ಆರ್ಥಿಕ ಬೆಳವಣಿಗೆಯ ದರವು 2030ರ ಬಳಿಕವೂ ಇದೇ ರೀತಿ ಮುಂದುವರಿದರೆ ಕೊಂಡುಕೊಳ್ಳುವ ಸಾಮರ್ಥ್ಯದ ಆಧಾರದ ಮೇಲೆ 2038ರಲ್ಲಿ ಭಾರತವು ಅಮೆರಿಕವನ್ನು ಹಿಂದಿಕ್ಕಿ ವಿಶ್ವದಲ್ಲೇ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು ವರದಿಯೊಂದು ಹೇಳಿದೆ.
ಯುರೋಪಿನ ಪ್ರತಿಷ್ಠಿತ ವಿಮಾನ ಮತ್ತು ಹೆಲಿಕಾಪ್ಟರ್ ತಯಾರಿಕಾ ಕಂಪನಿಯಾದ ಏರ್ಬಸ್ನ ಎಚ್125 ಹೆಲಿಕಾಪ್ಟರ್ಗಳ ‘ಬಾಡಿ’ ಇನ್ನು ಮುಂದೆ ಬೆಂಗಳೂರಿನಲ್ಲೇ ನಿರ್ಮಾಣವಾಗಲಿದೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘ ರಾಮಮಂದಿರ ಚಳವಳಿಯನ್ನು ಮಾತ್ರ ಬೆಂಬಲಿಸಿತು. ಹಾಗೆಂದು ಮತ್ತೆ ಇಂಥ ಯಾವುದೇ ಆಂದೋಲನವನ್ನು ನಾವು ಬೆಂಬಲಿಸುವುದಿಲ್ಲ’ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ರಷ್ಯಾದಿಂದ ತೈಲ ಖರೀದಿ ಮೂಲಕ ಉಕ್ರೇನ್ ಯುದ್ಧದ ಬೆಂಕಿಗೆ ಭಾರತ ತುಪ್ಪ ಸುರಿಯುತ್ತಿದೆ ಎಂದು ಆರೋಪಿಸುತ್ತಿದ್ದ ಅಮೆರಿಕ, ಇದೀಗ ಉಕ್ರೇನ್ ಯುದ್ಧವನ್ನೇ ಮೋದಿ ಯುದ್ಧ ಎಂದು ಬಣ್ಣಿಸಿದೆ.
, ‘ನಗರ ನಕ್ಸಲರ ಮೊದಲ ಗುರಿ ಹಿಂದೂ ಶ್ರದ್ಧಾ ಕೇಂದ್ರಗಳು ಮತ್ತು ನಂಬಿಕೆಗಳು’ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಕಿಡಿಕಾರಿದ್ದಾರೆ.
ಸತ್ಯ ಹೇಳಿದರೆ ಕೆಲವರು ಸಹಿಸುವುದಿಲ್ಲ. ಹೀಗಾಗಿ ನಾನು ಮಾತನಾಡದಿರುವುದೇ ಉತ್ತಮ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಮುಂದಿನ 24 ಗಂಟೆಯಲ್ಲಿ ಕರಾವಳಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೆಎಸ್ಆರ್ಟಿಸಿ ಬಸ್ವೊಂದರ ಬ್ರೇಕ್ ಫೇಲಾದ ಕಾರಣ ವೇಗವಾಗಿ ಹಿಮ್ಮುಖ ಚಲಿಸಿ ರಸ್ತೆ ಬದಿಯಲ್ಲಿ ಬಸ್ಗಾಗಿ ಕಾಯುತ್ತಿದ್ದವರ ಮೇಲೆ ಹರಿದು, ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕೇರಳ-ಕರ್ನಾಟಕ ಗಡಿಯಲ್ಲಿರುವ ಕಾಸರಗೋಡಿನ ತಲಪ್ಪಾಡಿಯಲ್ಲಿ ಸಂಭವಿಸಿದೆ.
ಧರ್ಮಸ್ಥಳ ವಿರುದ್ಧ ಅಪಪ್ರಚಾರ, ಷಡ್ಯಂತ್ರ ನಡೆಯುತ್ತಿದೆ ಹಾಗೂ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ಜೆಡಿಎಸ್ ಪಕ್ಷ ಆ.31ರ ಭಾನುವಾರ ‘ಧರ್ಮಸ್ಥಳ ಸತ್ಯ ಯಾತ್ರೆ’ ಹಮ್ಮಿಕೊಂಡಿದೆ.
‘ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ’ ಎನ್ನುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹಿಂದೂಗಳಿಗೆ ಅಪಮಾನ ಮಾಡಿದ್ದಾರೆ. ಹೀಗಾಗಿ ಶಿವಕುಮಾರ್ ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.