2025ನೇ ಸಾಲಿನ ಪದ್ಮ ಪ್ರಶಸ್ತಿಗೆ ಪಾತ್ರರಾಗಿದ್ದ 6 ಕನ್ನಡಿಗರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ಪ್ರಶಸ್ತಿ ಪ್ರದಾನ ಮಾಡಿದರು
ರಾಜ್ಯ ಸರ್ಕಾರ ಜನರ ಮೇಲೆ ತೆರಿಗೆ ಹೊರೆ ಹೇರಿದೆ ಎಂದು ಅಪಪ್ರಚಾರ ಮಾಡುವ ಬಿಜೆಪಿ ನಾಯಕರು, ನಿಜವಾಗಿಯೂ ಬೆಲೆ ಏರಿಕೆ ಮಾಡಿ ಜನರ ಜೇಬಿಗೆ ಕತ್ತರಿ ಹಾಕಿದ ಕೇಂದ್ರ ಸರ್ಕಾರದ ಕ್ರಮ ಕಣ್ತೆರೆದು ನೋಡಬೇಕು ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ತಾಕೀತು ಮಾಡಿದ್ದಾರೆ.
- ಬಿಸಿಲು, ರೋಗ, ಹೊರರಾಜ್ಯದಲ್ಲೂ ತೆಂಗಿನ ಇಳುವರಿ ಕುಸಿತ । ದುಪ್ಪಟ್ಟಾದ ತೆಂಗಿನಕಾಯಿ ದರ, ಕೆ.ಜಿ.ಗೆ 80ರ ವರೆಗೆ ಮಾರಾಟ- ತೆಂಗಿನೆಣ್ಣೆ, ಕೊಬ್ಬರಿ, ನಾರಿನ ದರವೂ ಏರಿಕೆ, ಗ್ರಾಹಕರು ಕಂಗಾಲು
ಕೆಲ ದಿನಗಳ ಹಿಂದೆ ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ನಗರದ ಭರತ್ ಭೂಷಣ್ ಅವರ ನಿವಾಸಕ್ಕೆ ರಾಷ್ಟ್ರೀಯ ತನಿಖಾ ದಳದ(ಎನ್ಐಎ) ಅಧಿಕಾರಿಗಳು ಭೇಟಿ ನೀಡಿ ಮೃತನ ಪತ್ನಿ ಸುಜಾತಾ ಅವರಿಂದ ಘಟನೆ ಕುರಿತು ಮಾಹಿತಿ ಕಲೆ ಹಾಕಿದ್ದಾರೆ.
ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ವಿವಿಧೆಡೆ ಕಳ್ಳತನದಲ್ಲಿ ತೊಡಗಿದ್ದ, 260 ಪ್ರಕರಣಗಳಲ್ಲಿ ಪೋಲಿಸರಿಗೆ ಬೇಕಾಗಿದ್ದ ಅಂತಾರಾಜ್ಯ ಕುಖ್ಯಾತ ಮನೆಗಳ್ಳನನ್ನು ಕಲಬುರಗಿ ಪೋಲಿಸರು ಬಂಧಿಸಿದ್ದಾರೆ.
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿಯಲ್ಲಿ ಭಾನುವಾರ ರಾತ್ರಿ ಯುವಕನೊಬ್ಬ ಹತ್ತು ಸಾವಿರ ರುಪಾಯಿ ಆಸೆಗಾಗಿ ಐದು ಬಾಟಲ್ ಒರಿಜಿನಲ್ ಚಾಯ್ಸ್ ವಿಸ್ಕಿಗೆ ಸ್ವಲ್ಪವೂ ನೀರನ್ನು ಬೆರೆಸದೆ ಕುಡಿದಿದ್ದು, ಇದರಿಂದಾಗಿ ಆತ ಮೃತಪಟ್ಟಿದ್ದಾನೆ.
ವಿಧಾನಸಭೆಯಲ್ಲಿ ಪ್ರತಿಭಟನೆ ವೇಳೆ ಅನುಚಿತವಾಗಿ ವರ್ತನೆ ತೋರಿದ ಆರೋಪದ ಮೇಲೆ ಮಾಡಿರುವ 18 ಬಿಜೆಪಿ ಶಾಸಕರ ಅಮಾನತು ಆದೇಶ ಹಿಂಪಡೆಯುವಂತೆ ಸಭಾಧ್ಯಕ್ಷರಿಗೆ ನಿರ್ದೇಶನ ನೀಡಬೇಕು ಎಂದು ಬಿಜೆಪಿ ನಿಯೋಗ ರಾಜ್ಯಪಾಲರಿಗೆ ಮನವಿ ಮಾಡಿದೆ.
ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆ ಸಂಬಂಧ ಕರೆಯಲಾಗಿರುವ ಟೆಂಡರ್ ಹಾಗೂ ಅದರ ಮಾರ್ಗಸೂಚಿ ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮಂಗಳವಾರ ನಡೆಸಲಿದೆ.
ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ. ಬಹುಶಃ ನನ್ನ ಪತಿಗೆ ದೂರದಿಂದಲೇ ಗುಂಡು ಹಾರಿಸಿದ್ದರಿಂದ ಈ ಮಾತನ್ನು ಕೇಳಿಲ್ಲ ