ಮದ್ಯ ಮಾರಾಟಗಾರರ ಹೋರಾಟಕ್ಕೆ ಮಣಿದ ರಾಜ್ಯ ರಾಜ್ಯ ಸರ್ಕಾರ ಅಬಕಾರಿ ಸನ್ನದು ಶುಲ್ಕವನ್ನು ಶೇ.50ರಷ್ಟು ಇಳಿಕೆ ಮಾಡಿದೆ.
ನಗರದ ಪ್ರಮುಖ ಯಶವಂತಪುರ-ಚನ್ನಸಂದ್ರ ಜೋಡಿಹಳಿ ಯೋಜನೆ (21.7 ಕಿ.ಮೀ.) ಹಾಗೂ ಬೈಯ್ಯಪ್ಪನಹಳ್ಳಿ- ಹೊಸೂರು ಜೋಡಿ ಮಾರ್ಗ (48 ಕಿ.ಮೀ.) ಕಾಮಗಾರಿಗಳು ಕುಂಟುತ್ತಾ ಸಾಗಿವೆ.
ರಾಜ್ಯ ಕಾಂಗ್ರೆಸ್ನಲ್ಲಿ ಶಾಸಕರ ಅಸಮಾಧಾನ ಜೋರಾಗುತ್ತಿದ್ದು, ಹಿರಿಯ ಶಾಸಕ ಬಿ.ಆರ್.ಪಾಟೀಲ ಬಳಿಕ ಈಗ ಕಾಗವಾಡ ಶಾಸಕ ರಾಜು ಕಾಗೆ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಒಬಿಸಿ ವರ್ಗಕ್ಕೆ ಸೇರಿದ ಏಕ ಪೋಷಕಿಯ ಮಕ್ಕಳನ್ನು ಆಕೆಯ ವರ್ಗದಲ್ಲೇ ಪರಿಗಣಿಸಲು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ‘ಮುಖ್ಯ’ ಎಂದು ಕರೆದಿರುವ ಸುಪ್ರೀಂ ಕೋರ್ಟ್, ಅದಕ್ಕೆ ಪೂರಕವಾದ ಮಹತ್ವದ ಆದೇಶ ಹೊರಡಿಸಿದೆ.
ಇತ್ತೀಚೆಗೆ ನಡೆದ 4 ರಾಜ್ಯಗಳ 5 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದೆ. ಅಚ್ಚರಿಯ ರೀತಿಯಲ್ಲಿ ಬಿಜೆಪಿ ಆಡಳಿತದ ಗುಜರಾತ್ನ ವಿಸಾವದರ್ ಕ್ಷೇತ್ರದಲ್ಲಿ ಆಮ್ಆದ್ಮಿ ಪಕ್ಷ ಗೆಲುವು ಸಾಧಿಸಿದೆ.
ಅಗ್ಗದ ದರದಲ್ಲಿ ವಿಮಾನಯಾನ ಸೇವೆಯ ಕನಸು ನನಸಾಗುವ ಕ್ಷಣ ಸನ್ನಿಹಿತವಾಗಿದೆ. ವಿಶ್ವದ ಮೊದಲ ಎಲೆಕ್ಟ್ರಿಕ್ ವಿಮಾನದ ಸಂಚಾರ ಭಾನುವಾರ ಇಲ್ಲಿ ಯಶಸ್ವಿಯಾಗಿ ನಡೆದಿದೆ.
ಭಾರತದ ಇತಿಹಾಸದ ಕರಾಳ ಅಧ್ಯಾಯ ಎಂದೇ ಪರಿಗಣಿಸಲಾಗುವ ತುರ್ತು ಸ್ಥಿತಿ ಹೇರಿಕೆಯಾಗಿ ಬುಧವಾರಕ್ಕೆ 50 ವರ್ಷ ತುಂಬಲಿದೆ. ಈ ಹಿನ್ನೆಲೆಯಲ್ಲಿ ದೇಶವ್ಯಾಪಿ ‘ಸಂವಿಧಾನ ಹತ್ಯಾ ದಿವಸ’ ಆಚರಿಸಲು ಬಿಜೆಪಿ ಸಿದ್ಧತೆ ನಡೆಸಿದೆ.
ಇರಾನ್ನ ಅಣು ಕೇಂದ್ರಗಳ ಮೇಲೆ ಅಮೆರಿಕ ದಾಳಿ ನಡೆಸಿದ ಬೆನ್ನಲ್ಲೇ ಇರಾನ್ ಕಡೆಯಿಂದ ಭಾರೀ ಪ್ರತಿದಾಳಿ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ, ಮಧ್ಯಪ್ರಾಚ್ಯ ದೇಶಗಳಲ್ಲಿರುವ ತನ್ನೆಲ್ಲಾ ಸೇನಾ ನೆಲೆಗಳ ಸುತ್ತ ತೆರವಿಗೆ ಅಮೆರಿಕ ಮುಂದಾಗಿದೆ.
ಮುಂದಿನ ವರ್ಷ ಚುನಾವಣೆ ಎದುರಿಸುವ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರ ಆರ್ಥಿಕ ಸಂಕಷ್ಟಕ್ಕೀಡಾಗಿದೆ.
ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಎಚ್.ಡಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಆರೋಗ್ಯ ವಿಮೆ ಮಾಡಿಸಲು ವಿವಿ ಸಿಂಡಿಕೇಟ್ ಸಭೆಯಲ್ಲಿ ನಿರ್ಧರಿಸಲಾಗಿದೆ