ರಾಜ್ಯದಲ್ಲಿ ಅನಧಿಕೃತ ಬಡಾವಣೆಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಪಹಲ್ಗಾಂ ಘಟನೆಗೆ ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯವೇ ಕಾರಣ. ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳುವ ಸಲುವಾಗಿ ಹಿಂದೂ-ಮುಸ್ಲಿಂ ವಿಷಯ ಚರ್ಚೆಗೆ ತರಲಾಗಿದೆ. ಕೇಂದ್ರ ಸರ್ಕಾರದ ಈ ನಡೆ ಖಂಡನೀಯ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ರಾಜ್ಯದಲ್ಲಿ ಕೆಲ ದಿನ ವಿರಾಮ ನೀಡಿದ ಮಳೆ ಮತ್ತೆ ಭಾನುವಾರದಿಂದ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಈ ಬಾರಿ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ.
ಸಾಯಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಮತ್ತು ರಿಸರ್ಚ್ನ ಸ್ಥಾಪಕ ಮಧುಸೂದನ್ ಸಾಯಿ ಅವರಿಗೆ ಫಿಜಿ ದೇಶ ತನ್ನ ಅತ್ಯುಚ್ಚ ನಾಗರಿಕ ಪ್ರಶಸ್ತಿ ‘ಕಂಪ್ಯಾನಿಯರ್ ಆಫ್ ದಿ ಆರ್ಡರ್ ಆಫ್ ಫಿಜಿ’ ನೀಡಿ ಪುರಸ್ಕರಿಸಿದೆ.
ಸ್ಮಾರ್ಟ್ ಮೀಟರ್ಗಳಿಗೆ ದುಬಾರಿ ಬೆಲೆ ನಿಗದಿಪಡಿಸಿರುವ ಬೆಸ್ಕಾಂ ಮತ್ತು ಸರ್ಕಾರದ ಕ್ರಮವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್
ಸಹಕಾರ ಬ್ಯಾಂಕ್ಗಳಿಗೆ 439.12 ಕೋಟಿ ರು. ವಂಚನೆ ಪ್ರಕರಣ ಸಂಬಂಧ ತಮ್ಮ ವಿರುದ್ಧ ನ್ಯಾಯಾಲಯಕ್ಕೆ ಸಿಐಡಿ ಆರೋಪಪಟ್ಟಿ ಸಲ್ಲಿಕೆ ಬೆನ್ನಲ್ಲೇ ದಿಢೀರ್ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಅವರು ಬ್ಯಾಂಕಿಗೆ 120 ಕೋಟಿ ರು. ಸಾಲ ಮರುಪಾವತಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಹೇಳಿಕೊಂಡು ಐಶ್ವರ್ಯಗೌಡ ಎಂಬಾಕೆ ಕೋಟ್ಯಂತರ ರು. ಮೌಲ್ಯದ ಚಿನ್ನ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ವಿನಯ್ ಕುಲಕರ್ಣಿಗೆ ಜಾರಿ ನಿರ್ದೇಶನಾಲಯದಿಂದ (ಇ.ಡಿ.) ಇದೀಗ ಬಂಧನ ಭೀತಿ ಶುರುವಾಗಿದೆ.
ಸ್ವಾತಂತ್ರ್ಯ ಹೋರಾಟಗಾರ ವಿ.ಡಿ. ಸಾವರ್ಕರ್ ಅವರನ್ನು ಬ್ರಿಟಿಷ್ ಸರ್ಕಾರದ ಸೇವಕ ಎಂದು ಟೀಕಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂಕೋರ್ಟ್, ‘ಸ್ವಾತಂತ್ರ್ಯ ಹೋರಾಟಗಾರರನ್ನು ಅಣಕಿಸ ಬೇಡಿ.
ಭಾರತದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ಹುಡುಕಿ ಗಡೀಪಾರು ಮಾಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ನೆಲೆಸಿರುವ ಪಾಕ್ ಪ್ರಜೆಗಳಿಗೆ ಆತಂಕ ಶುರುವಾಗಿದೆ.
ಪಹಲ್ಗಾಂ ಉಗ್ರ ದಾಳಿಯ ಬೆನ್ನಲ್ಲೇ ಪಾಕಿಸ್ತಾನಿಯರಿಗೆ ನೀಡಿದ್ದ 14 ರೀತಿಯ ವೀಸಾ ರದ್ದುಪಡಿಸಿದ್ದ ಕೇಂದ್ರ ಸರ್ಕಾರ, ಏ.27ರ ಗಡುವಿನೊಳಗೆ ಪಾಕ್ ಪ್ರಜೆಗಳು ದೇಶಬಿಡುವುದನ್ನು ಖಚಿತಪಡಿಸಿ ಎಂದು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.