ಮೈಸೂರು, ಮಡಿಕೇರಿ, ಕುಂದಾಪುರದ ಬಳಿಕ ಇದೀಗ ದಾವಣಗೆರೆಗೆ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನೇರ ಫ್ಲೈಬಸ್ ಸೇವೆಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಆರಂಭಿಸಿದ್ದು, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬುಧವಾರ ಚಾಲನೆ ನೀಡಿದರು.
ಸಾರ್ವಜನಿಕರಿಗೆ ಒಂದು ದಿನದ ಮಟ್ಟಿಗೆ ಟ್ರಾಫಿಕ್ ಪೊಲೀಸ್ ಆಗುವ ಸುವರ್ಣ ಅವಕಾಶವನ್ನು ನಗರದ ಸಂಚಾರ ಪೊಲೀಸರು ಕಲ್ಪಿಸಿದ್ದಾರೆ. 18 ವರ್ಷ ಮೇಲ್ಪಟ್ಟವರು ಮತ್ತು ದೈಹಿಕವಾಗಿ ಫಿಟ್ ಆಗಿ ಇರುವವರು ಯಾರು ಬೇಕಾದರೂ ಒಂದು ದಿನದ ಮಟ್ಟಿಗೆ ಸಂಚಾರ ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸಬಹುದಾಗಿದೆ.
ನಿಜಕ್ಕೂ ಸಂಪುಟ ಪುನಾರಚನೆಯಾಗುವುದೇ? ಸಚಿವರು ಬದಲಾಗುವರೇ? ಈ ಬಾರಿ ಸಲೀಂಗೆ ಅವಕಾಶ ಸಿಗುವುದೇ? ಅಲ್ಪಸಂಖ್ಯಾತ ಸಿಎಂ ವಿಚಾರ ಚರ್ಚೆಗೆ ಬರುವುದಿಲ್ಲ ಏಕೆ? ಎಂಬಿತ್ಯಾದಿ ವಿಚಾರ ಬಗ್ಗೆ ಮಾತನಾಡಲು ‘ಕನ್ನಡಪ್ರಭ’ದೊಂದಿಗೆ ಮುಖಾಮುಖಿಯಾಗಿದ್ದಾರೆ ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್.
ದೇಶದ ಗಮನವನ್ನು ಸೆಳೆದಿದ್ದ ಬಿಹಾರ ವಿಧಾನಸಭಾ ಚುನಾವಣೆ ಮುಕ್ತಾಯವಾಗಿದ್ದು, ನಾಳಿನ ಫಲಿತಾಂಶದತ್ತ ಕುತೂಹಲ ಮೂಡಿದೆ. ಈ ನಡುವೆ, ಎನ್ಡಿಎ ಒಕ್ಕೂಟ ಭರ್ಜರಿ ಬಹುಮತದಿಂದ ಗೆಲುವು ಸಾಧಿಸಲಿದೆ ಎಂದು ಆ್ಯಕ್ಸಿಸ್ ಮೈ ಇಂಡಿಯಾ ಹಾಗೂ ಟುಡೇಸ್ ಚಾಣಕ್ಯ ಸಂಸ್ಥೆಗಳ ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ
ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದಿಂದಾಗಿ ದೇಶದ ಅತಿ ದೊಡ್ಡ ಸಗಟು ವ್ಯಾಪಾರ ಮಾರುಕಟ್ಟೆಯಾಗಿರುವ ಚಾಂದನಿ ಚೌಕಕ್ಕೆ ಬರುವ ಗ್ರಾಹಕರ ಸಂಖ್ಯೆಯಲ್ಲಿ ತೀವ್ರ ಕುಸಿತವಾಗಿದ್ದು, ಸುಮಾರು 300-400 ಕೋಟಿ ರು. ನಷ್ಟವಾಗಿದೆ ಎಂದು ವರದಿಯಾಗಿದೆ.
