ಸಾಮಾಜಿಕ-ಆರ್ಥಿಕ ಸಮೀಕ್ಷೆ ಬಗ್ಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲ ಮಂತ್ರಿಗಳಿಂದ ಅದರಲ್ಲೂ ವಿಶೇಷವಾಗಿ ಲಿಂಗಾಯತ ಸಚಿವರಿಂದ ತೀವ್ರ ಆಕ್ಷೇಪ, ಬಿರುಸಿನ ಮಾತುಗಳ ವಿನಿಮಯ ನಡೆದ ಪರಿಣಾಮ ಮತ್ತೊಮ್ಮೆ ಜಾತಿ ಗಣತಿ ಕಗ್ಗಂಟಿಗೆ ಸರ್ಕಾರ ಸಿಲುಕಿದೆ.
ಗೋಲ್ಡ್ ಇಟಿಎಫ್ ಮತ್ತು ಸಿಲ್ವರ್ ಇಟಿಎಫ್ ಬಂಪರ್ ಫಸಲು ಕೊಡುವ ಹೂಡಿಕೆಗಳೆಂದೇ ಜನಪ್ರಿಯ. ಆದರೆ ಚಿನ್ನ, ಬೆಳ್ಳಿ ಇವೆರಡರಲ್ಲಿ ಹೂಡಿಕೆ ಮಾಡಿದರೆ ಅಧಿಕ ಲಾಭ ಬರುತ್ತದೆ ಎಂಬ ಬಗ್ಗೆ ವಿವರ ಇಲ್ಲಿದೆ.
ಮೋದಿಯವರು ಪ್ರತಿಯೊಂದು ಗ್ರಾಮಕ್ಕೂ ತೆರಳಿ ಯುವಕರನ್ನು ಭೇಟಿಯಾಗಿ ಸಮವಸ್ತ್ರಗಳನ್ನು ಖರೀದಿಸುವಂತೆ ಪ್ರೇರೇಪಿಸಿದರು. ಪರಿಣಾಮ, ನೂರಾರು ಹೊಸ ಯುವಕರು ಶಿಬಿರವನ್ನು ತಲುಪಿದ್ದಲ್ಲದೆ, ಸಂಘಟನೆಯೊಂದಿಗೆ ಶಾಶ್ವತವಾಗಿ ಸಂಬಂಧ ಬೆಳೆಸಿಕೊಂಡರು.
ಭಾನುವಾರ ದುಬೈ ಕ್ರೀಡಾಂಗಣದಲ್ಲಿ ಪಾಕಿಸ್ತಾನ ಆಟಗಾರರನ್ನು ಕಣ್ಣೆತ್ತಿಯೂ ನೋಡದೆ, ಮಾತನಾಡಿಸದೆ, ಕೈಕುಲುಕದೆ ಭಾರತೀಯ ಆಟಗಾರರು ಪಹಲ್ಗಾಂ ಉಗ್ರ ದಾಳಿಗೆ ತಮ್ಮದೇ ರೀತಿಯಲ್ಲಿ ತಕ್ಕ ತಿರುಗೇಟು ನೀಡಿದ್ದರು. ಈ ಸಂಘರ್ಷ ಒಂದು ಪಂದ್ಯಕ್ಕೆ ಸೀಮಿತವಾಗುವಂತೆ ಕಂಡುಬರುತ್ತಿಲ್ಲ.
ಶೇ.40 ಪರ್ಸೆಂಟ್ ಲಂಚ ಆರೋಪ ಕುರಿತು ತನಿಖೆ ನಡೆಸಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ನೇತೃತ್ವದ ವಿಚಾರಣಾ ಆಯೋಗ ಸಲ್ಲಿಸಿರುವ ವರದಿಯನ್ನು ಕೂಲಂಕಷವಾಗಿ ಅಧ್ಯಯನ ಮಾಡಿ ವರದಿ ಸಲ್ಲಿಸಲು ಡಾ.ಸುಧೀರ್ ಕೃಷ್ಣ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರ ಸಮಿತಿ ರಚಿಸಿದೆ.
ಕೇಂದ್ರ ಸರ್ಕಾರದ ಆದೇಶದನ್ವಯ ರಾಜ್ಯದಲ್ಲಿನ ಸರ್ಕಾರಿ ಇಲಾಖೆ, ನಿಗಮ, ಮಂಡಳಿ ಸೇರಿ ಸರ್ಕಾರದ ಇತರ ಅಧೀನ ಸಂಸ್ಥೆಗಳಿಗೆ ಸೇರಿದ ನೋಂದಣಿಯಾಗಿ 15 ವರ್ಷ ಪೂರ್ಣಗೊಂಡ ವಾಹನಗಳನ್ನು ನಾಶಪಡಿಸುವಂತೆ ಸಾರಿಗೆ ಇಲಾಖೆ ಆದೇಶಿಸಿದೆ.
ಸೈಬರ್ ಖದೀಮರ ಕುತಂತ್ರ ಅರಿಯದೇ ಕನ್ನಡದ ‘ಬುದ್ಧಿವಂತ’ ಚಿತ್ರದ ನಟ, ನಿರ್ದೇಶಕ ಉಪೇಂದ್ರ ಹಾಗೂ ಅವರ ಪತ್ನಿ ಪ್ರಿಯಾಂಕಾ ಮೋಸ ಹೋಗಿದ್ದಾರೆ
ನಟ ದರ್ಶನ್ಗೆ ಕಾರಾಗೃಹಗಳ ಕೈಪಿಡಿ ಅನುಸಾರ ಕನಿಷ್ಠ ಸೌಲಭ್ಯ ಕಲ್ಪಿಸುತ್ತಿಲ್ಲ. ಹಾಸಿಗೆ, ದಿಂಬು ಕೊಟ್ಟಿಲ್ಲ ಎಂಬ ಆರೋಪದ ಕುರಿತು ವಿವರಣೆ ನೀಡುವಂತೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗೆ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನಿರ್ದೇಶಿಸಿದೆ.
ರಾಜಭವನ, ಸರ್ಕಾರದ ನಡುವಿನ ಸಂಘರ್ಷ ಮುಂದುವರಿದಿದ್ದು, ಕೆರೆಗಳ ವಿಸ್ತೀರ್ಣಕ್ಕನುಗುಣವಾಗಿ ಬಫರ್ ವಲಯ ಮರು ನಿಗದಿ ಮಾಡುವ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ರಾಜ್ಯಪಾಲರು, ಅಂಕಿತ ಹಾಕದೇ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ.
ಜೋಗಿ ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾದಲ್ಲಿಕಿಚ್ಚ ಸುದೀಪ್ ಅತಿಥಿ ಪಾತ್ರದಲ್ಲಿ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.