ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಬಹುನಿರೀಕ್ಷಿತ ತೀರ್ಪನ್ನು ಆ.1ಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮುಂದೂಡಿದೆ.
ಚುನಾವಣಾ ಅಕ್ರಮಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆ ಆ.4ರ ಬದಲಾಗಿ ಆ.5ರಂದು ನಡೆಯಲಿದೆ.
ಧರ್ಮಸ್ಥಳ ಗ್ರಾಮದಲ್ಲಿ ಅನಧಿಕೃತವಾಗಿ ನೂರಾರು ಶವಗಳನ್ನು ಹೂತು ಸಮಾಧಿ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ಮುಂದಾಗಿರುವ ಎಸ್ಐಟಿ ತಂಡಕ್ಕೆ ಬುಧವಾರವೂ ಯಾವುದೇ ಫಲಿತಾಂಶ ಸಿಕ್ಕಿಲ್ಲ.
ಇಂಧನ ಸಚಿವ ಕೆ.ಜೆ.ಜಾರ್ಜ್ ಆಪ್ತರು ಎನ್ನಲಾದ ರಿಯಲ್ ಎಸ್ಟೇಟ್ ಉದ್ಯಮಿಗಳು ಹಾಗೂ ಎಲೆಕ್ಟ್ರಿಕ್ ಗುತ್ತಿಗೆದಾರರ ಮನೆ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ನೇತೃತ್ವದಲ್ಲಿ ಆ.2 ರಂದು ದಲಿತ ಸಚಿವರು ಹಾಗೂ ಕಾಂಗ್ರೆಸ್ನ ದಲಿತ ಶಾಸಕರ ಸಭೆ ನಡೆಸಲು ತೀರ್ಮಾನಿಸಲಾಗಿದೆ.
ಪಾತಕಿಗಳಿಗೆ ಎನ್ಕೌಂಟರ್ ಮೂಲಕ ಬಿಸಿಮುಟ್ಟಿಸಿ ‘ಎನ್ಕೌಂಟರ್ ಸ್ಪೆಷಲಿಸ್ಟ್’ ಎಂದೇ ಖ್ಯಾತಿ ಪಡೆದಿದ್ದ, ಕನ್ನಡಿಗ ಮುಂಬೈನ ಹಿರಿಯ ಪೊಲೀಸ್ ಇನ್ಸ್ಪೆಕ್ಟರ್ ದಯಾ ನಾಯಕ್ ಜು.31ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ.
ಪ್ರತಿಷ್ಠಿತ ಖಾಸಗಿ ಕಂಪನಿಯ ಸರ್ವರ್ ಹ್ಯಾಕ್ ಮಾಡಿ ಸುಮಾರು 387 ಕೋಟಿ ರು. ಮೌಲ್ಯದ ಯುಎಸ್ಡಿಟಿ (ಬಿಟ್ ಕಾಯಿನ್) ಕಳವು ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ
ಕರ್ನಾಟಕ ಹಾಲು ಮಹಾಮಂಡಲ (ಕೆಎಂಎಫ್)ದ ನೂತನ ಅಧ್ಯಕ್ಷರ ಆಯ್ಕೆಗೆ ಆಗಸ್ಟ್ ಅಂತ್ಯದಲ್ಲಿ ಅಥವಾ ಸೆಪ್ಟೆಂಬರ್ ಆರಂಭದಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ. ಕುತೂಹಲದ ಸಂಗತಿಯೆಂದರೆ, ಈ ಚುನಾವಣೆ ವಿಚಾರದಲ್ಲೂ ಕಾಂಗ್ರೆಸ್ ಬಣ ರಾಜಕಾರಣ ಆರಂಭಗೊಂಡಿರುವ ಸೂಚನೆಗಳಿವೆ
ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಾಕಾರಗೊಳ್ಳುವ ಲಕ್ಷಣ ಕ್ಷೀಣ ಆಗುತ್ತಿದ್ದಂತೆಯೇ ‘ಆಗಸ್ಟ್ 1ರಿಂದ ಭಾರತ ಶೇ. 25ರಷ್ಟು ಸುಂಕ ಪಾವತಿಸಬೇಕಾಗುತ್ತದೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಘೋಷಿಸಿದ್ದಾರೆ.
ಭಾರತ ಹಾಗೂ ಅಮೆರಿಕ ಮೊದಲ ಬಾರಿ ಜಂಟಿಯಾಗಿ ಅಭಿವೃದ್ಧಿಪಡಿಸಿದ ಅತ್ಯಾಧುನಿಕ ಹಾಗೂ ವಿಶ್ವದ ಅತಿ ದುಬಾರಿ ಭೂಸರ್ವೇಕ್ಷಣಾ ಉಪಗ್ರಹ ‘ನಿಸಾರ್ ಯಶಸ್ವಿಯಾಗಿ ಉಡಾವಣೆ