ಚಿನ್ನಯ್ಯ ಮತ್ತು ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಪ್ರಕರಣದಲ್ಲಿ ತಲೆಮರೆಸಿರುವ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಡುವಿನ ಭೇಟಿಯ ಹಳೆಯ ಒಂದು ವಿಡಿಯೋ ಶುಕ್ರವಾರ ವೈರಲ್ ಆದ ಬಳಿಕ ಈಗ 2 ಮತ್ತು 3ನೇ ವಿಡಿಯೋ ಶನಿವಾರ ಹೊರಗೆ ಬಂದಿದ್ದು, ವೈರಲ್ ಆಗಿವೆ.
ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸೆ.22ರಿಂದ ನಡೆಸುವ ಗಣತಿಯಲ್ಲಿರುವ ಅನಗತ್ಯ ಅಂಶಗಳನ್ನು ತೆಗೆದುಹಾಕುವ ಕುರಿತು ಆಯೋಗವೇ ನಿರ್ಧರಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ. ಫೆ.28ರಿಂದ ಮಾ.17ರವರೆಗೆ ಪಿಯು ಹಾಗೂ ಮಾ.18ರಿಂದ ಏ.1ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಆಕ್ಷೇಪಣೆಗೆ ಅರ್ಜಿ ಆಹ್ವಾನಿಸಲಾಗಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಿವಿಧ ಸೇವೆಗಳ ದರಗಳಲ್ಲಿ ಪರಿಷ್ಕರಣೆ ಮಾಡಲಾಗಿದ್ದು, ಪರಿಷ್ಕೃತ ದರ ಸೆ.1ರಿಂದಲೇ ಜಾರಿಗೆ ಬಂದಿದೆ.
ಯಶ್ ನಟನೆ, ನಿರ್ಮಾಣದ ಅದ್ದೂರಿ ಬಜೆಟ್ ಚಿತ್ರ ‘ಟಾಕ್ಸಿಕ್’ನ ಮುಂಬೈ ಶೆಡ್ಯೂಲ್ ಶೂಟಿಂಗ್ ಮುಕ್ತಾಯಗೊಂಡಿದೆ.
ಬಹುಭಾಷೆಯಲ್ಲಿ ಮೂಡಿ ಬರುತ್ತಿರುವ ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಚಿತ್ರದಲ್ಲಿ ನಟಿ ಅರ್ಚನಾ ಕೊಟ್ಟಿಗೆ ನಟಿಸುತ್ತಿದ್ದಾರೆ.
ಹಾಲಿ ಚಾಂಪಿಯನ್ ಭಾರತ ಹ್ಯಾಟ್ರಿಕ್ ಗೆಲುವಿನೊಂದಿಗೆ ಸೂಪರ್-4 ಹಂತ ಪ್ರವೇಶಿಸಿದೆ. ತಂಡ ಗುಂಪು ಹಂತದ ಕೊನೆ ಪಂದ್ಯದಲ್ಲಿ ಶುಕ್ರವಾರ ಒಮಾನ್ ವಿರುದ್ಧ 21 ರನ್ ಪ್ರಯಾಸದ ಗೆಲುವು ಸಾಧಿಸಿತು. ಇದರೊಂದಿಗೆ ‘ಎ’ ಗುಂಪಿನಲ್ಲಿ ಅಗ್ರಸ್ಥಾನ ಪಡೆದುಕೊಂಡಿತು. ಒಮಾನ್ ಹ್ಯಾಟ್ರಿಕ್ ಸೋಲಿನೊಂದಿಗೆ ಹೊರಬಿತ್ತು.
ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದಿದ್ದು, ನಮ್ಮ ಸಮಾಜದಲ್ಲಿ ಯಾರಿಗೆ ನ್ಯಾಯ ಸಿಕ್ಕಿದೆ? ಯಾರಿಗೆ ಇನ್ನೂ ಸಿಕ್ಕಿಲ್ಲ ಎನ್ನುವುದು ಗೊತ್ತಾಗಬೇಕು.
ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಎಲ್ಲರನ್ನೂ ಎದ್ದು ನಿಲ್ಲಿಸಿ ಚಪ್ಪಾಳೆ ಹಾಕಿಸಿದ ಪ್ರಸಂಗ ನಡೆಯಿತು.
ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಭಾಗಗಳಲ್ಲಿ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ ಎಂದು ಆರೋಪಿಸಿರುವ ಪ್ರತಿಪಕ್ಷ ಬಿಜೆಪಿ ಇದೇ ತಿಂಗಳ 24ರಂದು ರಾಜ್ಯಾದ್ಯಂತ ರಸ್ತೆತಡೆ ಮೂಲಕ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.