ಚಿನ್ನಸ್ವಾಮಿ ಕ್ರೀಡಾಂಗಣ ಸಮೀಪದ ಟ್ರಾಫಿಕ್ ಸಿಗ್ನಲ್ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಿಎಂಟಿಸಿ ವಿದ್ಯುತ್ ಚಾಲಿತ ಬಸ್ಸೊಂದು ಅಡ್ಡಾದಿಡ್ಡಿಯಾಗಿ ಚಲಿಸಿ ಸಂಭವಿಸಿದ ಸರಣಿ ಅಪಘಾತದಲ್ಲಿ ಮಹಿಳೆ ಸೇರಿ ಇಬ್ಬರು ಗಾಯಗೊಂಡಿದ್ದಾರೆ.
ನಾನು ಮುಖ್ಯಮಂತ್ರಿಯಾಗುವ ಕಾಲ ಹತ್ತಿರ ಬಂದಿದೆ ಎಂದು ಹೇಳಿಲ್ಲ. ನನಗೆ ಮುಖ್ಯಮಂತ್ರಿ ಹುದ್ದೆ ಅಲಂಕರಿಸುವ ಆತುರವೂ ಇಲ್ಲ. ಆದರೆ, ಕೆಲ ಮಾಧ್ಯಮಗಳು ಹೇಳಿಕೆ ತಿರುಚಿ ವಿವಾದ ಸೃಷ್ಟಿಸುತ್ತಿವೆ.
ಜಿಲ್ಲೆಯ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುವ ಜಿಲ್ಲಾ ಸಹಕಾರಿ ಬ್ಯಾಂಕಿನಲ್ಲಿ ಕಳೆದ 25 ವರ್ಷಗಳಿಂದ ಬಿಗಿಹಿಡಿತ ಹೊಂದಿದ್ದ ಕತ್ತಿ ಕುಟುಂಬಕ್ಕೆ ಆಘಾತ ನೀಡಿರುವ ಜಾರಕಿಹೊಳಿ ಕುಟುಂಬ ಮೇಲುಗೈ ಸಾಧಿಸಿದೆ.
ಆನ್ಲೈನ್ ವಂಚನೆ ಮೂಲಕ ದೇಶಾದ್ಯಂತ ಹಲವರ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕಿ ಸುಮಾರು 150 ಕೋಟಿ ರು.ಎಗರಿಸಿದ್ದ ಅಂತಾರಾಜ್ಯ ಸೈಬರ್ ವಂಚಕನನ್ನು ದಾವಣಗೆರೆಯ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ನನಗೆ ತಿಳಿದಿರುವಂತೆ ಹಿಂದಿನಿಂದ ಇಂದಿನವರೆಗೂ ಸ್ಟಾರ್ ನಟರು, ಹೀರೋಗಳು ಎಂಟು ಗಂಟೆ ಮಾತ್ರ ಶೂಟಿಂಗ್ನಲ್ಲಿರುತ್ತಾರೆ. ಅವರ ಬಗ್ಗೆ ಇದುವರೆಗೆ ಯಾರೂ ಪ್ರಶ್ನೆ ಮಾಡಿಲ್ಲ. ಆದರೆ ನಟಿಯರು ಈ ಬಗ್ಗೆ ಮಾತಾಡಿದ ಕೂಡಲೇ ಅದು ದೊಡ್ಡ ಸುದ್ದಿಯಾಗುತ್ತದೆ, ಇಂಥಾ ಡಬಲ್ ಸ್ಟಾಂಡರ್ಡ್ ಯಾಕೆ?’
‘ಕಾಂತಾರ ಚಾಪ್ಟರ್ 1’ ಮೊದಲ ವಾರವೇ ವಿಶ್ವಾದ್ಯಂತ 509 ಕೋಟಿ ರು.ಗೂ ಅಧಿಕ ಗಳಿಕೆ ಮಾಡಿದೆ. ಈ ಚಿತ್ರ ನಿರ್ಮಿಸಿದ ಹೊಂಬಾಳೆ ಫಿಲಂಸ್ ಈ ಸಂಗತಿಯನ್ನು ಅಧಿಕೃತವಾಗಿ ಘೋಷಿಸಿದೆ.
ವೆಸ್ಟ್ಇಂಡೀಸ್ ವಿರುದ್ಧ 2ನೇ ಟೆಸ್ಟ್ನ ಮೊದಲ ದಿನವೇ ಭಾರತ ಅಧಿಪತ್ಯ ಸಾಧಿಸಿದೆ. ಯಶಸ್ವಿ ಜೈಸ್ವಾಲ್ ಅಮೋಘ ಶತಕದ ನೆರವಿನಿಂದ ಭಾರತ ತಂಡ ದಿನದಂತ್ಯಕ್ಕೆ 2 ವಿಕೆಟ್ ನಷ್ಟದಲ್ಲಿ 318 ರನ್ ಕಲೆಹಾಕಿದೆ.
ಈ ಬಾರಿ ಮಹಿಳಾ ವಿಶ್ವಕಪ್ನಲ್ಲಿ ಸತತ 2 ಸೋಲು ಕಂಡಿದ್ದ ನ್ಯೂಜಿಲೆಂಡ್ ತಂಡ ಮೊದಲ ಗೆಲುವು ದಾಖಲಿಸಿದೆ. ಶುಕ್ರವಾರ ಬಾಂಗ್ಲಾದೇಶ ವಿರುದ್ಧ ಪಂದ್ಯದಲ್ಲಿ ಕಿವೀಸ್ 100 ರನ್ ಜಯಗಳಿಸಿತು. ಬಾಂಗ್ಲಾ 3 ಪಂದ್ಯಗಳಲ್ಲಿ 2ನೇ ಸೋಲು ಕಂಡಿತು.
ಕನ್ನಡಾಂಬೆ ಭುವನೇಶ್ವರಿಯ ಒಡಲಿನಲ್ಲಿ ಅನೇಕ ಕಥೆಗಳಿವೆ. ಅದನ್ನು ಜಗತ್ತಿನ ಮುಂದೆ ಸುಂದರವಾಗಿ ಬಿಚ್ಚಿಡುವ ಕಥೆಗಾರ ಬೇಕು. ರಿಷಬ್ ಅವರಲ್ಲಿ ನಾನು ಆ ಸಾಧ್ಯತೆಗಳನ್ನು ಕಂಡೆ. ಐತಿಹಾಸಿಕ ಮತ್ತು ಚಾರಿತ್ರಿಕ ಘಟನೆಗಳನ್ನು, ಭಾರತ- ಕರ್ನಾಟಕದ ಗತ ವೈಭವದ ಕಥೆಗಳನ್ನು ರಿಷಬ್ ಅವರು ರಸವತ್ತಾಗಿ ಕಟ್ಟಿಕೊಡಬಹುದು.
ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈ ಬಗ್ಗೆ ಮುಖ್ಯಮಂತ್ರಿ ಏನನ್ನೂ ಹೇಳಿಲ್ಲ. ಸಚಿವ ಸಂಪುಟ ಪುನರ್ ರಚನೆ ಯಾವಾಗ ಬೇಕಾದರೂ ಆಗಬಹುದು ಅಥವಾ ಹೊಸ ಸಚಿವ ಸಂಪುಟವೂ ರಚನೆ ಆಗಬಹುದು. ಇಂಥದ್ದೇ ತಿಂಗಳು ಸಂಪುಟ ಪುನರ್ ರಚನೆ ಎಂದು ಮುಖ್ಯಮಂತ್ರಿಗಳು ಹೇಳಿಲ್ಲ