ಅನಧಿಕೃತ ಆಸ್ತಿಗಳಿಗೆ ಪ್ರತ್ಯೇಕ ಖಾತಾ ನೀಡಿ ದಂಡ ವಿಧಿಸಿ ತೆರಿಗೆ ವ್ಯಾಪ್ತಿಗೆ ತರಲು ಅವಕಾಶ ಮಾಡಿಕೊಡುವ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ -2025ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು, ರಾಜ್ಯ ಸರ್ಕಾರವು ಕಾಯಿದೆ ಜಾರಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಸೈಬರ್ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಗೂ ಆ ಪ್ರಕರಣಗಳ ತನಿಖೆ ಸಲುವಾಗಿ ಪ್ರತ್ಯೇಕವಾಗಿ ಸ್ಥಾಪಿಸಿರುವ ಸೈಬರ್ ತನಿಖಾ ಘಟಕಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದೆ.
ಮನೆ ಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಇತರೆ ಆರೋಪಿಗಳ ಮೇಲಿನ ವಿಚಾರಣೆಗೆ ತಡೆ ನೀಡಲಾಗಿದೆ ಎಂಬ ಆಧಾರದಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಜಾಮೀನು ಕೋರಲಾಗದು ಎಂದು ಹೈಕೋರ್ಟ್ ಮೌಖಿಕವಾಗಿ ಅಭಿಪ್ರಾಯ ವ್ಯಕ್ತಪಡಿಸಿದೆ.
ಈರುಳ್ಳಿ ಮತ್ತು ಟೊಮೆಟೋ ಬೆಲೆ ದಿಢೀರ್ ಕುಸಿತ ಕಂಡಿದ್ದು, ಆಕ್ರೋಶಗೊಂಡ ಬೆಳೆಗಾರರು ಈರುಳ್ಳಿ ಮತ್ತು ಟೊಮೆಟೋವನ್ನು ರಸ್ತೆಗೆ ಚೆಲ್ಲಿ ಪ್ರತಿಭಟನೆ ನಡೆಸಿದ ಘಟನೆ ಹೂವಿನಹಡಗಲಿಯಲ್ಲಿ ನಡೆದಿದೆ.
ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಗಂಡಸರಿಗೆ ಸೀರೆ ಉಡಿಸಿ ಮಹಿಳೆಯರು ಪಾಲ್ಗೊಂಡ ದಾಖಲೆ ತೋರಿಸಿ ಹಣ ಲಪಟಾಯಿಸಲು ನಡೆದ ಸಂಚೊಂದು ಬಹಿರಂಗವಾಗಿದೆ.
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಈಗಲೂ ನಮ್ಮ ಟೀಮ್ನಲ್ಲಿದ್ದಾರೆ. ಬಿಜೆಪಿಯಿಂದ ಯತ್ನಾಳ್ ತಾಂತ್ರಿಕವಾಗಿ ಉಚ್ಚಾಟನೆಯಾಗಿದ್ದರೂ ನಮ್ಮ ಜೊತೆಗಿದ್ದಾರೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಉತ್ತಮ ಭವಿಷ್ಯವಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿ ಆಗುವ ಅವಕಾಶವಿದೆ ಎಂದು ಶಾಸಕ ಜಿ.ಟಿ. ದೇವೇಗೌಡ ಭವಿಷ್ಯ ನುಡಿದಿದ್ದಾರೆ.
ಬೆಂಗಳೂರಿನಂತಹ ದೊಡ್ಡ ನಗರದಲ್ಲಿ ಅಲ್ಲೊಂದು ಇಲ್ಲೊಂದು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ನಡೆಯುತ್ತವೆ. ಅದು ಸ್ವಾಭಾವಿಕವಾಗಿ ಜನರ ಗಮನ ಸೆಳೆಯುತ್ತದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಅಹಿಂದ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಹಿಂದುಳಿದವರು ಮತ್ತು ದಲಿತರನ್ನು ಮರೆತು, ಕೇವಲ ಅಲ್ಪಸಂಖ್ಯಾತರ ನಾಯಕರಾಗಿ ಉಳಿದಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಹಳ್ಳಿಗಳಿಗೆ ಬೆಂಗಳೂರು ಜಲ ಮಂಡಳಿಯಿಂದಲೇ ಕುಡಿಯುವ ನೀರು ಪೂರೈಸಲು ಚಿಂತನೆ ನಡೆದಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.