ಪೊಲೀಸ್ ಪೇದೆ ಮತ್ತು ಪೊಲೀಸ್ ಉಪ ನಿರೀಕ್ಷಕ ಹುದ್ದೆಗಳ ನೇಮಕಾತಿ ಸಂಬಂಧ ಒಂದು ಬಾರಿಗೆ ವಯೋಮಿತಿ ಸಡಿಲಿಸಲು ಸರ್ಕಾರ ನಿರ್ಧರಿಸಿದ್ದು, ಈ ಕುರಿತು ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ತಿದ್ದುಪಡಿ ತರಲು ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ತಾಯಂದಿರ ಮರಣ ಪ್ರಮಾಣ ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆ ಮತ್ತು ಹೆಚ್ಚು ಹೆರಿಗೆಯಾಗುವ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ದಿನದ 24 ಗಂಟೆಯೂ ತಜ್ಞ ವೈದ್ಯರು ಮತ್ತು ಇತರ ಸಿಬ್ಬಂದಿ ಲಭ್ಯ ಇರುವಂತೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ - ದಿನೇಶ್ ಗುಂಡೂರಾವ್ ತಿಳಿಸಿದರು.
ರಾಜ್ಯದ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಶನಿವಾರ, ಭಾನುವಾರ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ನ ಎಚ್ಚರಿಕೆ ನೀಡಿದೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ
ಕೋರಮಂಗಲದ 1ನೇ ಬ್ಲಾಕ್ನ ವೆಂಕಟಾಪುರದಲ್ಲಿ ಕೇವಲ 750 ಚದರಡಿಯಲ್ಲಿ ಬರೋಬ್ಬರಿ 6 ಮಹಡಿಯ ಕಟ್ಟಡವು ಗೃಹ ಪ್ರವೇಶಕ್ಕೂ ಮುನ್ನವೇ ಕುಸಿಯುತ್ತಿದ್ದು, ಶುಕ್ರವಾರ ತೆರವು ಕಾರ್ಯ ಆರಂಭಿಸಲಾಗಿದೆ.
ಹಿಂದಿ ಸಮಿತಿಗಳು ಸಾಮ್ರಾಜ್ಯಶಾಹಿಯ ಕರಾಳ ಮುಖ. ಇದು ಸ್ಥಳೀಯ ಭಾಷೆಗಳಿಗೆ ಹಿನ್ನಡೆ. ಇಂತಹ ಸಮಿತಿಗಳನ್ನು ನಡೆಸುವವರು ಹಾಗೂ ಈ ಬದಲಾವಣೆಯ ವಿರುದ್ಧ ಎಲ್ಲರೂ ಧ್ವನಿಯೆತ್ತಬೇಕಾದ ಅನಿವಾರ್ಯಯತೆಯಿದೆ
ಅನೌಪಚಾರಿಕ ಎನಿಸಿದ್ದ ಭಾರತ ಹಾಗೂ ಶ್ರೀಲಂಕಾ ನಡುವಿನ ಏಷ್ಯಾಕಪ್ ಸೂಪರ್-4 ಪಂದ್ಯ ರೋಚಕವಾಗಿ ಅಂತ್ಯಗೊಂಡಿತು. ಇದೇ ಮೊದಲ ಬಾರಿಗೆ ಈ ಟೂರ್ನಿಯಲ್ಲಿ ಪಂದ್ಯವೊಂದು ದೊಡ್ಡ ಮೊತ್ತಕ್ಕೆ ಸಾಕ್ಷಿಯಾಯಿತು.
ಬೀದಿ ಕಾಮಣ್ಣರ ಹಾವಳಿ ಸೇರಿದಂತೆ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯಗಳ ತಡೆಗೆ ಉತ್ತರ ವಿಭಾಗದಲ್ಲಿ ‘ರಾಣಿ ಚೆನ್ನಮ್ಮ ಪಡೆ’ ಯನ್ನು ಕಟ್ಟಿ ಡಿಸಿಪಿ ಬಿ.ಎಸ್.ನೇಮಗೌಡ ಕಾರ್ಯಾಚರಣೆಗಿಳಿಸಿದ್ದಾರೆ.
ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಭಾಯಿಸಲು ನೈಋತ್ಯ ರೈಲ್ವೆಯು ಬೆಂಗಳೂರಿನ ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚರಿಸಲಿದೆ. ಸೆ.30ರಂದು ರಾತ್ರಿ 11.55ಕ್ಕೆ ರೈಲು (06257) ಯಶವಂತಪುರದಿಂದ ಹೊರಟು ಮರುದಿನ ಬೆಳಗ್ಗೆ 11.15ಕ್ಕೆ ಮಂಗಳೂರು ತಲುಪಲಿದೆ
‘ಮಾರ್ಕ್’ ಚಿತ್ರದ ನಿರ್ದೇಶಕ ವಿಜಯ್ ಕಾರ್ತಿಕೇಯ ಅವರಿಗೆ ಕಿಚ್ಚ ಸುದೀಪ್ ಐಷಾರಾಮಿ ಸ್ಕೋಡಾ ಕುಶಾಕ್ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ‘ಮಾರ್ಕ್’ ಚಿತ್ರದ ಚಿತ್ರೀಕರಣ ಪೂರ್ಣಗೊಂಡ ನಂತರ ಈ ಉಡುಗೊರೆ ನೀಡಲಾಗಿದೆ ಎನ್ನಲಾಗಿದೆ.