ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಮ್ಮ ಹೇಳಿಕೆ ಸಮರ್ಥಿಸಿಕೊಂಡಿದ್ದು, ‘ಸಿದ್ದರಾಮಯ್ಯ ಅವರ ಬಗ್ಗೆ ಸತ್ಯ ಹೇಳಿದರೆ ಹೊಗಳಿಕೆ ಹೇಗೆ?’ ಎಂದು ಪ್ರಶ್ನಿಸಿದ್ದಾರೆ.
ಕೊರೋನಾ ಕಾಲದ ಬಹುಕೋಟಿ ಹಗರಣ ಸಂಬಂಧ ಆರೋಪಿತ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ತನಿಖೆ ನಡೆಸಲು ಪೂರ್ವಾನುಮತಿ ನೀಡುವಂತೆ ಸರ್ಕಾರಕ್ಕೆ ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ) ಕೋರಿದೆ.
ಜಾತಿಗಣತಿ ವಿಚಾರದಲ್ಲಿ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ತುಳಿತಕ್ಕೆ ಒಳಗಾದವರಿಗೆ ಶಕ್ತಿ ತುಂಬಿ, ಎಲ್ಲರಿಗೂ ನ್ಯಾಯ ಒದಗಿಸಿಕೊಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ.
ವಿಶ್ವದ ನಂ1 ಎಐ ಸಿಆರ್ಎಂ ಆಗಿರುವ ಸೇಲ್ಸ್ಫೋರ್ಸ್ ಹಲವು ವರ್ಷಗಳಿಂದ ಭಾರತದಲ್ಲಿ ಹೂಡಿಕೆ ಮಾಡಿದೆ. ಭಾರತವು ಸೇಲ್ಸ್ಫೋರ್ಸ್ಗೆ ಪ್ರಮುಖ ಜಾಗತಿಕ ಕೇಂದ್ರವಾಗಿದೆ
ದುಷ್ಕರ್ಮಿಯ ಗುಂಡಿನ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡು ಬೆಂಗಳೂರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೈ ಅವರನ್ನು ಭೇಟಿಯಾಗಿ ರಾಮನಗರ ಉಪವಿಭಾಗ ಡಿವೈಎಸ್ಪಿ ಪಿ.ಶ್ರೀನಿವಾಸ್ ಭಾನುವಾರ ಹೇಳಿಕೆ ದಾಖಲು ಮಾಡಿಕೊಂಡಿದ್ದಾರೆ.
ವಿವಿಧ ಪರೀಕ್ಷೆಗಳಲ್ಲಿ ಹೆಣ್ಣು ಮಕ್ಕಳ ತಾಳಿ, ಓಲೆ ತೆಗೆಸಿದ ಪ್ರಕರಣ ಸಂಬಂಧ ಕೇಂದ್ರದ ಮಹಿಳಾ ಆಯೋಗ (ಎನ್ಸಿಡಬ್ಲ್ಯು)ಕ್ಕೆ ಪತ್ರ ಬರೆಯುತ್ತೇನೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಜನಿವಾರ ತೆಗೆಯದ ಕಾರಣಕ್ಕೆ ಸಿಇಟಿ ಗಣಿತ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿ ಸುಚಿವ್ರತ್ ಕುಲಕರ್ಣಿಗೆ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಪ್ರವೇಶ ನೀಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ.
ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯಿಂದ ₹2.70 ಲಕ್ಷ ಪಡೆದು ವಂಚಿಸಿದ ಆರೋಪದಡಿ ಇಬ್ಬರ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಇದೀಗ, ನಿವೃತ್ತ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ.ಖುರೇಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ಖುರೇಶಿ ಅವರು ಎಲೆಕ್ಷನ್ ಕಮಿಷನರ್ ಆಗಿರಲಿಲ್ಲ, ಮುಸ್ಲಿಂ ಕಮಿಷನರ್ ಆಗಿದ್ದರು’ ಎಂದು ಆರೋಪಿಸಿದ್ದಾರೆ.
‘ಎಲ್ಲಾದರೂ ಹೋಗಿ ಸಾಯಿ’ ಎಂದು ವ್ಯಕ್ತಿಯೊಬ್ಬರಿಗೆ ಹೇಳುವುದು ಆತ್ಮಹತ್ಯೆಗೆ ಪ್ರಚೋದನೆ ನೀಡಿದಂತಾಗುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.