ಫ್ಯಾಶನ್ ಟ್ರೆಂಡ್ಗಳು ಹಬ್ಬದ ಸೀಸನ್ ಬಂದಾಗಲೆಲ್ಲ ಸಾಂಪ್ರದಾಯಿಕತೆಗೆ ಮುಖಮಾಡುತ್ತವೆ. ಸದ್ಯಕ್ಕೀಗ ಬಂದಿರೋ ಬಿಜ್ಯುವೆಲ್ಡ್ ಬ್ಲೌಸ್ ಟ್ರೆಂಡ್ ಪಾರಂಪರಿಕತೆಗೆ ಹೊಸತನದ ಕಸಿ ಮಾಡಿದ ಹಾಗಿದೆ. ಕತ್ತಿಗೆ ಹಾಕುವ ಆಭರಣಗಳನ್ನು ಅನಾಮತ್ತಾಗಿ ಎತ್ತಿ ಬ್ಲೌಸಿಗೆ ಫಿಕ್ಸ್ ಮಾಡಿಬಿಟ್ಟಿದ್ದಾರೆ.
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ ಚಾಪ್ಟರ್ 1’ ಆನ್ಲೈನ್ನಲ್ಲಿ 50 ಲಕ್ಷಕ್ಕೂ ಅಧಿಕ ಟಿಕೆಟ್ ಮಾರಾಟ ಕಂಡಿದೆ ಎಂದು ನಿರ್ಮಾಣಸಂಸ್ಥೆ ಹೊಂಬಾಳೆ ಫಿಲಂಸ್ ತಿಳಿಸಿದೆ.
ನಟಿ ಹರ್ಷಿಕಾ ಪೂಣಚ್ಚ ಅವರು ಮಹಿಳಾ ಪ್ರಧಾನ ಚಿತ್ರಕ್ಕೆ ನಾಯಕಿಯಾಗುತ್ತಿದ್ದಾರೆ. ಆ ಮೂಲಕ ತುಂಬಾ ದಿನಗಳ ನಂತರ ನಟಿ ಹರ್ಷಿಕಾ ಪೂಣಚ್ಚ ಅವರು ತೆರೆಗೆ ಮರಳುತ್ತಿದ್ದಾರೆ.
ಯತ್ನಾಳರು ‘ಅಮಿತ್ ಶಾ ಹಾಗೂ ಎಂ.ಬಿ.ಪಾಟೀಲರು ಎಲ್ಲಾ ಒಂದಾಗಿದ್ದಾಗ ನಮ್ಮದೇನಿದೆ. ಹಗಲೆಲ್ಲ ಅಮಿತ್ ಶಾ ಜೊತೆ ಮಾತಾಡ್ತೀರಿ... ಮುಂಜಾನೆದ್ದು ಖಂಡಿಸ್ತೀರಿ...’ ಎಂದು ಎಂ.ಬಿ.ಪಾಟೀಲರಿಗೆ ಟಾಂಗ್ ಕೊಟ್ಟರು.
ಜಾತಿಗಣತಿ ಸಮೀಕ್ಷೆಗೆ ಹೋಗಿದ್ದ ಶಿಕ್ಷಕಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ ಪರಿಣಾಮ ಶಿಕ್ಷಕಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾಸನ ಜಿಲ್ಲೆ ಬೇಲೂರಿನ ಹೊಯ್ಸಳ ನಗರದ ಬಡಾವಣೆಯಲ್ಲಿ ಭಾನುವಾರ ಈ ಘಟನೆ ನಡೆದಿದೆ.
ಹಸುವಿನ ಬಾಲಕ್ಕೆ ಸೆಂಟ್ ಸ್ಪ್ರೇ ಮಾಡಿ ಲೈಟರ್ನಿಂದ ಬಾಲಕನೋರ್ವ ಬೆಂಕಿ ಹಚ್ಚಿದ ಘಟನೆ ಚಿಕ್ಕಮಗಳೂರಿನ ವಿಜಯಪುರ ಬಡಾವಣೆಯಲ್ಲಿ ನಡೆದಿದೆ. 16 ವರ್ಷದ ಬಾಲಕನ ಕೃತ್ಯ ಎಸಗಿದ್ದು ಆತನ ವಿರುದ್ಧ ಸ್ಥಳೀಯರಲ್ಲಿ ಆಕ್ರೋಶ ಮೂಡಿಸಿದೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಳಿಕ ಕೇಂದ್ರದ ರೇಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರೂ ಜಾತಿ ಗಣತಿಗೆ ಬಂದಿದ್ದ ಗಣತಿದಾರರ ತರೇಹವಾರಿ ಪ್ರಶ್ನೆಗಳಿಗೆ ಗರಂ ಆಗಿದ್ದಾರೆ.
ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾರೂ ಮಾತನಾಡಬಾರದು ಎಂಬ ಹೈಕಮಾಂಡ್ ಎಚ್ಚರಿಕೆಯ ನಡುವೆಯೂ ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಕಾಂಗ್ರೆಸ್ ನಾಯಕರ ಹೇಳಿಕೆ ಮುಂದುವರಿದಿದೆ
ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿರುವಾಗಲೇ, ನವೆಂಬರ್ನಲ್ಲಿ ರಾಜ್ಯ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.
ಮಲೆ ಮಹದೇಶ್ವರ ವನ್ಯಜೀವಿಧಾಮದ ಪಚ್ಚೆದೊಡ್ಡಿಯಲ್ಲಿ ನಡೆದ ಹುಲಿ ಹತ್ಯೆ ಪ್ರಕರಣದಲ್ಲಿ ಐವರು ಆರೋಪಿಗಳು ಭಾಗಿಯಾಗಿರುವ ಶಂಕೆ ಇದ್ದು, ಈಗಾಗಲೇ ನಾಲ್ವರನ್ನು ಬಂಧಿಸಲಾಗಿದೆ. ಹಸುವನ್ನು ತಿಂದು ಹಾಕಿದ್ದಕ್ಕೆ ಪ್ರತೀಕಾರವಾಗಿ ಆರೋಪಿಗಳು ಸತ್ತ ಹಸುವೊಂದಕ್ಕೆ ವಿಷ ಬೆರೆಸಿದ್ದರು.