ಭಾರತದಲ್ಲಿ ಗುರುತಿನ ಚೀಟಿಗಳಲ್ಲಿ ಪ್ರಮುಖವಾಗಿರುವ ಆಧಾರ್ ಕಾರ್ಡ್ನಿಂದ ಪ್ರೇರಣೆ ಪಡೆದು, ವಲಸೆ ಸಮಸ್ಯೆ ನಿವಾರಿಸಲು ಅದೇ ರೀತಿಯ ವ್ಯವಸ್ಥೆಯನ್ನು ಬ್ರಿಟನ್ನಲ್ಲಿ ಜಾರಿಗೆ ತರುವ ಬಗ್ಗೆ ಅಲ್ಲಿನ ಪ್ರಧಾನಿ ಕೀರ್ ಸ್ಟಾರ್ಮರ್ ಚಿಂತನೆ ನಡೆಸಿದ್ದಾರೆ.
ದೀಪಾವಳಿ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಕೆಎಸ್ಆರ್ ಬೆಂಗಳೂರು– ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
ತಮ್ಮ ಮನೆಗೆ ಜಾತಿ ಗಣತಿಗೆ ಬಂದ ಸರ್ಕಾರಿ ಶಾಲೆಯ ಶಿಕ್ಷಕಿಯನ್ನು ಕೂಡಿ ಹಾಕಿ ದುಂಡಾವರ್ತನೆ ತೋರಿದ ಆರೋಪದ ಮೇರೆಗೆ ಟೀ ವ್ಯಾಪಾರಿಯೊಬ್ಬ ಕೊಡಿಗೇಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಳೆದ ಒಂದು ವರ್ಷದ ಅವಧಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ದ್ವೇಷ, ಸುಳ್ಳು ಸುದ್ದಿ ಹಾಗೂ ಪ್ರಚೋದನಕಾರಿ ಬರಹ ಪ್ರಕಟಿಸಿದ ಸಂಬಂಧ 37 ಪ್ರಕರಣಗಳನ್ನು ದಾಖಲಿಸಿ 18 ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ರವಿ ಗೌಡ ನಿರ್ದೇಶಿಸಿ, ನಾಯಕನಾಗಿ ನಟಿಸಿರುವ ‘ಐ ಯಾಮ್ ಗಾಡ್’ ಚಿತ್ರದಲ್ಲಿ ಬರುವ ವಿಶೇಷ ಹಾಡಿನಲ್ಲಿ ಹೆಜ್ಜೆ ಹಾಕುವ ಮೂಲಕ ನಟ ದಿಗಂತ್ ಹಾಗೂ ನಿವೇದಿತಾ ಗೌಡ ಅವರು ಕಾಣಿಸಿಕೊಂಡಿದ್ದಾರೆ.
ಸುದೀಪ್ ನಟನೆಯ ‘ಮಾರ್ಕ್’ ಚಿತ್ರದ ಮೊದಲ ಹಾಡು ಸರೆಗಮಪ ಕನ್ನಡ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆ ಆಗಿದೆ. ‘ಸೈಕ್ ಸೈತಾನ್’ ಹೆಸರಿನ ಈ ಮಾಸ್ ಹಾಡಿಗೆ ಅನೂಪ್ ಭಂಡಾರಿ ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್, ಅಜನೀಶ್ ಲೋಕನಾಥ್, ಅನಿರುದ್ಧ ಶಾಸ್ತ್ರಿ ಹಾಡಿದ್ದಾರೆ.
ಕಾಂತಾರ 1’ ಸಿನಿಮಾದಲ್ಲಿ ಬರುವ ದೈವದ ಪಾತ್ರಗಳನ್ನು ಅನುಕರಿಸದೇ, ಜನರ ಧಾರ್ಮಿಕ ಭಾವನೆಗಳನ್ನು ಗೌರವಿಸಬೇಕೆಂದು ಹೊಂಬಾಳೆ ಫಿಲಂಸ್ ಪ್ರೇಕ್ಷಕರಲ್ಲಿ ಮನವಿ ಮಾಡಿದೆ.
ಮಹರ್ಷಿ ವಾಲ್ಮೀಕಿ ಶೋಷಿತ ಸಮುದಾಯದಲ್ಲಿ ಹುಟ್ಟಿ ಬದುಕನ್ನು ಬದಲಿಸುವಂತಹ ಮಹಾಕಾವ್ಯವನ್ನು ರೂಪಿಸಿದರು. ಅವರ ಮೌಲ್ಯಗಳು, ಅವರ ರಚನೆಗಳನ್ನು ಜನರಿಗೆ ತಿಳಿಸಲು ಎಸ್ಸಿಎಸ್ಪಿ/ಟಿಎಸ್ಪಿ ಅನುದಾನದ ಮೂಲಕ ದೆಹಲಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡುವ ಕೇಂದ್ರ ಸ್ಥಾಪನೆ ಮಾಡಲಾಗುವುದು.
ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಾರತ ಹಾಗೂ ವೆಸ್ಟ್ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಬ್ಯಾಟಿಂಗ್ ಸ್ನೇಹಿ ಪಿಚ್ ಬಳಸಲಾಗುತ್ತದೆ ಎಂದು ತಿಳಿದುಬಂದಿದೆ. ಅ.10ರಿಂದ ನವದೆಹಲಿಯಲ್ಲಿ ಪಂದ್ಯ ಆರಂಭಗೊಳ್ಳಲಿದೆ.