ಇಲ್ಲೋರ್ವ ಹಣ್ಣಿನ ರಸದಂತೆ ಎಂಜಿನ್ ಆಯಿಲ್ ಕುಡಿದು ಎಲ್ಲರನ್ನೂ ಅಚ್ಚರಿಗೆ ಒಳಗಾಗುವಂತೆ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ.
ಧರ್ಮಸ್ಥಳದಲ್ಲಿ ಅನಧಿಕೃತ ಮೃತದೇಹ ಹೂತ ಪ್ರಕರಣದ ಹಿಂದಿನ ಸಂಚಿನ ಜಾಲವು ರಾಜಧಾನಿಗೂ ಹಬ್ಬಿದ್ದು, ಬಂಧಿತ ಆರೋಪಿ ಚಿನ್ನಯ್ಯ ಜತೆ ಬೆಂಗಳೂರಿನಲ್ಲಿ ಸಭೆ ನಡೆದಿತ್ತು ಎನ್ನಲಾದ ಬೆಳ್ತಂಗಡಿ ತಾಲೂಕಿನ ಉಜಿರೆಯ ಸಾಮಾಜಿಕ ಕಾರ್ಯಕರ್ತ ಟಿ.ಜಯಂತ್ ಅವರ ಮನೆಯಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ಮಹಜರ್ ನಡೆಸಿತು.
ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆ ಆಗುತ್ತಿರುವುದರಿಂದ ರಾಜ್ಯದಲ್ಲಿ ಬಿತ್ತನೆ ಚುರುಕಾಗಿದೆ. 82.50 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಆಗಬಹುದು ಎಂದು ಕೃಷಿ ಇಲಾಖೆ ಅಂದಾಜಿಸಿತ್ತು. ಈಗಾಗಲೇ 78.33 ಲಕ್ಷ ಹೆಕ್ಟೇರ್ನಲ್ಲಿ ಬಿತ್ತನೆಯಾಗಿ ಶೇ.95ರಷ್ಟು ಸಾಧನೆ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್, ಜೈಲಿನಲ್ಲಿ ತಮಗೆ ಹೆಚ್ಚುವರಿಯಾಗಿ ಹಾಸಿಗೆ-ದಿಂಬು ಪಡೆದುಕೊಳ್ಳಲು ಅವಕಾಶ ನೀಡಬೇಕು ಎಂದು ಸೆಷೆನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಆತ ಬೇಜವಾಬ್ದಾರಿ ಪೊಲೀಸ್. ತನ್ನ ಗರ್ಭಿಣಿ ಪತ್ನಿಗೆ ಅನಾಮಿಕನೊಬ್ಬನಿಂದ ಪ್ರಾಣಕ್ಕೆ ಅಪಾಯ ಇದೆ ಎನ್ನುವ ಮಾಹಿತಿ ಗೊತ್ತಾದ ಮೇಲೆ ಆ ಬೇಜವಾಬ್ದಾರಿ ಪೊಲೀಸ್ ಅಧಿಕಾರಿಯ ಮುಂದಿನ ನಡೆ ಏನು ಎಂಬುದನ್ನು ಹೇಳುತ್ತಲೇ ಒಂದು ಸೈಕೋ ಥ್ರಿಲ್ಲರ್ ಕತೆಯನ್ನು ಪ್ರೇಕ್ಷಕರ ಮುಂದಿಡುತ್ತದೆ ‘ಉಸಿರು’ ಸಿನಿಮಾ
ಒಮ್ಮೆಯೂ ನಗದ, ಯಾರಿಗೂ ಅಂಜದ, ಒಬ್ಬರಿಗೂ ಕರುಣೆ ತೋರದ, ಆಗದವರು ಯಾರೇ ಆದರೂ ಸದೆಬಡಿಯುವ, ಹಸಿ ಮಾಂಸವನ್ನು ಭಕ್ಷಿಸುವ, ಕಣ್ಣಲ್ಲೇ ರಕ್ತ ಹೀರುವ, ಘನಗಂಭೀರ ಪಾತ್ರವನ್ನು ವಿಜಯ ರಾಘವೇಂದ್ರ ಅವರು ನಿಭಾಯಿಸಿರುವ ರೀತಿಯೇ ಈ ಸಿನಿಮಾದ ಆಧಾರ
ನಿರ್ದೇಶಕನಾಗಬೇಕು ಎಂದು ಸಿಟಿಗೆ ಬಂದಿಳಿಯುವ ಹಳ್ಳಿ ಹುಡುಗ ಕುಮಾರ. ಅವನ ಕನಸಿನ ಹಿನ್ನೆಲೆ ಮತ್ತು ಕನಸನ್ನು ಬೆಂಬತ್ತುವ ಪಯಣ
ತಮಿಳು ನಟ ವಿಶಾಲ್ 48ನೇ ಹರೆಯದಲ್ಲಿ ಬಹುಕಾಲದ ಗೆಳತಿ, ಸಿನಿಮಾ ನಟಿ ಸಾಯಿ ಧನ್ಸಿಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
‘ಕೆಜಿಎಫ್’ ಸಿನಿಮಾದ ʻಚಾಚಾ’ ಆಗಿ ಫೇಮಸ್ ಆಗಿರುವ ನಟ ಹರೀಶ್ ರಾಯ್ ಥೈರಾಯ್ಡ್ ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ.
ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಜಿಎಸ್ಟಿ ಸ್ಲ್ಯಾಬ್ಗಳ ಸಂಖ್ಯೆ ಕಡಿತದಿಂದ ರಾಜ್ಯಗಳ ಆದಾಯಕ್ಕೆ ₹85,000 ಕೋಟಿಯಿಂದ ₹2.5 ಲಕ್ಷ ಕೋಟಿವರೆಗೆ ನಷ್ಟ ಉಂಟಾಗಲಿದೆ.