‘ನಾನೀಗ ಆರು ತಿಂಗಳ ಗರ್ಭವತಿ. ಅವಳಿ ಮಕ್ಕಳಿಗೆ ಅಮ್ಮನಾಗುವ ಖುಷಿಯಲ್ಲಿದ್ದೇನೆ. ನಾನು ಅವಿವಾಹಿತೆ, ಹೀಗಾಗಿ ಐವಿಎಫ್ ಮೂಲಕ ತಾಯಿಯಾಗುತ್ತಿದ್ದೇನೆ.’
- ಇದು ನಟಿ ಭಾವನಾ ರಾಮಣ್ಣ ಅವರ ಮಾತುಗಳು
ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಯೋಜನೆ ಅನುಷ್ಠಾನದಲ್ಲಿನ ತಾಂತ್ರಿಕ ದೋಷಗಳ ಕುರಿತು ಮೊದಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪರಿಶೀಲನೆ ನಡೆಸಬೇಕು. ನಂತರ ಅಗತ್ಯವಿದ್ದರೆ ಐಐಎಸ್ಸಿ, ಐಐಟಿ ತಜ್ಞರ ಸಮಿತಿ ರಚಿಸಲು ನಿರ್ಧರಿಸಲಾಗಿದೆ.
ಕನ್ನಡ ಭಾಷೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡದಂತೆ ನಟ ಕಮಲಹಾಸನ್ಗೆ ನಿರ್ದೇಶಿಸಿ ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯ ನಿರ್ಬಂಧಾಜ್ಞೆ ಹೊರಡಿಸಿದೆ.
ಕೊಡಗು, ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರಿದಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಬೆಳಗಾವಿಯಲ್ಲಿ ಮನೆ ಕುಸಿದು ಎರಡು ಆಟೋ, ಒಂದು ದ್ವಿಚಕ್ರ ವಾಹನಗಳು ಜಖಂಗೊಂಡಿವೆ.
ಭಾನುವಾರ ಬೆಳಗ್ಗೆ 7ರಿಂದ 8 ಗಂಟೆವರೆಗೆ ಒಂದು ಗಂಟೆ ಕಾಲ ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತ
ಭಾರತದ ತಾರಾ ಜಾವೆಲಿನ್ ಎಸೆತಗಾರ, ಒಲಿಂಪಿಕ್ಸ್ ಹಾಗೂ ಹಾಲಿ ವಿಶ್ವ ಚಾಂಪಿಯನ್ ನೀರಜ್ ಚೋಪ್ರಾ ಕರ್ನಾಟಕ ಒಲಿಂಪಿಕ್ ಸಂಸ್ಥೆ(ಕೆಒಎ) ವಿಶೇಷ ಗೌರವಕ್ಕೆ ಪಾತ್ರರಾಗಿದ್ದಾರೆ. ನೀರಜ್ರನ್ನು ಗುರುವಾರ ಕೆಒಎ ಹಾಲ್ ಫೇಮ್ಗೆ ಸೇರ್ಪಡೆಗೊಳಿಸಲಾಯಿತು.
ಆರಂಭಿಕ ಟೆಸ್ಟ್ನಲ್ಲಿ ತನ್ನ ಎಡವಟ್ಟುಗಳಿಂದಲೇ ಸೋತಿದ್ದ ಭಾರತ ತಂಡ ಬರ್ಮಿಂಗ್ಹ್ಯಾಮ್ನಲ್ಲಿ ಅಕ್ಷರಶಃ ಅಬ್ಬರಿಸುತ್ತಿದೆ
ರಾಜ್ಯದಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸರಣಿ ಮುಂದುವರಿದಿದ್ದು, ಗುರುವಾರ ಒಂದೇ ದಿನ 7 ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಶುಭಾಂಶು ಶುಕ್ಲಾ ಅವರು ಜುಲೈ 4 ರಂದು ಶುಕ್ರವಾರ ಸಂಜೆ ‘ಹ್ಯಾಂ ರೇಡಿಯೋ’ ಮುಖಾಂತರ ಅಂತಾರಾಷ್ಟ್ರೀಯ ಅಂತರಿಕ್ಷ ನಿಲ್ದಾಣದಲ್ಲಿರುವ ತಮ್ಮ ಕಕ್ಷೀಯ ಸ್ಥಳದಿಂದ ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆ (ಇಸ್ರೋ) ಯ ವಿಜ್ಞಾನಿಗಳು ಹಾಗೂ ಶಾಲಾ ಮಕ್ಕಳೊಂದಿಗೆ ಸಂಭಾಷಣೆ ನಡೆಸಲಿದ್ದಾರೆ.
ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಸ್ವಪಕ್ಷದವರಿಂದಲೇ ರೂಪುರೇಷೆ ಸಿದ್ಧವಾಗುತ್ತಿದೆ ಎಂದು ಜೆಡಿಎಸ್ ಯುವ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.