ಇಲ್ಲಿನ ಶಂಕರಘಟ್ಟದಲ್ಲಿರುವ ಕುವೆಂಪು ವಿವಿಯಲ್ಲಿ ಏ.10ರಿಂದ ಅಮೃತ್ ನೋನಿ, ಕೃಷಿ ವಿವಿ ಸಹಯೋಗದಲ್ಲಿ ನೋನಿಯ ಸಂಶೋಧನಾ ಪ್ರವೃತ್ತಿಗಳು ಮತ್ತು ಆರೋಗ್ಯಕರ ಬದುಕಿಗೆ ಜೀವವೈವಿಧ್ಯತೆಯ ಸುಸ್ಥಿರ ಬಳಕೆ'''' ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ ಶನಿವಾರ ತೆರೆ ಕಂಡಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಅಬ್ಬರ ಮುಂದುವರೆದಿದ್ದು, ಸೋಮವಾರ ಹಲವೆಡೆ ಗುಡುಗು, ಆಲಿಕಲ್ಲು ಸಹಿತ ಮಳೆ ಸುರಿದಿದ್ದು, ಚಿಕ್ಕಬಳ್ಳಾಪು ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಸಿಡಿಲು ಬಡಿದು ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ.
ಅರಣ್ಯ ಪ್ರದೇಶದಲ್ಲಿ ಜೀಪ್ ರೇಸ್ ನಡೆಯುವಾಗ ಕಾಡಾನೆಯೊಂದು ದಾಳಿ ಮಾಡಿದ್ದು, ಒಂಟಿಸಲಗದ ದಾಳಿಯಿಂದ ಯುವಕನೊಬ್ಬ ಆಶ್ಚರ್ಯಕರ ರೀತಿಯಲ್ಲಿ ಪಾರಾದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ನಡೆದಿದೆ.
ಬಿಬಿಎಂಪಿ ಮಾದರಿಯಲ್ಲೇ ಕುಡಿಯುವ ನೀರಿನ ಬಾಕಿ ವಸೂಲಿಗೆ ಬೆಂಗಳೂರು ಜಲಮಂಡಳಿ ಶೀಘ್ರದಲ್ಲಿ ಒನ್ಟೈಮ್ ಸೆಟಲ್ಮೆಂಟ್ (ಒಟಿಎಸ್) ಜಾರಿಗೊಳಿಸಲು ನಿರ್ಧರಿಸಿದೆ.
‘ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದ ದಲಿತರು, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಿದ್ದೇವೆ. ಮುಸ್ಲಿಮರಿಗೂ ನ್ಯಾಯ ಸಿಗಬೇಕು ಎಂಬುದು ನಮ್ಮ ನಿಲುವು.
ಹಿಂದುಳಿದ ವರ್ಗಗಳ ಆಯೋಗವು ನಡೆಸಿದ್ದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಗೆ ಮೊದಲಿನಿಂದಲೂ ತೀವ್ರ ವಿರೋಧ ವ್ಯಕ್ತಪಡಿಸುತ್ತಲೇ ಬಂದಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾವು, ಇದೀಗ ವರದಿಯ ಸಾಧಕ-ಬಾಧಕಗಳನ್ನು ಪರಿಶೀಲಿಸಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಲು ಮುಂದಾಗಿದೆ.
ರಾಜ್ಯ ಸಚಿವ ಸಂಪುಟದಲ್ಲಿ ಮಂಡನೆಯಾದ ಜಾತಿ ಗಣತಿ ವರದಿಯಲ್ಲಿನ ಜಾತಿವಾರು ಅಂಕಿ ಅಂಶದ ಬಗ್ಗೆ ವಿಪಕ್ಷ ಬಿಜೆಪಿ-ಜೆಡಿಎಸ್ನಿಂದ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಇದೇ ಮೊದಲ ಬಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಹಿರಿಯ ಪತ್ರಕರ್ತ ಎಸ್.ಕೆ.ಶ್ಯಾಮಸುಂದರ್ ಸೋಮವಾರ ರಾತ್ರಿ 9.30ಕ್ಕೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಸ್ತಂಭನದಿಂದ ಕೊನೆಯುಸಿರೆಳೆದಿದ್ದಾರೆ. ಅಲ್ಪಕಾಲದ ಅನಾರೋಗ್ಯದಿಂದ ಅವರು ಹತ್ತು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ 71 ವರ್ಷ ವಯಸ್ಸಾಗಿತ್ತು.
ಆಡಿರುವ 6 ಪಂದ್ಯಗಳ ಪೈಕಿ 5ರಲ್ಲಿ ಸೋತಿರುವ 5 ಬಾರಿ ಚಾಂಪಿಯನ್ ಚೆನ್ನೈ ತಂಡ ಸೋಮವಾರ ಲಖನೌ ವಿರುದ್ಧ ಆಡಲಿದೆ. ತಂಡಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಪ್ಲೇ-ಆಫ್ ಪ್ರವೇಶಿಸುವ ತಂಡದ ಆಸೆ ಜೀವಂತವಾಗಿ ಉಳಿಯಬೇಕಿದ್ದರೆ ಗೆಲುವು ಅತ್ಯಗತ್ಯ. ಸೋತರೆ ತಂಡದ ಹಾದಿ ಮತ್ತಷ್ಟು ಕಠಿಣಗೊಳ್ಳಲಿದೆ.
ಈ ಬಾರಿ ಐಪಿಎಲ್ನಲ್ಲಿ ತವರಿನ 2 ಪಂದ್ಯಗಳಲ್ಲೂ ಸೋತರೂ, ತವರಿನಾಚೆ ಕ್ರೀಡಾಂಗಣಗಳಲ್ಲಿ ಆರ್ಸಿಬಿ ಗೆಲುವಿನ ಜೈತ್ರಯಾತ್ರೆ ಮುಂದುವರಿದಿದೆ. ಕೋಲ್ಕತಾ, ಚೆನ್ನೈ ಹಾಗೂ ಮುಂಬೈ ಬಳಿಕ ಜೈಪುರದಲ್ಲೂ ಬೆಂಗಳೂರು ತಂಡ ಜಯಭೇರಿ ಮೊಳಗಿಸಿದೆ.