ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿದ್ದನ್ನು ಪಹಲ್ಗಾಂ ಘಟನೆಗೆ ಹೋಲಿಸಿದ ಪ್ರಕರಣ ಸಂಬಂಧ ಗಾಯಕ ಸೋನು ನಿಗಮ್ ವಿರುದ್ಧದ ತನಿಖೆಯ ಅಂತಿಮ ವರದಿ ಸಲ್ಲಿಸುವ ಪ್ರಕ್ರಿಯೆಗೆ ಹೈಕೋರ್ಟ್ ತಡೆ ನೀಡಿದೆ.
ಓಬಳಾಪುರಂ ಮೈನಿಂಗ್ ಕಂಪನಿಯ (ಒಎಂಸಿ) ಅಕ್ರಮ ಕಬ್ಬಿಣದ ಅದಿರು ಗಣಿಗಾರಿಕೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಜೈಲಿನಲ್ಲಿ ವಿಶೇಷ ಸೌಲಭ್ಯಗಳನ್ನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇಲ್ಲಿನ ಸಿಬಿಐ ನ್ಯಾಯಾಲಯ ತಿರಸ್ಕರಿಸಿದೆ.
ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ ಮದುವೆ ಬೆನ್ನಲ್ಲೇ ಆಕೆಯ ತಂದೆ ಬಾಲಕೃಷ್ಣ ನಾಯ್ಕ್, ಮಗಳ ಮದುವೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕರಾವಳಿ ಸಮುದ್ರ ತೀರದಿಂದ 60 ನಾಟಿಕಲ್ ಮೈಲ್ ದೂರದಲ್ಲಿ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಎಂಎಸ್ವಿ ಸಲಾಮತ್ ಹೆಸರಿನ ಮಂಗಳೂರಿನ ಸರಕು ಸಾಗಣೆ ಹಡಗು ಅರಬ್ಬಿ ಸಮುದ್ರದ ಮಧ್ಯದಲ್ಲಿ ಮುಳುಗಡೆಯಾಗಿದೆ.
ಉನ್ನತ ಶಿಕ್ಷಣಕ್ಕೆ ದೇಶದ ಹೆಣ್ಣು ಮಕ್ಕಳನ್ನು ಉತ್ತೇಜಿಸಲು 2.5 ಲಕ್ಷ ವಿದ್ಯಾರ್ಥಿನಿಯರಿಗೆ ವ್ಯಾಸಂಗದ ಅವಧಿಯಲ್ಲಿ ಪ್ರತಿ ವರ್ಷ ತಲಾ 30 ಸಾವಿರ ರು. ವಿದ್ಯಾರ್ಥಿ ವೇತನ ನೀಡುವುದಾಗಿ ಘೋಷಿಸಿದೆ.
ವಸತಿ ಸಮುಚ್ಛಯದ (ಅಪಾರ್ಟ್ಮೆಂಟ್) ಫ್ಲಾಟ್ಗಳ ಮಾಲೀಕರ ಸಂಘವನ್ನು ಕರ್ನಾಟಕ ಅಪಾರ್ಟ್ಮೆಂಟ್ ಓನರ್ಶಿಪ್ ಕಾಯ್ದೆಯಡಿ (ಕೆಒಎ) ನೋಂದಾಯಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ.
ನಾಡಪ್ರಭು ಕೆಂಪೇಗೌಡ ಅವರ ಬೆಂಗಳೂರನ್ನು ಕಾಂಗ್ರೆಸ್ ಸರ್ಕಾರ ಗ್ರೇಟರ್ ಅಲ್ಲ, ಕ್ವಾರ್ಟರ್ ಬೆಂಗಳೂರು ಮಾಡಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
ಮುಂದಿನ ವರ್ಷಾಂತ್ಯಕ್ಕೆ ಪೂರ್ಣಗೊಳಿಸುವ ಗುರಿಯೊಂದಿಗೆ ಆರಂಭವಾದ ಬೆಂಗಳೂರು ಉಪನಗರ ರೈಲು ಯೋಜನೆಯ ಹೀಲಲಿಗೆ-ರಾಜಾನುಕುಂಟೆ ಸಂಪರ್ಕಿಸುವ ‘ಕನಕ’ ಕಾರಿಡಾರ್ ಕಾಮಗಾರಿ ಕೂಡ ಪ್ರಗತಿ ಕಾಣುತ್ತಿಲ್ಲ.
ರಾಜಧಾನಿಯಲ್ಲಿ ಸತತ 4ನೇ ದಿನ ಪೂರ್ವ ಮುಂಗಾರು ಮಳೆಯ ಅಬ್ಬರ ಮುಂದುವರೆದಿದ್ದು, ಗುರುವಾರ ರಾತ್ರಿ ನಗರದ ಕೇಂದ್ರ ಹಾಗೂ ಉತ್ತರ ಭಾಗದ ವಿವಿಧ ಕಡೆ ಧಾರಾಕಾರ ಮಳೆಯಾಗಿದೆ.