ನಗರದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತಿಲ್ಲ. ಹೀಗಾಗಿ ಈ ಸಮೀಕ್ಷಾ ಕಾರ್ಯಕ್ಕೆ ವೇಗ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಅವರಿಗೆ ಪತ್ರ ಬರೆದಿದ್ದಾರೆ.
ಔಷಧಗಳು, ರಕ್ತದ ಮಾದರಿ ಪರೀಕ್ಷಾ ಕಿಟ್ ಸೇರಿ ಅಗತ್ಯ ವೈದ್ಯಕೀಯ ಪರಿಕರವನ್ನು ಸೂಕ್ತ ಸಮಯಕ್ಕೆ ಸುರಕ್ಷಿತವಾಗಿ ಡ್ರೋನ್ ಮೂಲಕ ಸಾಗಿಸುವ ಪ್ರಾಯೋಗಿಕ ಯೋಜನೆಯನ್ನು ನಾರಾಯಣ ಹೆಲ್ತ್ನ ಪಾಲುದಾರಿಕೆಯೊಂದಿಗೆ ಏರ್ಬೌಂಡ್ ಕಂಪನಿ ಕೈಗೊಂಡಿದೆ.
ಬ್ಯಾಂಕಿಂಗ್ ಕ್ಷೇತ್ರದ ಸುಧಾರಣೆಗಾಗಿ ಆರ್ಬಿಐ ಆರಂಭಿಸಿದ ತಕ್ಷಣದ ಚೆಕ್ ನಗದೀಕರಣದ ಪ್ರಕ್ರಿಯೆಗೆ ತಾಂತ್ರಿಕ ಅಡಚಣೆ ಎದುರಾಗಿದ್ದರಿಂದ ಉದ್ಯಮ ವಲಯ ತತ್ತರಿಸಿದ್ದು, ಕಳೆದ 10 ದಿನಗಳಿಂದ ಬ್ಯಾಂಕ್ಗಳಿಗೆ ಹಾಜರುಪಡಿಸಿದ ಚೆಕ್ಗಳು ಇದುವರೆಗೆ ನಗದೀಕರಣಗೊಳ್ಳದೆ ವ್ಯವಹಾರಕ್ಕೆ ಅಡಚಣೆ
ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಅವರ ಶಾಸಕ ಸ್ಥಾನ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದು, ಚುನಾವಣಾ ಆಯೋಗಕ್ಕೆ ಮರುಮತ ಎಣಿಕೆ ಮಾಡುವಂತೆ ಮಹತ್ವದ ಸೂಚನೆ ನೀಡಿದೆ.
ರಾಜಧಾನಿ ರಸ್ತೆ ಗುಂಡಿ, ಕಸ ವಿಲೇವಾರಿ ಸಮಸ್ಯೆ ಬಗ್ಗೆ ಪುನಃ ಉದ್ಯಮಿಗಳು ಹಾಗೂ ಸರ್ಕಾರದ ಜಟಾಪಟಿ ನಡೆದಿದೆ. ಉದ್ಯಮಿ ಕಿರಣ್ ಮಜುಂದಾರ್ ಶಾ ರಸ್ತೆಗುಂಡಿ ಬಗ್ಗೆ ಕಿಡಿಕಾರಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 1,200 ಚದರಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಿಸಿರುವ ನೆಲ ಮತ್ತು 2 ಅಂತಸ್ತು, ಸ್ಟಿಲ್ಟ್ ಮತ್ತು 3 ಅಂತಸ್ತಿನ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ (ಒ.ಸಿ.) ಪಡೆಯುವುದರಿಂದ ವಿನಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ವಿಶೇಷ ಸಂದರ್ಭದಲ್ಲಿ ಉಡುಗೊರೆಯಾಗಿ ಬೆಳ್ಳಿ ದೀಪ ಕೊಡುವುದು, ಬೆಳ್ಳಿಯ ದೇವತಾ ವಿಗ್ರಹ ನೀಡುವುದು, ಮದುವೆಯ ವೇಳೆಗೆ ಬೆಳ್ಳಿಯ ಸಾಮಗ್ರಿಗಳನ್ನು ನೀಡುವುದು ಅನಾದಿ ಕಾಲದಿಂದ ಅನೂಚಾನಾಗಿ ನಡೆದುಕೊಂಡು ಬಂದಿದೆ.
ಕಾಂತಾರ ಚಾಪ್ಟರ್-1 ಚಿತ್ರೀಕರಣದ ವೇಳೆ ಸಾವನ್ನು ಅಲ್ಲದಿದ್ದರೂ ಹಲವು ಸವಾಲುಗಳನ್ನು ಎದುರಿಸಿದೆವು. ಆದರೆ ತಂಡದ ಬೆಂಬಲದಿಂದ ಯಶಸ್ಸು ಸಾಧ್ಯವಾಯಿತು. ನಾವು ಇತಿಹಾಸ ಎಂದು ಪರಿಗಣಿಸುವ ದೈವಗಳ ಕುರಿತಾದ ಪುರಾಣದ ಕತೆಗಳನ್ನು ಜನರೆದುರಿಡುವುದು ನಮ್ಮ ಉದ್ದೇಶವಾಗಿತ್ತು.
ಬಿಹಾರದಲ್ಲಿ ಹೈವೋಲ್ಟೇಜ್ ವಿಧಾನಸಭಾ ಚುನಾವಣೆಗೆ ಒಂದೇ ತಿಂಗಳು ಬಾಕಿ ಇರುವ ಹೊತ್ತಿನಲ್ಲೇ, ಪ್ರತಿಪಕ್ಷ ಆರ್ಜೆಡಿಯ ಪಾಲಿಗೆ ಹೊಸ ತಲೆನೋವು ಶುರುವಾಗಿದೆ. ಐಆರ್ಟಿಸಿ ಹೋಟೆಲ್ ಹಗರಣಕ್ಕೆ ಸಂಬಂಧಿಸಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಸೇರಿ ಲಾಲೂ ಕುಟುಂಬದ ಮೂವರ ವಿರುದ್ಧ ದೋಷಾರೋಪ
ಕಾರ್ಮಿಕರ ಭವಿಷ್ಯ ನಿಧಿ (ಇಪಿಎಫ್ಒ) ಮಂಡಳಿ ನಿಧಿಯಲ್ಲಿ ಹಿಂಪಡೆಯಬಹುದಾದ ನಿಧಿಯಲ್ಲಿ ಶೇ.100ರಷ್ಟು ಹಣ ಹಿಂಪಡೆತಕ್ಕೆ ಅವಕಾಶ ನೀಡುವ ಪ್ರಸ್ತಾಪವನ್ನು ಮಂಡಳಿ ಅನುಮೋದಿಸಿದೆ. ಇದರಿಂದ 7 ಕೋಟಿ ಸದಸ್ಯರಿಗೆ ನೆರವಾಗಲಿದೆ.