ತುಂಗಭದ್ರಾ ಜಲಾಶಯದ ಏಳು ಗೇಟ್ಗಳು ಬೆಂಡ್ (ಬಾಗಿವೆ) ಆಗಿವೆ ಎಂದು ಅಣೆಕಟ್ಟೆ ಸುರಕ್ಷತಾ ಪರಿಶೀಲನಾ ಕಮಿಟಿ ವರದಿ ನೀಡಿದೆ. ಕ್ರಸ್ಟ್ ಗೇಟ್ ನಂಬರ್ 4, 11, 18, 20, 24, 27 ಹಾಗೂ 28ನೇ ಗೇಟ್ಗಳು ಬಾಗಿವೆ (ಬೆಂಡ್).
ಬೆಂಗಳೂರು - ಸುಮಾರು 1.35 ಲಕ್ಷ ಕೋಟಿ ರು. ವೆಚ್ಚದಲ್ಲಿ ಡಬಲ್ ಡೆಕ್ಕರ್ ರಸ್ತೆಗಳು, ಸುರಂಗ ರಸ್ತೆಗಳು, ಬ್ಯುಸಿನೆಸ್ ಕಾರಿಡಾರ್, ವೈಟ್ ಟ್ಯಾಪಿಂಗ್ ರಸ್ತೆಗಳು, ಡಾಂಬರು ರಸ್ತೆಗಳು, 6ನೇ ಹಂತದ ಕಾವೇರಿ ನೀರು ಸರಬರಾಜು ಯೋಜನೆ ಸೇರಿ ಹಲವು ಯೋಜನೆ ರೂಪಿಸಿದ್ದೇವೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ
ಸರಣಿ ರಜೆ ಹಿನ್ನೆಲೆಯಲ್ಲಿ ಆ.15ರಂದು ಶುಕ್ರವಾರ ಒಂದೇ ದಿನ ಮೆಟ್ರೋ ರೈಲುಗಳಲ್ಲಿ 10,83,788 ಜನ ಪ್ರಯಾಣಿಸಿದ್ದು, ಹೊಸ ದಾಖಲೆ ನಿರ್ಮಾಣವಾಗಿದೆ.
ಕಾಂಗ್ರೆಸ್ ಶಾಸಕ ಸತೀಶ ಸೈಲ್ ಮನೆಯ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ನಡೆಸಿದ ದಾಳಿಯಲ್ಲಿ ₹1.68 ಕೋಟಿ ನಗದು, 6.75 ಕೇಜಿ ಬಂಗಾರವನ್ನು ಜಪ್ತಿ ಮಾಡಲಾಗಿದೆ. ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ ₹14.13 ಕೋಟಿ ಮೊತ್ತವನ್ನು ಫ್ರೀಜ್ ಮಾಡಲಾಗಿದೆ.
‘ನನ್ನನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲು ಮೂವರು ದೆಹಲಿಯಲ್ಲಿ ವ್ಯವಸ್ಥಿತವಾಗಿ ಪಿತೂರಿ ಮಾಡಿದ್ದಾರೆ. ಪಿತೂರಿ ವಿದ್ಯೆ ನನಗೂ ಗೊತ್ತಿದೆ. ಈ ಸಂದರ್ಭದಲ್ಲಿ ಅದನ್ನು ಬಳಸುವುದಿಲ್ಲ. ಮುಂದೆ ಕಾಲ ಬರುತ್ತದೆ’ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಮಾರ್ಮಿಕವಾಗಿ ನುಡಿದಿದ್ದಾರೆ.
ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನೇತೃತ್ವದಲ್ಲಿ ಶನಿವಾರ ‘ಧರ್ಮಸ್ಥಳ ಚಲೋ’ ಅಭಿಯಾನ ನಡೆಯಲಿದೆ
ಧರ್ಮಸ್ಥಳ ಗ್ರಾಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನಡೆದಿರುವ ಷಡ್ಯಂತ್ರ ಸೇರಿ ಉಳಿದೆಲ್ಲ ವಿಚಾರಗಳನ್ನು ಗೃಹ ಸಚಿವರೇ ಸೋಮವಾರ ಸದನದಲ್ಲಿ ವಿವರಿಸಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ತೆರಿಗೆ, ಮತ್ತಿತರ ಸಂಪನ್ಮೂಲಗಳ ಹಂಚಿಕೆಯಲ್ಲಿ ನಿಷ್ಪಕ್ಷಪಾತ ಧೋರಣೆ ಅನುಸರಿಸುತ್ತಿಲ್ಲ. ಐಟಿ, ಇ.ಡಿ., ಸಿಬಿಐನಂಥ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಈ ಬಗ್ಗೆ ನಾಗರಿಕರು ಧ್ವನಿ ಎತ್ತಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ಹಾಲಿ ಇರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಪದ್ಧತಿಯಲ್ಲಿ ಮಹತ್ವದ ಬದಲಾವಣೆ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಘೋಷಿಸಿದ್ದಾರೆ. ‘
ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂದಿದ್ದ ದೇಶದ ನಾಯಕರು ಬ್ರಿಟಿಷ್ ಅಧಿಕಾರಿಯನ್ನು ಇಲ್ಲೇ ಉಳಿಸಿಕೊಳ್ಳಲು ಬಯಸಿದ್ದರು!