ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ಭಾನುವಾರ ಆರೆಸ್ಸೆಸ್ ಜನ್ಮ ಶತಾಬ್ದಿ ಸಂಭ್ರಮದ ಪಥ ಸಂಚಲನ ಶಾಂತಿಯುತವಾಗಿ ನಡೆಯಿತು. ಹೈಕೋರ್ಟ್ ಷರತ್ತಿನಂತೆ 300 ಗಣವೇಷಧಾರಿ ಸ್ವಯಂಸೇವಕರು, 50 ಮಂದಿ ಬ್ಯಾಂಡ್ ವಾದಕರ ವೃಂದದವರು ಪಥ ಸಂಚಲನದಲ್ಲಿ ಭಾಗಿಯಾಗಿದ್ದರು.
ಉತ್ತರ ಭಾರತದಿಂದ ವಲಸೆ ಬರುತ್ತಿರುವ ಕಾರ್ಮಿಕರು ನಗರ ಮಾತ್ರವಲ್ಲದೆ ಗ್ರಾಮೀಣ ಪ್ರದೇಶದಲ್ಲೂ ಬೀಡುಬಿಡುತ್ತಿರುವುದು ಹೊಸ ಸಾಮಾಜಿಕ ಸಮಸ್ಯೆ ಸೃಷ್ಟಿಗೆ ಕಾರಣವಾಗಿದೆ. ಪರಿಣಾಮ ವಿವಿಧೆಡೆ ಸ್ಥಳೀಯರಿಂದ ಬದುಕಿಗಾಗಿ ಹೋರಾಟ ರೂಪುಗೊಳ್ಳುತ್ತಿದೆ.
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಿಂದ ಹೆಬ್ಬಾಳದ ಜಿಕೆವಿಕೆಯಲ್ಲಿ ಆಯೋಜಿಸಿದ್ದ ನಾಲ್ಕು ದಿನಗಳ ಬಹು ನಿರೀಕ್ಷಿತ ‘ಕೃಷಿ ಮೇಳ’ದಲ್ಲಿ ಐದು ಸಾವಿರಕ್ಕೂ ಅಧಿಕ ರೈತರು ರೋಗ, ಕೀಟ ಬಾಧೆ ಬಗ್ಗೆ ವಿಜ್ಞಾನಿಗಳಿಂದ ಮಾಹಿತಿ ಪಡೆದಿದ್ದಾರೆ.
ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಐದು ಕೋಟಿ ರು. ಮಂಜೂರು ಮಾಡಿಸುತ್ತೇನೆ ಎಂದು ವ್ಯಕ್ತಿಯೊಬ್ಬರನ್ನು ನಂಬಿಸಿ, ಮುಂಗಡವಾಗಿ ಕಮಿಷನ್ 50 ಲಕ್ಷ ರು. ಪಡೆದು ವಂಚಿಸಿದ ಆರೋಪದಡಿ ಅನ್ನಪೂಣೇಶ್ವರಿ ನಗರದ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದೆ.
‘ಸಂಪುಟ ಪುನಾರಚನೆಗೆ ಒಪ್ಪಿಗೆ ಸಿಕ್ಕಿದರೆ ನಾಯಕತ್ವ ಬದಲಾವಣೆ ಇಲ್ಲ ಎಂದರ್ಥ. ಸಂಪುಟ ಪುನರಾಚನೆಯಾದರೆ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾರ್ಮಿಕವಾಗಿ ಹೇಳಿದ್ದಾರೆ.
ಸಂಪುಟ ಪುನಾರಚನೆ, ಪವರ್ ಶೇರಿಂಗ್, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಎಲ್ಲವನ್ನೂ ತೀರ್ಮಾನ ಮಾಡುವುದು ಹೈಕಮಾಂಡ್. ಈ ಬಗ್ಗೆ ಬೇರೆ ಯಾರೋ ನಿರ್ಧಾರ ಮಾಡಲು ಆಗಲ್ಲ. ಹೈಕಮಾಂಡ್ ಯಾವ ತೀರ್ಮಾನ ಮಾಡಲಿದೆ ಎಂದು ಕಾದು ನೋಡೋಣ ಎಂದು ಮಾಜಿ ಸಂಸದ, ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದ್ದಾರೆ.
ಕೈದಿಗಳ ವಿಶೇಷ ಸೌಲಭ್ಯದ ವೀಡಿಯೋ ಲೀಕ್ ಹಿನ್ನೆಲೆ ಸ್ಪೆಷಲ್ ಸ್ಟೋರಿ . ಮೊನ್ನೆ ತಾನೇ ಪರಪ್ಪನ ಅಗ್ರಹಾರದ ಕೈದಿಗಳಿಗೆ ವಿಶೇಷ ಸೌಲಭ್ಯ ವೀಡಿಯೋ ಲೀಕ್ ಆಗಿ ಚರ್ಚೆಗೆ ಗ್ರಾಸವಾಯಿತು. ವಾಸ್ತವದಲ್ಲಿ ಕೇಂದ್ರ ಕಾರಾಗ್ರಹದ ಸ್ಥಿತಿ ಹೇಗಿದೆ, ಅಧಿಕಾರಿಗಳು ಪಡುತ್ತಿರುವ ಬವಣೆಗಳೇನು ಎಂಬುದರ ಕುರಿತು ಬರಹ.
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ನ 2ನೇ ದಿನವಾದ ಶನಿವಾರ ಒಟ್ಟು 15 ವಿಕೆಟ್ಗಳು ಪತನಗೊಂಡಿದ್ದು, ಮೂರೇ ದಿನಕ್ಕೆ ಪಂದ್ಯ ಮುಕ್ತಾಯಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ.
ಮನೆಯಲ್ಲಿದ್ದ ಸಾಯಿಬಾಬಾ ಫೋಟೋ ಮುಂದೆ ಮಹಿಳಾ ಪೇದೆಗೆ ತಾಳಿ ಕಟ್ಟಿ, ಲೈಂಗಿಕವಾಗಿ ಬಳಸಿಕೊಂಡ ನಂತರ ಆಕೆ ಪರಿಶಿಷ್ಟ ಜಾತಿಗೆ ಸೇರಿದ್ದಾರೆ ಎಂಬ ಕಾರಣಕ್ಕೆ ಪತ್ನಿಯೆಂದು ಸಾರ್ವಜನಿಕವಾಗಿ ಹೇಳಿಕೊಳ್ಳಲು ನಿರಾಕರಿಸಿದ ಹಾಗೂ ಮತ್ತೊಂದು ಹುಡುಗಿಯೊಂದಿಗೆ ವಿವಾಹ ನಿಶ್ಚಯಿಸಿಕೊಳ್ಳುವ ಮೂಲಕ ವಂಚನೆ
ತನ್ನೊಂದಿಗೆ ಸಹಬಾಳ್ವೆ ನಡೆಸುವಂತೆ ಚಲಚಿತ್ರ ನಟಿಗೆ ಬೆನ್ನುಬಿದ್ದು ಕಾಟ ಕೊಡುತ್ತಿದ್ದ ಆರೋಪದ ಮೇರೆಗೆ ಉದ್ಯಮಿ ಹಾಗೂ ಚಲನಚಿತ್ರ ನಿರ್ಮಾಪಕನೊಬ್ಬನನ್ನು ಗೋವಿಂದರಾಜನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.