ಬಿಎಸ್ಎನ್ಎಲ್ನ ಸ್ವದೇಶಿ 4ಜಿ ನೆಟ್ವರ್ಕ್ ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಲೋಕಾರ್ಪಣೆ ಮಾಡಿದ್ದಾರೆ. ಇದರೊಂದಿಗೆ ಭಾರತವು ಸ್ವದೇಶಿ ದೂರಸಂಪರ್ಕ ತಂತ್ರಜ್ಞಾನ ಹೊಂದಿರುವ ಹಾಗೂ ಸ್ವದೇಶಿ ದೂರಸಂಪರ್ಕ ಉಪಕರಣಗಳನ್ನು ಉತ್ಪಾದಿಸುವ 5 ರಾಷ್ಟ್ರಗಳ ಪಟ್ಟಿಗೆ ಸೇರ್ಪಡೆಯಾಗಿದೆ.
ದೇಶದ ಅನೇಕ ಕಡೆ ಉದ್ವಿಗ್ನ ವಾತಾವರಣಕ್ಕೆ ಕಾರಣವಾಗಿರುವ ‘ಐ ಲವ್ ಮೊಹಮ್ಮದ್’ ಅಭಿಯಾನವನ್ನು ಬೆಂಬಲಿಸಿ ಪ್ರತಿಭಟನೆಗೆ ಕರೆ ನೀಡಿದ್ದ ಸ್ಥಳೀಯ ಧರ್ಮಗುರು ಮತ್ತು ಇತ್ತೆಹಾದ್-ಎ-ಮಿಲ್ಲತ್ ಕೌನ್ಸಿಲ್ ಮುಖ್ಯಸ್ಥ ತೌಕೀರ್ ರಾಜಾ ಖಾನ್ ಅವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ನಾನು ಬಸವ ಧರ್ಮ (ಲಿಂಗಾಯತ)ದ ಅನುಯಾಯಿಯಾಗಿದ್ದು, ಜಾತಿ ಆಧಾರಿತ ಜನಗಣತಿಯಲ್ಲಿ ಧರ್ಮದ ಕಾಲಂನಲ್ಲಿ ಲಿಂಗಾಯತ ಧರ್ಮ ಎಂದೇ ಬರೆಸುತ್ತೇನೆ. ಇನ್ನು, ಲಿಂಗಾಯತ ಮತ್ತು ವೀರಶೈವರಲ್ಲಿ ಸೈದ್ಧಾಂತಿಕ ಭಿನ್ನಾಭಿಪ್ರಾಯವಿದ್ದು, ಇಬ್ಬರ ಆಚರಣೆ ಬೇರೆಬೇರೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.
ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳ ಪೈಕಿ ಅನ್ನಭಾಗ್ಯ ಮತ್ತು ಶಕ್ತಿ ಯೋಜನೆಗಳು ದುರುಪಯೋಗ ಆಗುತ್ತಿರುವುದು ಗಮನಕ್ಕೆ ಬಂದಿದ್ದು, ಇದಕ್ಕೆ ಕಡಿವಾಣ ಹಾಕಲು ಯೋಜನೆಗಳಲ್ಲಿ ಕೆಲ ಬದಲಾವಣೆ ತರಲು ಚಿಂತನೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿ ದಿನ ಶೇ.10ರಷ್ಟು ಮನೆಗಳ ಸಮೀಕ್ಷೆಯ ಗುರಿ ನೀಡಿದ ಬೆನ್ನಲ್ಲೇ ಆಮೆಗತಿಯಲ್ಲಿ ಸಾಗಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ(ಜಾತಿ ಗಣತಿ) ಕಾರ್ಯ ಶನಿವಾರ ವೇಗ ಪಡೆದಿದೆ. ಆದರೆ, ಮುಖ್ಯಮಂತ್ರಿ ನಿಗದಿಪಡಿಸಿದ ಗುರಿ ಮುಟ್ಟಲು ಸಾಧ್ಯವಾಗಿಲ್ಲ.
ಒಂದೆಡೆ ಕಳೆದ 2 ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ, ಇನ್ನೊಂದೆಡೆ ಮಹಾರಾಷ್ಟ್ರದ ಜಲಾಶಯಗಳಿಂದ ಭೀಮಾ ನದಿಗೆ 3.50 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಮಾಡಿದ ಪರಿಣಾಮ ಉತ್ತರ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಭಾರೀ ಪ್ರವಾಹ ಕಾಣಿಸಿಕೊಂಡಿದೆ
‘500 ವರ್ಷಗಳ ಹಿಂದಿನ ಐತಿಹಾಸಿಕ ಸಿನಿಮಾವೊಂದರ ಸಿದ್ಧತೆಯಲ್ಲಿದ್ದೇನೆ. ಇದಕ್ಕಾಗಿ ಕಟ್ಟುನಿಟ್ಟಿನ ವರ್ಕೌಟ್, ಡಯೆಟ್ ಜೊತೆಗೆ ಪಾತ್ರದ ಮಾನಸಿಕ ತಯಾರಿಯಲ್ಲೂ ತೊಡಗಿಸಿಕೊಂಡಿದ್ದೇನೆ.’
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ ಚಾಪ್ಟರ್ 1’ ಟಿಕೆಟ್ ಬುಕಿಂಗ್ನಲ್ಲಿ ದಾಖಲೆ ಬರೆದಿದೆ. ಕೇವಲ 34 ನಿಮಿಷಗಳಲ್ಲಿ 10,000 ಟಿಕೆಟ್ ಸೇಲ್ ಆಗುವ ಮೂಲಕ ಈ ಸಾಧನೆ ಮಾಡಿದ ಮೊದಲ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ರಾಜ್ಯದಲ್ಲಿ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಿರುವುದು ಜನರು ಅಥವಾ ಕುಟುಂಬಗಳ ಸ್ವಯಂ ಇಚ್ಛೆಗೆ ಬಿಡಲಾಗಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸ್ಪಷ್ಟಪಡಿಸಿದೆ
ಧರ್ಮಸ್ಥಳದ ಮಂಜುನಾಥಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತರಲು ರಾಜ್ಯ ಸರ್ಕಾರದ ಮೇಲೆ ಯಾವುದೇ ಒತ್ತಡ ಇಲ್ಲ ಎಂದು ಮುಜರಾಯಿ ಇಲಾಖೆ ಸಚಿವ ಆರ್.ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.