ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಹಿನ್ನೆಲೆಯಲ್ಲಿ ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ, ಎಡಿಜಿಪಿ ಬಿ.ದಯಾನಂದ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ಸಂಬಂಧ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಸಮಗ್ರ ವರದಿ ಸಲ್ಲಿಸಿದೆ.
ಕ್ಷೇತ್ರಗಳಲ್ಲಿ ಸ್ಥಳೀಯ ಮಟ್ಟದ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರದಿಂದ ಸಮರ್ಪಕ ಅನುದಾನ ಬರುತ್ತಿಲ್ಲ ಎಂಬ ಆರೋಪ ಶಾಸಕರಿಂದ ಪದೇಪದೆ ಕೇಳಿ ಬರುತ್ತಿದೆ.
ಆರೋಪ ಮಾಡಿರುವ ನಮ್ಮ ಪಕ್ಷದ ಶಾಸಕರಾದ ರಾಜು ಕಾಗೆ, ಬಿ.ಆರ್. ಪಾಟೀಲ ಹಾಗೂ ಬೇಳೂರು ಗೋಪಾಲಕೃಷ್ಣ ಅವರ ಜತೆ ಚರ್ಚಿಸುವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಪಕ್ಷೀಯ ಶಾಸಕರ ಅಸಮಾಧಾನ ಮುಂದುವರಿದಿದ್ದು, ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರ ರಾಜೀನಾಮೆಗೆ ಸಾಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಒತ್ತಾಯಿಸಿದ್ದಾರೆ.
ರಾಜೀವ್ ಗಾಂಧಿ ವಸತಿ ನಿಗಮದ ಹಗರಣ ಕುರಿತು ಮಾಡಿರುವ ಆರೋಪದಿಂದ ಹಿಂದೆ ಸರಿಯಲ್ಲ’ ಎಂದು ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ, ಶಾಸಕ ಬಿ.ಆರ್.ಪಾಟೀಲ ಸ್ಪಷ್ಟಪಡಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸ್ವಪಕ್ಷದ ಶಾಸಕರುಗಳ ಅಸಮಾಧಾನ ಮುಂದುವರಿದಿದ್ದು, ಬಿ.ಆರ್ ಪಾಟೀಲ್, ರಾಜು ಕಾಗೆ ಬಳಿಕ ಮತ್ತೊಬ್ಬ ಶಾಸಕರು ಸರ್ಕಾರದ ವಿರುದ್ಧ ಅಸಮಾಧಾನ
ಈ ಬಾರಿ ಡಾ। ವಿಷ್ಣುವರ್ಧನ್ ಅವರ 75ನೇ ವರ್ಷದ ಹುಟ್ಟುಹಬ್ಬವನ್ನು ‘ಯಜಮಾನರ ಅಮೃತ ಮಹೋತ್ಸವ’ ಹೆಸರಿನಲ್ಲಿ ಸೆ.18ರಿಂದ ನಾಲ್ಕು ದಿನ ರಾಜ್ಯಾದ್ಯಂತ ಡಾ। ವಿಷ್ಣುವರ್ಧನ್ ಅಮೃತ ಮಹೋತ್ಸವ ಆಚರಿಸಲು ಡಾ। ವಿಷ್ಣು ಸೇನಾ ಸಮಿತಿ ನಿರ್ಧರಿಸಿದೆ.
‘ಕುಂದಾಪ್ರ ಕನ್ನಡ ಪ್ರತಿಷ್ಠಾನ’ದಿಂದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಪ್ರಯುಕ್ತ ಜು. 26, 27ರಂದು ಕುಂದಾಪ್ರ ಕನ್ನಡ ಹಬ್ಬ-2025 ಹೊಸಕೆರೆಹಳ್ಳಿ ನೈಸ್ ರೋಡ್ ಜಂಕ್ಷನ್ನ ನಂದಿ ಲಿಂಕ್ ಗ್ರೌಂಡ್ನಲ್ಲಿ ನಡೆಯಲಿದೆ.
ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ದುಡ್ಡು ಪಡೆದು ವಸತಿ ನೀಡಿದ್ದಾರೆ ಎಂದು ಅಳಂದ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ಅವರ ಆರೋಪ ಸುಳ್ಳು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಹಿಂದುಳಿದ ವರ್ಗದವರನ್ನು ಧರ್ಮ ಬೋಧನೆ ಮೂಲಕ ಮನಪರಿವರ್ತನೆ ಮಾಡಿ ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನಿಸುತ್ತಿದ್ದವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಭಾನುವಾರ ಮಧ್ಯಾಹ್ನ ಇಲ್ಲಿಗೆ ಸಮೀಪದ ತಲಗೇರಿ ಆಗೇರ ಕಾಲನಿಯಲ್ಲಿ ನಡೆದಿದೆ.