ಸಾಹಿತಿ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆಗೆ ಬರುವಾಗ ಮಡಿ ಸೀರೆಯುಟ್ಟು, ಹಣೆಗೆ ಅರಿಶಿಣ, ಕುಂಕುಮ ಹಚ್ಚಿ ಬರಬೇಕು. ಈ ಮೂಲಕ ದಸರಾ ಸಂಪ್ರದಾಯಕ್ಕೆ ಗೌರವ ಕೊಡಬೇಕು. ಹೀಗೆ ಮಾಡಿದರೆ ನಮಗೆ ಅಭ್ಯಂತರವಿಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಬುಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡುವುದು ಅಥವಾ ಮಾಡದಿರುವುದು ಅವರ ವೈಯಕ್ತಿಕ ವಿಚಾರ. ನಾವು ಮಧ್ಯ ಪ್ರವೇಶಿಸುವುದಿಲ್ಲ
ಅಮೆರಿಕದ ಆರ್ಥಿಕ ತಜ್ಞ ರಿಚರ್ಡ್ ವೂಲ್ಫ್ ಅವರು ಭಾರತದ ಮೇಲಿನ ಅಮೆರಿಕದ ತೆರಿಗೆ ದಾಳಿಯನ್ನು ‘ಆನೆ ಮೇಲೆ ಇಲಿಯ ದಾಳಿ’ಗೆ ಹೋಲಿಸಿದ್ದಾರೆ.
ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಅಂದರೆ ಅಮೆರಿಕದ ತೆರಿಗೆ ಹೇರಿಕೆಗೂ ಮುನ್ನ ಭಾರತದ ಆರ್ಥಿಕತೆಯು ಶೇ.7.8ರಷ್ಟು ಬೆಳವಣಿಗೆ ದಾಖಲಿಸಿದೆ. ಇದು ಕಳೆದ 5 ತ್ರೈಮಾಸಿಕದ ದಾಖಲೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಇದು ಶೇ.6.5ರಷ್ಟಿತ್ತು.
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜಪಾನ್ ಪ್ರವಾಸ ಯಶಸ್ವಿ ಆಗಿದ್ದು. ಮುಂದಿನ 1 ದಶಕದಲ್ಲಿ ಜಪಾನ್ ಭಾರತದಲ್ಲಿ ₹6 ಲಕ್ಷ ಕೋಟಿ (10 ಟ್ರಿಲಿಯನ್ ಯೆನ್) ಹೂಡಿಕೆ ಮಾಡುವುದಾಗಿ ಘೋಷಿಸಿದೆ. ಇದಲ್ಲದೆ ಚಂದ್ರಯಾನ-5 ಅನ್ನು ಜಂಟಿಯಾಗಿ ಕೈಗೊಳ್ಳಲು ನಿರ್ಧರಿಸಿವೆ
ರಷ್ಯಾದಿಂದ ಭಾರತಕ್ಕೆ ರಫ್ತಾಗುವ ರಸಗೊಬ್ಬರ ಪ್ರಮಾಣವು 2025ರ ಮೊದಲ 6 ತಿಂಗಳಲ್ಲಿ ಶೇ.20ರಷ್ಟು ಏರಿಕೆಯಾಗಿದೆ ಎಂದು ರಷ್ಯಾದ ಅಧಿಕಾರಿಗಳು ತಿಳಿಸಿದ್ದಾರೆ.
ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಕಂಟಕ ಎದುರಾಗಿದೆ.
ವಿದ್ಯುತ್, ನೀರು, ಹಾಲು, ಬಸ್ಸು ಹಾಗೂ ಮೆಟ್ರೋ ಪ್ರಯಾಣ ದರ, ಮುದ್ರಾಂಕ ಶುಲ್ಕ ಸೇರಿ ವಿವಿಧ ದರ ಹೆಚ್ಚಳ ಬೆನ್ನಲ್ಲೇ ಇದೀಗ ಆಸ್ತಿಗಳ ನೋಂದಣಿ ಶುಲ್ಕವನ್ನೂ ದುಪ್ಪಟ್ಟು ಮಾಡಿ ಕಂದಾಯ ಇಲಾಖೆ ಆದೇಶ
'ಕಾಂಗ್ರೆಸ್ ವಿರುದ್ಧ ಮತಗಳ್ಳತನದ ಆರೋಪ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಅದೇ ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಆಗಿದ್ದಾರೆ ಹಾಗೂ ಬಿಹಾರದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ನ ವೋಟ್ ಅಧಿಕಾರ್ ರ್ಯಾಲಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ’
‘ಜಾಗತಿಕ ಆರ್ಥಿಕತೆಯ ಸ್ಥಿರತೆ ಕಾಪಾಡಲು ಭಾರತ ಮತ್ತು ಚೀನಾ ಒಟ್ಟಾಗಿ ಕೆಲಸ ಮಾಡುವುದು ಅವಶ್ಯಕ. ಇದಕ್ಕಾಗಿ ಪರಸ್ಪರ ಗೌರವ, ಆಸಕ್ತಿ ಮತ್ತು ಸೂಕ್ಷ್ಮತೆಯ ಆಧಾರದಲ್ಲಿ ದೀರ್ಘಕಾಲಿನ ದ್ವಿಪಕ್ಷೀಯ ಸಂಬಂಧ ಮುಂದುವರಿಸಲು ಭಾರತ ಸಿದ್ಧವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.