೆ ಸೂಚಿಸಲಾಗಿದೆ.
ಆರ್ಎಸ್ಎಸ್ ಚಟುವಟಿಕೆಗಳಿಗೆ ನಿರ್ಬಂಧ ಹಾಕುವಂತೆ ಪತ್ರ ಬರೆದ ಬಳಿಕ ಬೆದರಿಕೆ ಕರೆಗಳು ಬರುತ್ತಿರುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಖುದ್ದು ತಿಳಿಸಿದ್ದಾರೆ. ಅವರಿಗೆ ರಕ್ಷಣೆ ಒದಗಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ನ. 1 ರಿಂದ ‘ಬಿ’ ಖಾತೆ ನಿವೇಶನಗಳನ್ನು ‘ಎ’ ಖಾತೆಗಳಾಗಿ ಬದಲಾವಣೆ ಮಾಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ಮಾಡಿದ್ದು, 100 ದಿನಗಳ ಈ ಅಭಿಯಾನದಿಂದ 15 ಲಕ್ಷ ಆಸ್ತಿಗಳ ಮಾಲೀಕರಿಗೆ ಉಪಯೋಗ ಆಗಲಿದೆ. ನಗರದ ಎಲ್ಲಾ ಆಸ್ತಿಗಳಿಗೂ ಏಕರೂಪದ ಖಾತಾ ವ್ಯವಸ್ಥೆ
‘ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಎಂಬುದು ಮಾಧ್ಯಮದ ಸೃಷ್ಟಿ. ಅಂತಹ ಯಾವುದೇ ಕ್ರಾಂತಿ ನಡೆಯಲ್ಲ. ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ಯಾವುದೇ ಕೂಗು ಇಲ್ಲ. ಅದೆಲ್ಲವೂ ಊಹಾಪೋಹ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ರಿಷಬ್ ಶೆಟ್ಟಿ ಅವರು ಅಮಿತಾಬ್ ಬಚ್ಚನ್ ಸಾರಥ್ಯದ ‘ಕೌನ್ ಬನೇಗಾ ಕರೋಡ್ಪತಿ’ಯಲ್ಲಿ ವಿಶೇಷ ಆಹ್ವಾನದ ಮೇರೆಗೆ ಭಾಗವಹಿಸಿದ್ದಾರೆ.
ಯಶ್ ನಟನೆ, ನಿರ್ಮಾಣದ ಅದ್ದೂರಿ ಬಜೆಟ್ನ ಪ್ಯಾನ್ ವರ್ಲ್ಡ್ ಚಿತ್ರ ‘ಟಾಕ್ಸಿಕ್’ನ ದೃಶ್ಯವೊಂದು ಲೀಕ್ ಆಗಿದೆ. ಇದರಲ್ಲಿ ಬಾಲ್ಕನಿಯಲ್ಲಿ ನೀಲಿ ಬಣ್ಣದ ಜೀನ್ಸ್ನಲ್ಲಿ ಷರ್ಟ್ಲೆಸ್ ಆಗಿ ಕಾಣಿಸಿಕೊಂಡಿರುವ ಯಶ್ ಸ್ಟೈಲಿಶ್ ಆಗಿ ಸಿಗರೇಟು ಸೇದುತ್ತಿದ್ದಾರೆ.
ಸುಧೀರ್ ಅತ್ತಾವರ ನಿರ್ದೇಶನದ ‘ಕೊರಗಜ್ಜ’ ಸಿನಿಮಾ ಆರು ಭಾಷೆಗಳಲ್ಲಿ ರಿಲೀಸ್ ಆಗಲಿದೆ. ಇತ್ತೀಚೆಗೆ ಈ ಸಿನಿಮಾದ ಫಸ್ಟ್ ಲುಕ್ ಟೀಸರ್ ಹಾಗೂ ತ್ರೀಡಿ ಮೋಷನ್ ಪೋಸ್ಟರ್ ಅದ್ದೂರಿಯಾಗಿ ಬಿಡುಗಡೆಯಾಯಿತು.
2025-26ನೇ ಸಾಲಿನ, 91ನೇ ಆವೃತ್ತಿಯ ರಣಜಿ ಟ್ರೋಫಿಗೆ ಬುಧವಾರ ಚಾಲನೆ ದೊರೆಯಲಿದೆ. ಎಲೈಟ್ ವಿಭಾಗದಲ್ಲಿ 32 ತಂಡಗಳು ಪ್ರಶಸ್ತಿಗಾಗಿ ಸೆಣಸಲಿದ್ದು, ಪ್ಲೇಟ್ ಚಾಂಪಿಯನ್ಶಿಪ್ಗೆ 6 ತಂಡಗಳು ಹೋರಾಟ ನಡೆಸಲಿವೆ. ಒಟ್ಟಾರೆ 138 ಪಂದ್ಯಗಳು ನಡೆಯಲಿದೆ.