ಸೆಪ್ಟೆಂಬರ್ನಲ್ಲಿ ರಾಜ್ಯದ ರಾಜಕೀಯದಲ್ಲಿ ಕ್ರಾಂತಿ ಆಗುತ್ತೆ ಎಂದು ಹೇಳಿದ್ದೀನಿ. ಈಗಿನ್ನೂ ಜುಲೈನಲ್ಲಿ ಇದ್ದೇವೆ. ಸೆಪ್ಟೆಂಬರ್ ಇನ್ನೂ ದೂರ ಇದೆ ಎಂದು ಸಚಿವ ರಾಜಣ್ಣ ಹೇಳಿದ್ದಾರೆ.
ಈ ಹಿಂದೆ ರಾಜಕಾರಣಿಗಳಲ್ಲಿ ಪರಸ್ಪರ ಸೌಹಾರ್ದತೆಯ ಭಾವನೆ ಕಾಣುತ್ತಿದ್ದೆವು. ಆದರೆ ಇಂದಿನ ರಾಜಕಾರಣಿಗಳಲ್ಲಿ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗುವುದಿಲ್ಲ - ಬಸವರಾಜ ಹೊರಟ್ಟಿ
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದಷ್ಟೇ ಬಾಕಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದರು.
ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ ದುರ್ಬಲವಾಗಿರಲಿದ್ದು, ಜುಲೈ ಕೊನೆ ಹಾಗೂ ಆಗಸ್ಟ್ ಮೊದಲ ವಾರದಲ್ಲಿ ಹೆಚ್ಚಿನ ಪ್ರಮಾಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ. ಆ ಕುರಿತು ಯಾವುದೇ ಗೊಂದಲ ಬೇಡ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.
ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವ ಪ್ರಕರಣಗಳು ಹೆಚ್ಚುತ್ತಿದ್ದು, ಭಾನುವಾರ ಮತ್ತೆ ನಾಲ್ವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಪ್ರತಿ ವರ್ಷ ರಾಜ್ಯಾದ್ಯಂತ ಶಾಲಾ ಹಂತದಲ್ಲೇ ಮಕ್ಕಳ ಹೃದಯದ ಆರೋಗ್ಯ ತಪಾಸಣೆಗೆ ಯೋಜನೆ ರೂಪಿಸಿದ್ದು, ಮುಂದಿನ ದಿನಗಳಲ್ಲಿ ಕಾಲೇಜು ಹಂತಕ್ಕೂ ವಿಸ್ತರಿಸಲಾಗುವುದು ಎಂದು ಹಾಸನ ಜಿಲ್ಲಾ ಉಸ್ತುವಾರಿ, ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.
ನ್ಯಾಯಾಂಗ ನಿಂದನೆ ಅಪರಾಧದಡಿ ಆರು ತಿಂಗಳು ಜೈಲು ಮತ್ತು ಎರಡು ಸಾವಿರ ದಂಡ ವಿಧಿಸಿರುವ ಹೈಕೋರ್ಟ್, ತನ್ನ ಮುಂದೆಯೂ ದುರ್ನಡತೆ ತೋರಿದ್ದಕ್ಕೆ ಮತ್ತೊಂದು ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ನಿರ್ದೇಶಿಸಿ ಅಪರೂಪದ ತೀರ್ಪು ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ಕಟ್ಟಡ ನಿರ್ಮಾಣ ಪೂರ್ಣಗೊಂಡು ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸಿದ 11 ಸಾವಿರ ಕಟ್ಟಡಗಳಿಗೆ ‘ಸ್ವಾಧೀನಾನುಭವ ಪ್ರಮಾಣ ಪತ್ರ’ ವಿತರಣೆಗೆ ಸಾಧ್ಯವೇ ಎಂಬುದರ ಬಗ್ಗೆ ಬಿಬಿಎಂಪಿ ಪರಿಶೀಲನೆ
ಅಂದು ಆ ಪರೀಕ್ಷಾಕೊಠಡಿಯಲ್ಲಿ, ಕೆಲವೇ ಕ್ಷಣಗಳಲ್ಲಿ, ನನ್ನ ಐವತ್ತು ವರ್ಷಗಳ ಆಧ್ಯಾಪಕ ವೃತ್ತಿಯಲ್ಲಿ ಎಂದೂ ಕಾಣದಿದ್ದ, ಹೃದಯ ಕಲಕುವ ದೃಶ್ಯಾವಳಿಯೊಂದು ಘಟಿಸಿತ್ತು. ಆ ಅನಿರೀಕ್ಷಿತವಾದ ಮನಕಲಕುವ ಘಟನೆಗೆ ಸಾಕ್ಷಿಯಾಗಿದ್ದ ನಾನು ಅದಕ್ಕೆ ಕಾರಣಕರ್ತನೂ ಆಗಿದ್ದೆ.