ದೇಶದಲ್ಲಿ ಭಾರೀ ವಿಧ್ವಂಸಕ ಕೃತ್ಯದ ಸಂಚಿನ ಹಿನ್ನೆಲೆಯಲ್ಲಿ ಈಗಾಗಲೇ ಅಲ್ ಫಲಾ ವಿವಿಯ ನಾಲ್ವರು ವೈದ್ಯರು ಭಾಗಿಯಾಗಿರುವುದು ಖಚಿತವಾಗಿದೆ. ಇವರೆಲ್ಲ ವಿವಿಯನ್ನೇ ಕೇಂದ್ರಸ್ಥಾನ ಮಾಡಿಕೊಂಡು ಪಾಕಿಸ್ತಾನದ ಉಗ್ರಗಾಮಿ ಸಂಘಟನೆಗಳ ಅಣತಿಯಂತೆ ಅಮಾಯಕರ ಬಲಿ ಪಡೆಯಲು ಸಂಚು ರೂಪಿಸಿದ್ದು ಇದೀಗ ಬಯಲಾಗಿದೆ.
ಭಾರತದ ಆಮದಿನ ಮೇಲೆ ಹೆಚ್ಚುವರಿ ತೆರಿಗೆ ಹೇರಿರುವ ಅಮೆರಿಕ ಸರ್ಕಾರದ ಕ್ರಮದಿಂದ ದೇಶೀ ಉದ್ಯಮಗಳನ್ನು ಪಾರು ಮಾಡುವ ನಿಟ್ಟಿನಲ್ಲಿ 45000 ಕೋಟಿ ರು. ಮೊತ್ತದ ಎರಡು ಬೃಹತ್ ಯೋಜನೆಗಳಿಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.
ಈ ಸರ್ಕಾರದಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾರೆ. ಇರಲಿ, ನಮಗೆ ಯಾವುದೇ ಬೇಸರವಿಲ್ಲ ಎಂದು ಜಮೀರ್ ಅಹಮದ್ ಖಾನ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಸೋಮವಾರ ಕೆಂಪುಕೋಟೆ ಸಿಗ್ನಲ್ ಬಳಿ ಸಂಭವಿಸಿದ ಸ್ಫೋಟ, ವಾಸ್ತವವಾಗಿ ಕೆಂಪುಕೋಟೆಯ ವಾಹನ ಪಾರ್ಕಿಂಗ್ ಜಾಗದಲ್ಲಿ ನಡೆಯಬೇಕಿತ್ತು. ಆದರೆ ಸೋಮವಾರ ಕೆಂಪುಕೋಟೆಗೆ ರಜೆ ಇದ್ದ ಕಾರಣ, ಪಾರ್ಕಿಂಗ್ ಖಾಲಿ ಇತ್ತು. ಹೀಗಾಗಿ ಅಲ್ಲಿ ಮೂರು ಗಂಟೆ ಕಾದ ಉಗ್ರ ಉಮರ್ ನಬಿ, ಅವಕಾಶ ಕೈತಪ್ಪಿದ್ದಕ್ಕೆ ಬೇಸತ್ತು ಹೊರಟಿದ್ದ
ಪ್ರತೀ ವರ್ಷ ನವೆಂಬರ್ 12ರಂದು ವಿಶ್ವ ನ್ಯೂಮೋನಿಯ ದಿನ ಎಂದು ಆಚರಿಸಿ ರೋಗದ ಬಗ್ಗೆ ಜಾಗ್ರತೆ ಮೂಡಿಸುವ ಕಾರ್ಯಕ್ರಮ ನಡೆಸಲಾಗುತ್ತಿದೆ. ನವೆಂಬರ್ 12 2009 ರಿಂದ ಈ ಆಚರಣೆ ತರಲಾಯಿತು. ಇದೊಂದು ತಡೆಗಟ್ಟಬಹುದಾದ ಮತ್ತು ಚಿಕಿತ್ಸೆಗೆ ಸ್ಪಂದಿಸುವ ರೋಗವಾಗಿದ್ದು ಮಕ್ಕಳಲ್ಲಿ ಹೆಚ್ಚು ಕಂಡು ಬರುತ್ತದೆ.