ಸೇತುವೆ ಮೇಲೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ನವ ದಂಪತಿ ಸೆಲ್ಫಿ ವಿಚಾರಕ್ಕಾಗಿ ಜಗಳವಾಡಿದ್ದು, ಈ ವೇಳೆ ನನ್ನನ್ನು ನದಿಗೆ ತಳ್ಳಿದ್ದಾಳೆ ಎಂದು ಪತ್ನಿಯ ವಿರುದ್ಧ ಪತಿ ಆರೋಪ ಮಾಡಿರುವ ಘಟನೆ ತಾಲೂಕಿನ ಗುರ್ಜಾಪುರ ಸಮೀಪದ ಕೃಷ್ಣಾ ನದಿ ಸೇತುವೆ ಮೇಲೆ ಜರುಗಿದೆ.
ಬೀದಿ ನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ.
ದೇವನಹಳ್ಳಿಯ ಜಮೀನು ಸ್ವಾಧೀನ ವಿರೋಧಿಸಿ ರೈತರ ಹೋರಾಟ ತೀವ್ರಗೊಂಡ ಬೆನ್ನಲ್ಲೇ ಇದೇ ಭಾಗದ ಕೆಲ ರೈತರು ಎಕರೆಗೆ 3.5 ಕೋಟಿ ರು. ಪರಿಹಾರ ನೀಡಿ ಜಮೀನು ಸ್ವಾಧೀನಪಡಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ನೀಡಿದ್ದಾರೆ.
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾದ ಹಾಡಿನ ಚಿತ್ರೀಕರಣ ನಾಳೆಯಿಂದ (ಜು.13) ಥೈಲ್ಯಾಂಡ್ನಲ್ಲಿ ನಡೆಯಲಿದೆ. ಹತ್ತು ದಿನಗಳಿಗೂ ಹೆಚ್ಚು ಕಾಲ ಚಿತ್ರತಂಡ ಥೈಲ್ಯಾಂಡ್ನ ಫುಕೆಟ್ನಲ್ಲಿ ಚಿತ್ರೀಕರಣ ನಡೆಸಲಿದೆ.
ಅಧ್ಯಾತ್ಮ ಗುರು ಶ್ರೀ ಶ್ರೀ ರವಿಶಂಕರ ಗುರೂಜಿ ಅವರ ಬಯೋಪಿಕ್ ‘ವೈಟ್’ ಸೆಟ್ಟೇರಲು ಸಿದ್ಧವಾಗಿದೆ. ಇದರಲ್ಲಿ ಬಾಲಿವುಡ್ ನಟ ವಿಕ್ರಾಂತ್ ಮಾಸಿ ಅವರು ರವಿಶಂಕರ ಗುರೂಜಿ ಪಾತ್ರ ನಿರ್ವಹಿಸಲಿದ್ದು, ಆ ಪಾತ್ರದಲ್ಲಿ ನಟಿಸಲು ಸೂಕ್ತ ತಯಾರಿ ನಡೆಸುತ್ತಿದ್ದಾರೆ.
ಚಿತ್ರರಂಗ ಎಂಬ ಸಾಮ್ರಾಜ್ಯದಲ್ಲಿ ಕಳೆದ 40 ವರ್ಷಗಳಿಂದ ರಾಜನಾಗಿಯೇ ಇರುವ ವ್ಯಕ್ತಿಯ ಜನ್ಮದಿನ ಇದು. ಆ ವ್ಯಕ್ತಿಯೇ ನಮ್ಮ ‘ಯುವರಾಜ’... ಪ್ರೀತಿಯ ಶಿವ‘ರಾಜ’.
ಕೇಂದ್ರ ಕಾರಾಗೃಹದಲ್ಲಿ ಉಗ್ರರಿಗೆ ನೆರವು ನೀಡಿದ ಆರೋಪದಡಿ ಬಂಧಿಸಲಾಗಿರುವ ಮೂವರು ಆರೋಪಿಗಳ ವಿಚಾರಣೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಅಧಿಕಾರಿಗಳು ತೀವ್ರಗೊಳಿಸಿದ್ದಾರೆ
ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರೆದಿದ್ದು, ಸಾವಿನ ಸಂಖ್ಯೆ ಏರುತ್ತಲೇ ಇವೆ. ಶುಕ್ರವಾರ ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ತಲಾ ಒಬ್ಬರು ಹಾರ್ಟ್ ಅಟ್ಯಾಕ್ಗೆ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಒಟ್ಟು ಆರು ದಿನ 100ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಶಾಸಕರೊಂದಿಗೆ ಪ್ರತ್ಯೇಕ ಸಭೆ ನಡೆಸಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಜು.16ಕ್ಕೆ ಬೆಂಗಳೂರಿಗೆ ಆಗಮಿಸುತ್ತಿದ್ದು, ಸಚಿವರೊಂದಿಗೆ ಒನ್ ಟು ಒನ್ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಶೀಲ ಶಂಕಿಸಿ ತನ್ನ ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದ ಆರೋಪದ ಮೇರೆಗೆ ಕಿರುತೆರೆ ನಟಿಯೊಬ್ಬರ ಪತಿಯನ್ನು ಹನುಮಂತನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.