ಭೂಮಿ ಮೇಲೆ ಅಪರೂಪವಾಗಿ ಸಿಗುವ ಟರ್ಬಿಯಂ ಎಂಬ ಲೋಹ ಬಳಸಿ ಮನುಷ್ಯನ ಕಿಣ್ವಗಳ (ಎನ್ಜೈಂ) ಮೇಲೆ ಬೆಳಕಿನ ಕಿರಣಗಳನ್ನು ಬಿಟ್ಟು ಸರಳವಾಗಿ ಯಕೃತ್ತು (ಲಿವರ್) ಕ್ಯಾನ್ಸರ್ ಪತ್ತೆ ಹಚ್ಚಬಹುದಾದ ಸಂಶೋಧನೆಯನ್ನು ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಸಂಶೋಧಕರ ತಂಡ ಮಾಡಿದೆ.
ಠೇವಣಿದಾರರ ಹಣದ ಸುರಕ್ಷತೆ ಮತ್ತು ಭದ್ರತೆಯೇ ಕರ್ಣಾಟಕ ಬ್ಯಾಂಕಿನ ಮೊದಲ ಆದ್ಯತೆ ಯಾಗಿದ್ದು, 101 ವರ್ಷಗಳಿಂದ ಇದನ್ನು ಪಾಲಿಸಿಕೊಂಡು ಬರುತ್ತಿದ್ದೇವೆ. ಮುಂದೆಯೂ ಈ ಬದ್ಧತೆ ಹಾಗೆಯೇ ಇರುತ್ತದೆ
ಅನಾರೋಗ್ಯಪೀಡಿತ ತಾಯಿ ಮತ್ತು ತನ್ನ ಮಗನ ಆರೈಕೆ ಮಾಡಲೆಂದು, ವಯೋವೃದ್ಧೆಯನ್ನು ಕೊಲೆಗೈದು ಚಿನ್ನಾಭರಣ ದೋಚಿದ್ದ ಪ್ರಕರಣದ ಆರೋಪಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಅಮಾನತುಪಡಿಸಿ ಜಾಮೀನು ನೀಡಿದೆ.
ಜುಲೈ 13ರ ವರೆಗೆ ನಡೆಯಲಿದೆ ವಿಶ್ವದ ಅತ್ಯಂತ ಹಳೆಯ, ಪ್ರತಿಷ್ಠಿತ ಗ್ರ್ಯಾನ್ಸ್ಲಾಂ ಟೆನಿಸ್ ಟೂರ್ನಿ । ಈ ಬಾರಿಯದ್ದು 138ನೇ ಆವೃತ್ತಿಹಾಲಿ ಚಾಂಪಿಯನ್ ಆಲ್ಕರಜ್, ಜೋಕೋವಿಚ್, ಸಬಲೆಂಕಾ, ಯಾನಿಕ್ ಸಿನ್ನರ್, ಇಗಾ ಸ್ವಿಯಾಟೆಕ್, ಗಾಫ್ ಸೇರಿ ಪ್ರಮುಖರು ಕಣಕ್ಕೆ
ರಾಷ್ಟ್ರಗೀತೆಯನ್ನು ಸರಿಯಾಗಿ ಹಾಡಲು ಬಾರದವರೂ ಬೇಕಾದಷ್ಟು ಜನರು ಇದ್ದಾರೆ. ದೊಡ್ಡ ಕಾರ್ಯಕ್ರಮ ನಡೆಸುವ ಜವಾಬ್ದಾರಿ ಹೊತ್ತವರು ಮೊದಲೇ ಈ ಬಗ್ಗೆ ರಿಹರ್ಸಲ್ ಮಾಡಿಕೊಳ್ಳದಿದ್ದರೆ ಎಡವಟ್ಟು ಗ್ಯಾರಂಟಿ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಹಜ ಅಧಿಕಾರ ಯೋಗವಿಲ್ಲ. ಸಿಸೇರಿಯನ್ ಆಗಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಗಿ ಹೇಳಿದ್ದಾರೆ.
ಪ್ರಾಚೀನ ಇತಿಹಾಸವಿರುವ ಕನ್ನಡ ಬೆಳೆಸಲು ಮಾತೃ ಹೃದಯ ಇರಬೇಕು. ಮಾತೃ ಹೃದಯ ಹಿಡಿತ ಸಾಧಿಸುವುದಿಲ್ಲ, ಪ್ರೀತಿ ಹಂಚುತ್ತದೆ ಎಂದು ಚಿತ್ರ ನಿರ್ದೇಶಕ ಟಿ.ಎಸ್.ನಾಗಾಭರಣ ಅಭಿಪ್ರಾಯಪಟ್ಟಿದ್ದಾರೆ.
ಕರ್ಣಾಟಕ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಹಾಗೂ ಸಿಇಒ ಆಗಿರುವ ಶ್ರೀಕೃಷ್ಣನ್ ಹರಿಹರ ಶರ್ಮಾ ನೀಡಿದ ರಾಜೀನಾಮೆ ಹಾಗೂ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ (ಇಡಿ) ಶೇಖರ್ ರಾವ್ ಕೂಡ ನೀಡಿದ ರಾಜೀನಾಮೆಯನ್ನು ಬ್ಯಾಂಕ್ನ ನಿರ್ದೇಶಕ ಮಂಡಳಿ ಅಂಗೀಕರಿಸಿದೆ.
ಬೈಕ್ ಟ್ಯಾಕ್ಸಿಗಳ ನಿಷೇಧ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿ ಬೈಕ್ ಟ್ಯಾಕ್ಸಿ ಅಸೋಸಿಯೇಶನ್ ಸದಸ್ಯರು ಉಪವಾಸ ಸತ್ಯಾಗ್ರಹ ನಡೆಸಿದರು.
ದ್ವೇಷದ ಹಿನ್ನೆಲೆಯಲ್ಲಿ ಪರಿಚಿತ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆಗೈದು ಕೊಲೆ ಮಾಡಿ ಪರಾರಿಯಾಗಿದ್ದ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಸೇರಿ ಮೂವರು ಆರೋಪಿಗಳನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.