ಆಗುಂಬೆ ಘಾಟಿಯಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ಜೂ.15ರಿಂದ ಸೆ.30ರವರೆಗೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರು ಆದೇಶ ಹೊರಡಿಸಿದ್ದಾರೆ.
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಸೇವೆ ಪಡೆಯುವವರು ಆಧಾರ್ ಕಾರ್ಡ್ ಹಾಗೂ ಆಧಾರ್ ದೃಢೀಕರಣ ನೀಡುವುದನ್ನು ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ಕೇಂದ್ರದಲ್ಲಿ ಕಾಂಗ್ರೆಸ್ಸೇತರ ಸರ್ಕಾರ ಸತತ 3ನೇ ಬಾರಿಗೆ ಅಧಿಕಾರಕ್ಕೆ ಬಂದು 11 ವರ್ಷ ಪೂರೈಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕಾರಾವಧಿಯಲ್ಲಿ ದೇಶದಲ್ಲಿ ಹೊಸ ಉತ್ಸಾಹ ಮೂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಕಲ್ಯಾಣ ಕರ್ನಾಟಕದ ಪ್ರದೇಶದ ಆರೋಗ್ಯ ಸುಧಾರಣೆಗೆ ₹411.88 ಕೋಟಿ ಕಾಮಗಾರಿಗೆ ಚಾಲನೆ ನೀಡಿರುವುದು ಈ ಪ್ರದೇಶದ ಆರೋಗ್ಯ ಕ್ರಾಂತಿಗೆ ಮುನ್ನುಡಿ ಬರೆದಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಉಚಿತ ಆರೋಗ್ಯ ಸೌಲಭ್ಯದ ಜೊತೆಗೆ ಉತ್ತಮ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಕ್ಯಾನ್ಸರ್ ಪೀಡಿತ ಮಕ್ಕಳ ವಸತಿ ಶಾಲೆಯನ್ನು ತೆರೆಯಲು ಯೋಜನೆ ರೂಪಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಇರಾನಿನ ಅಣುಸ್ಥಾವರದ ಮೇಲೆ ಇಸ್ರೇಲಿನ ಭೀಕರ ದಾಳಿಯ ಬಳಿಕ ಉಂಟಾಗಿರುವ ಪ್ರತಿದಾಳಿಯಿಂದ ಇಸ್ರೇಲ್ ದೇಶಾದ್ಯಂತ ಹೈ ಅಲರ್ಟ್ ಸ್ಥಿತಿ ಇದೆ.
ವಿನಯ, ವಿಚಾರಶೀಲತೆ ಮೂರ್ತಿವೆತ್ತಂತಿರುವ ಸೃಜನಶೀಲ ಸಾಹಿತಿ ರಾಘವೇಂದ್ರ ಪಾಟೀಲ್ ಇದೀಗ ‘ಅಹಂ ಪುರುಷ’ ಎಂಬ ಕಾದಂಬರಿ ರಚನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸಮಕಾಲೀನ ಸಾಹಿತ್ಯ, ಸಾಮಾಜಿಕ ನೆಲೆಗಳ ಬಗ್ಗೆ ಅವರ ವಿಚಾರಪೂರ್ಣ ನುಡಿಗಳು ಇಲ್ಲಿವೆ.
ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಘಟನೆಯಿಂದ ಎಚ್ಚೆತ್ತಿರುವ ಬಿಸಿಸಿಐ, ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟುವ ಉದ್ದೇಶದಿಂದ ಸಮಗ್ರ ಮಾರ್ಗಸೂಚಿಗಳನ್ನು ರೂಪಿಸಲು ಸಮಿತಿಯೊಂದನ್ನು ರಚಿಸಿದೆ.
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಕಿರೀಟ ಗೆದ್ದ ದಕ್ಷಿಣ ಆಫ್ರಿಕಾ । ಫೈನಲ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್ ಜಯಭೇರಿ282 ರನ್ ಕಠಿಣ ಗುರಿ ಪಡೆದಿದ್ದ ತಂಡವನ್ನು ಗೆಲ್ಲಿಸಿದ ಮಾರ್ಕ್ರಮ್ । ಸತತ 2ನೇ ಟೆಸ್ಟ್ ಕಪ್ ಗೆಲ್ಲುವ ಆಸೀಸ್ ಕನಸು ಭಗ್ನ
ಪಹಲ್ಗಾಂ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತ ಕೈಗೊಂಡ ಅಪರೇಷನ್ ಸಿಂದೂರ್ಗೆ ಸೋತು ಸುಣ್ಣವಾದ ಪಾಕಿಸ್ತಾನ, ಇನ್ನೂ ತನ್ನ ಬೆನ್ನನ್ನು ತಾನೇ ತಟ್ಟಿಕೊಳ್ಳುವ ಚಾಳಿಯನ್ನು ಮುಂದುವರೆಸಿದೆ.