ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಆರ್ಸಿಬಿ ಸಂಭ್ರಮಾಚರಣೆಗೆ ವೇಳೆ ನಡೆದ ಕಾಲ್ತುಳಿತ ಘಟನೆಯಿಂದ ಬಿಸಿಸಿಐ ಎಚ್ಚೆತ್ತಿದೆ.
ಐಪಿಎಲ್ ಚಾಂಪಿಯನ್ ಆರ್ಸಿಬಿ ತಂಡವನ್ನು ಖರೀದಿಸುವ ಬಗ್ಗೆ ಹರಿದಾಡುತ್ತಿರುವ ಊಹಾಪೋಹಗಳ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ
ರಾಜ್ಯ ಬಿಜೆಪಿಯ ಬಾಕಿ ಉಳಿದಿದ್ದ ಹತ್ತು ಜಿಲ್ಲೆಗಳಿಗೆ ನೂತನ ಅಧ್ಯಕ್ಷರ ನೇಮಕವಾಗಿದೆ. ಇದರೊಂದಿಗೆ ರಾಜ್ಯ ಬಿಜೆಪಿಯ ಎಲ್ಲ ಜಿಲ್ಲೆಗಳ ಸಂಘಟನಾತ್ಮಕ ಜಿಲ್ಲಾಧ್ಯಕ್ಷರ ನೇಮಕ ಪ್ರಕ್ರಿಯೆ ಪೂರ್ಣಗೊಂಡಂತಾಗಿದ್ದು, ರಾಜ್ಯಾಧ್ಯಕ್ಷರ ನೇಮಕಕ್ಕೆ ಹಾದಿ ಮತ್ತಷ್ಟು ಸುಗಮವಾಗಿದೆ.
ರಾಜ್ಯ ಸರ್ಕಾರ ಪ್ರತಿ ವರ್ಷ 19,000 ಕೋಟಿ ರು.ಗಳನ್ನು ರೈತರ ಕೃಷಿ ಪಂಪ್ ಸೆಟ್ಗಳಿಗೆ ಸಬ್ಸಿಡಿಯಾಗಿ ನೀಡುತ್ತಿದೆ. ನಾವೇ ಅಧಿಕಾರಕ್ಕೆ ಬಂದು ಈ ಯೋಜನೆಯನ್ನು ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿ ಯಾವುದೇ ರೀತಿಯ ಕಿರುಕುಳ ನೀಡಲು ಮುಂದಾದರೆ ರಾಜ್ಯ ಬಿಜೆಪಿ ಸುಮ್ಮನೆ ಕೂರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ರಾಜ್ಯ ಸರ್ಕಾರ ಸದ್ಯ ಮಾಡಲಾಗಿರುವ ಜಾತಿ ಗಣತಿ ವರದಿಯನ್ನು ಕೈಬಿಟ್ಟು ಮರು ಸಮೀಕ್ಷೆ ಮಾಡಲು ಮುಂದಾಗಿದೆ. ಇದಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು, ಬುಧವಾರ ವಿವಿಧೆಡೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ.
ಕೆಎಸ್ಸಿಎ ಕಾರ್ಯದರ್ಶಿ ಆಗಿದ್ದ ಶಂಕರ್, ಖಜಾಂಚಿಯಾಗಿದ್ದ ಜಯರಾಮ್ ಹಾಗೂ ಕಬ್ಬನ್ ಪಾರ್ಕ್ ಠಾಣೆ ಇನ್ಸ್ಪೆಕ್ಟರ್ ಎ.ಕೆ.ಗಿರೀಶ್ ಹಾಜರಾಗಿದ್ದರು. ಈ ಮೂವರನ್ನು ಪ್ರತ್ಯೇಕವಾಗಿ ವಿಚಾರಣೆಗೊಳಪಡಿಸಿ ಸಿಐಡಿ ಹೇಳಿಕೆ ದಾಖಲಿಸಿಕೊಂಡಿದೆ
ಕಾನೂನು ಪದವಿ ಪಡೆದು, ವಕೀಲಿಕೆ ನಡೆಸಲು ಸನ್ನದು ನೋಂದಾಯಿಸಿಕೊಂಡ ನಂತರ ಸರ್ಕಾರಿ, ಅರೆ ಸರ್ಕಾರಿ, ನ್ಯಾಯಾಂಗ ಇಲಾಖೆ ಮತ್ತು ಖಾಸಗಿ ಕಂಪನಿಯಲ್ಲಿ ಉದ್ಯೋಗಕ್ಕೆ ಸೇರಿಕೊಂಡಿರುವವರು ತಮ್ಮ ಸನ್ನದು ಅಮಾನತು ಮಾಡಿಕೊಳ್ಳಲು ಕಾಲಾವಕಾಶ ವಿಸ್ತರಿಸಿದೆ.
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಸಂಬಂಧ ಭದ್ರತಾ ವ್ಯವಸ್ಥೆ ಹಾಗೂ ಲೋಪದ ಬಗ್ಗೆ ಪೊಲೀಸರು ಧರಿಸಿದ್ದ ಬಾಡಿ ವೋರ್ನ್ ಕ್ಯಾಮೆರಾಗಳೇ ಪ್ರಮುಖ ಸಾಕ್ಷಿಯಾಗುತ್ತಿರುವ ಮಹತ್ವದ ಸಂಗತಿ ಬೆಳಕಿಗೆ ಬಂದಿದೆ.