ಸಚಿವ ಪ್ರಿಯಾಂಕ್ ಖರ್ಗೆಯವರು ಸರ್ಕಾರದ ಸ್ಥಳಗಳಲ್ಲಿ ಸಂಘದ ಚಟುವಟಿಕೆಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದ ಬೆನ್ನಲ್ಲೇ ಕಲಬುರಗಿ ನಗರದಲ್ಲಿ ಬಿಜೆಪಿ ನಾಯಕರು ಬೀದಿಗಿಳಿದು, ‘ಐ ಲವ್ ಆರ್ಎಸ್ಎಸ್’ ಪೋಸ್ಟರ್ ಅಭಿಯಾನ ಶುರು ಮಾಡಿದ್ದಾರೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು (ಆರ್ಎಸ್ಎಸ್) ನಿಷೇಧಿಸಬೇಕು ಎಂದು ನಾನೆಲ್ಲಿ ಹೇಳಿದ್ದೇನೆ. ಸರ್ಕಾರಿ ಸ್ಥಳಗಳಲ್ಲಿ ಸಂಘ ಪರಿವಾರದವರ ಚಟುವಟಿಕೆಗಳನ್ನು ನಿಷೇಧಿಸಬೇಕು ಎಂಬುದಷ್ಟೇ ನನ್ನ ಆಗ್ರಹ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಈ ಬಾರಿ ಸಾಮಾನ್ಯ ಜನರು ಕೂಡ ಸುಗಮವಾಗಿ ಹಾಸನಾಂಬೆ ದರ್ಶನ ಮಾಡಲಿಕ್ಕಾಗಿ ಜಿಲ್ಲಾಡಳಿತ ಹತ್ತುಹಲವು ನಿಯಮಗಳನ್ನು ಮಾಡಿದೆ. ಈ ಶಿಷ್ಟಾಚಾರವನ್ನು ಸೋಮವಾರ ಶಾಸಕ ಎಚ್.ಡಿ.ರೇವಣ್ಣ ಉಲ್ಲಂಘಿಸಿ ನೇರವಾಗಿ ದೇವಸ್ಥಾನಕ್ಕೆ ಹೋಗಿ ಗರ್ಭಗುಡಿಯಲ್ಲಿ ಅರ್ಧಗಂಟೆ ಪೂಜೆ ಸಲ್ಲಿಸಿದರು.
ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆ ಹಾಗೂ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಯು ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ನಡೆಯಲಿದ್ದು, ಚುನಾವಣೆಗಾಗಿ ಸಿದ್ಧತೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಬೇರೆ ಬೇರೆ ಊರಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುವ ಕಾರಣ ಅ.17ರಿಂದ 20ರವರೆಗೆ ಕೆಎಸ್ಸಾರ್ಟಿಸಿಯಿಂದ 2,500 ಹೆಚ್ಚುವರಿ ಬಸ್ಗಳು ಕಾರ್ಯಾಚರಣೆ ನಡೆಸಲಿವೆ.
ಬಿಹಾರ ಚುನಾವಣೆ ಹೊಣೆಗಾರಿಕೆಯಲ್ಲದೆ, ಕೆಲ ಸಚಿವರು ಖುದ್ದಾಗಿ ಬಿಹಾರಕ್ಕೆ ತೆರಳಿ ಚುನಾವಣಾ ಉಸ್ತುವಾರಿ ವಹಿಸಿಕೊಳ್ಳುವ ಸಾಧ್ಯತೆಗಳಿವೆ. ಸಚಿವರಿಗೆ ನೀಡಿದ ಔತಣ ಕೂಟದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಹೈಕಮಾಂಡ್ ನೀಡಿರುವ ಕೆಲ ಸೂಚನೆಗಳನ್ನು ವಿವರಿಸಿದರು
ಮಹದೇವಪುರ ವಿಧಾನಸಭಾ ಕ್ಷೇತ್ರ ಸೇರಿದಂತೆ ದೇಶದ ಇತರೆ ಹಲವು ಕ್ಷೇತ್ರಗಳಲ್ಲಿ ನಡೆದಿದೆ ಎನ್ನಲಾದ ಮತಗಳವು ಕುರಿತು ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯೊಂದನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.
ಸರ್ಕಾರಿ ಸ್ಥಳಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ನಿಷೇಧಿಸುವ ಕುರಿತಂತೆ ತಮಿಳುನಾಡು ಸರ್ಕಾರದ ನೀತಿಯನ್ನು ಅಧ್ಯಯನ ಮಾಡುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ.
‘ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನದ ವಿಚಾರ ಸಂಖ್ಯಾಬಲದಿಂದ ನಿರ್ಧಾರವಾಗುವುದಿಲ್ಲ, ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸರ್ಕಾರದ ಬಗ್ಗೆ ಟೀಕಿಸುವ ಪ್ರತಿಪಕ್ಷಗಳಿಗೆ 3-4 ಮಂದಿ ಸಚಿವರು ಬಿಟ್ಟರೆ ಬೇರೆ ಯಾರೂ ಪ್ರತ್ಯುತ್ತರ ನೀಡುತ್ತಿಲ್ಲ. ಆರ್ಎಸ್ಎಸ್ ಕುರಿತ ನಿಲುವು ಸೇರಿ ಸರ್ಕಾರದ ಎಲ್ಲಾ ನಿಲುವು ಹಾಗೂ ಸಾಧನೆಗಳನ್ನು ಬಲವಾಗಿ ಸಮರ್ಥಿಸಿಕೊಂಡು ಪ್ರತಿಪಕ್ಷಗಳಿಗೆ ತಿರುಗೇಟು ನೀಡಬೇಕು - ಮುಖ್ಯಮಂತ್ರಿ ಸಿದ್ದರಾಮಯ್ಯ