ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡಿ ಕಿರುಕುಳ ನೀಡುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದ್ದರೂ ಇವರಲ್ಲಿ ಅನೇಕರು ಜಿಎಸ್ಟಿ ನೋಂದಣಿ ಮಾಡಿಕೊಳ್ಳದೆ ‘ಯುಪಿಐ’ ಮೂಲಕವೇ ಮಿತಿ ಮೀರಿ ಲಕ್ಷಾಂತರ ರು. ಸ್ವೀಕರಿಸಿರುವುದು ಪರಿಶೀಲನೆ ವೇಳೆ ಕಂಡು ಬಂದಿದೆ.
ವೀಕೆಂಡ್ ಕೃಷಿಕನೀಗ ವಾರ್ಷಿಕ ಎರಡೂವರೆ ಕೋಟಿ ರುಪಾಯಿ ವಹಿವಾಟು ನಡೆಸುವ ಉದ್ಯಮಿ ಆಗಿ ಬೆಳೆದಿದ್ದಾರೆ. ಇವರ ಆಹಾರ ಉತ್ಪನ್ನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೂ ಗುರುತಿಸಿ ಮನ್ ಕಿ ಬಾತ್ನಲ್ಲಿ ಪ್ರಸ್ತಾಪಿಸಿದ್ದಾರೆ.
ಅಂಗನವಾಡಿ ಬಳಿಕ ಶಾಲೆಗೆ ಸೇರುವ ಮಕ್ಕಳ ಅನುಕೂಲಕ್ಕಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ 12 ಸಂಖ್ಯೆಯ ಅಪಾರ್ ಐಡಿಯನ್ನು(ಅಟೋಮೆಟೆಡ್ ಪರ್ಮನೆಂಟ್ ಅಕಾಡೆಮಿಕ್ ಅಕೌಂಟ್ ರಿಜಿಸ್ಟ್ರಿ) ಶೀಘ್ರ ಜಾರಿಗೆ
ರಾಜಧಾನಿ ಬೆಂಗಳೂರು, ಕರಾವಳಿ, ಮಲೆನಾಡು ಸೇರಿ 14 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ನ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಒಬ್ಬ ಸಹೋದರ ಕುವೈತ್ನಲ್ಲಿದ್ದ ಉದ್ಯೋಗ ಬಿಟ್ಟು ಕರ್ನಾಟಕ ಗಡಿ ಜಿಲ್ಲೆ ಬೀದರ್ಗೆ ಬಂದರೆ, ಬೆಂಗಳೂರಲ್ಲಿ ನೆಲೆಸಿದ್ದ ಮತ್ತೊಬ್ಬ ಸಾಫ್ಟ್ವೇರ್ ಇಂಜಿನಿಯರಿಂಗ್ ಉದ್ಯೋಗ ಮಾಡ್ತಿದ್ದ ಸಹೋದರನೂ ಊರು ಸೇರಿದ್ದರು.
ಸೋಲೆ ಗೆಲುವಿನ ಮೆಟ್ಟಿಲು ಅನ್ನೋ ಮಾತು ಇಂಥವರನ್ನು ನೋಡಿಯೇ ಹುಟ್ಟಿರಬೇಕು. ಬಣ್ಣ ಬಣ್ಣದ ಕ್ಯಾಪ್ಸಿಕಂ ಬೆಳೆದು ಯಾರೂ ಕೊಳ್ಳೋರಿಲ್ಲದೆ ನಷ್ಟದಲ್ಲಿದ್ದಾಗ ಹುಟ್ಟಿದ ಬ್ಯಾಂಡ್ 'ಮಜಾ' ಉಪ್ಪಿನಕಾಯಿ.
ಗೋಕರ್ಣದ ರಾಮೇಶ್ವರ ಗುಹೆಯಲ್ಲಿ ಪತ್ತೆಯಾಗಿದ್ದ ರಷ್ಯಾ ಮಹಿಳೆ ಹಾಗೂ ಇಬ್ಬರು ಮಕ್ಕಳನ್ನು ನೋಡಲು ಬಂದ ರಷ್ಯಾ ಮಹಿಳೆಯ ಮಾಜಿ ಪ್ರಿಯಕರ ಇಸ್ರೇಲ್ನ ಡ್ರೋರ್ ಬರಿಗೈಯಲ್ಲಿ ವಾಪಸ್ಸಾಗಿದ್ದಾರೆ.
ಜನಪ್ರಿಯ ನಿರೂಪಕಿ ಹಾಗೂ ನಟಿ ಅನುಶ್ರೀ ಅವರ ವಿವಾಹ ಆ. 28ರಂದು ಜರುಗಲಿದೆ ಎಂದು ಮೂಲಗಳು ತಿಳಿಸಿವೆ. ಅವರ ವಿವಾಹ ಕೊಡಗು ಮೂಲದ ಉದ್ಯಮಿ ರೋಷನ್ ಅವರೊಂದಿಗೆ ನಿಶ್ಚಯವಾಗಿದೆ ಎನ್ನಲಾಗುತ್ತಿದೆ.
ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕುರಿತು ಬಿಜೆಪಿ ಮತ್ತು ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ತನ್ನ ವಾಗ್ದಾಳಿ ಮುಂದುವರೆಸಿದೆ.
ಪ್ರಸ್ತುತ ರಾಜ್ಯದಲ್ಲಿ ಸರ್ಕಾರಿ ಉದ್ಯೋಗ, ಶಿಕ್ಷಣ ಸಂಸ್ಥೆಗಳು ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗ (ಬಿ.ಸಿ.)ಗಳಿಗೆ ನೀಡಲಾಗುತ್ತಿರುವ ಮೀಸಲಾತಿಯನ್ನು ಶೇ.23ರಿಂದ ಶೇ.42ಕ್ಕೆ ಏರಿಸಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ ರೆಡ್ಡಿ ಘೋಷಿಸಿದ್ದಾರೆ.