ಮಹಾಕುಂಭಮೇಳವನ್ನೇ ಬಂಡವಾಳ ಮಾಡಿಕೊಂಡು ಪ್ಯಾಕೇಜ್ ಟೂರ್ ಹೆಸರಿನಲ್ಲಿ ಜಾಹೀರಾತು ನೀಡಿ ನೂರಕ್ಕೂ ಅಧಿಕ ಮಂದಿಯಿಂದ ಲಕ್ಷಾಂತರ ರುಪಾಯಿ ಪಡೆದು ವಂಚಿಸಿದ್ದ ಆರೋಪಿಯನ್ನು ಗೋವಿಂದರಾಜನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಸಮೀಪದ ಯಕ್ತಾಪುರದ ನೀರಿನ ಸಮಸ್ಯೆ ಕುರಿತಂತೆ ‘ಕನ್ನಡಪ್ರಭ’ದಲ್ಲಿ ಪ್ರಕಟವಾದ ವರದಿಗೆ ಮುಖ್ಯಮಂತ್ರಿಗಳ ಕಚೇರಿ ಸ್ಪಂದಿಸಿದೆ.
ನಟಿ ರನ್ಯಾ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ ಸಂಬಂಧ ಬೆಂಗಳೂರಿನ ಪ್ರಖ್ಯಾತ ಹೋಟೆಲ್ ಉದ್ಯಮಿಯೊಬ್ಬರ ಮೊಮ್ಮಗನನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ಬಂಧಿಸಿದ್ದಾರೆ.
ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದ ಆರೋಪಿ, ನಟಿ ರನ್ಯಾ ರಾವ್ ಮಾಲಿಕತ್ವದ ಖಾಸಗಿ ಕಂಪನಿಗೆ ರಾಜ್ಯ ಕೈಗಾರಿಕಾ ಅಭಿವೃದ್ಧಿ ಮಂಡಳಿಯಿಂದ (ಕೆಐಎಡಿಬಿ) 12 ಎಕರೆ ಭೂ ಮಂಜೂರಾತಿ ಹಗರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ.
ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ರನ್ಯಾ ರಾವ್ಗೆ ಸಂಬಂಧಿಸಿದ ಸಂಸ್ಥೆಗೆ ಕೆಐಎಡಿಬಿಯಿಂದ ಯಾವುದೇ ಭೂಮಿ ಹಂಚಿಕೆ ಮಾಡಿಲ್ಲ ಎಂದು ಕೆಐಎಡಿಬಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಂ. ಮಹೇಶ್ ಸ್ಪಷ್ಟಪಡಿಸಿದ್ದಾರೆ.
ಅನರ್ಹ ಬಿಪಿಎಲ್ ಫಲಾನುಭವಿಗಳನ್ನು ಪತ್ತೆ ಹಚ್ಚಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮಿತಿ ರಚಿಸಿ, ಮನೆಗಳಿಗೆ ಭೇಟಿ ನೀಡಿ, ಖುದ್ದಾಗಿ ಪರಿಶೀಲಿಸಲು ಉದ್ದೇಶಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.
ಶಾಸಕರ ಬಗ್ಗೆ ಸಚಿವರು ತೋರುತ್ತಿರುವ ನಿರ್ಲಕ್ಷ್ಯ ಧೋರಣೆ ಮುಂದುವರಿದಿದೆ. ನಮ್ಮ ಮನವಿ, ಅಹವಾಲುಗಳನ್ನು ಸಚಿವರು ಪರಿಗಣಿಸುತ್ತಿಲ್ಲ ಎಂದು ಸೋಮವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲೂ ವಿವಿಧ ಶಾಸಕರು ಮುಖ್ಯಮಂತ್ರಿಯವರ ಮುಂದೆ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ.
ದೇವರ ತಪ್ಪು ಅಧಿವೇಶನದಲ್ಲಿ ಮಂಡನೆ!
-ದೇವಾನುದೇವತೆಗಳ ತಪ್ಪು ಕಂಡುಹಿಡಿದ ಸಾಮ್ರಾಟ್ । ಟ್ರೋಲ್ ಜೋಡಿ ಅಧಿವೇಶನದಲ್ಲಿ ದೂರ ದೂರವಾದ ಕತೆ
ರಾಜ್ಯ ಸರ್ಕಾರ 2025-26ನೇ ಸಾಲಿನಿಂದ 1ನೇ ತರಗತಿಗೆ ದಾಖಲಿಸಲು ಮಕ್ಕಳಿಗೆ ಜೂ.1ಕ್ಕೆ ಕಡ್ಡಾಯವಾಗಿ ಆರು ವರ್ಷ ಪೂರ್ಣಗೊಂಡಿರಬೇಕೆಂದು ಎರಡು ವರ್ಷಗಳ ಹಿಂದೆಯೇ ಜಾರಿಗೊಳಿಸಿದ್ದ ನಿಯಮ ಈಗ ಮತ್ತೆ ಚರ್ಚೆಗೀಡಾಗಿದೆ.
ಹೂಗುಚ್ಛಗಳು ನ್ಯಾಷನಲ್ ವೇಸ್ಟ್ ಎನ್ನುವ ತಮ್ಮ ಹೇಳಿಕೆಯನ್ನು ಸಂಸದ ತೇಜಸ್ವಿ ಸೂರ್ಯ ಅವರು ವಾಪಸ್ ಪಡೆಯಬೇಕು ಎಂದು ದಕ್ಷಿಣ ಭಾರತ ಹೂ ಬೆಳೆಗಾರರ ಸಂಘದ ಅಧ್ಯಕ್ಷ ಟಿ.ಎಂ.ಅರವಿಂದ್ ಮನವಿ ಮಾಡಿದ್ದಾರೆ.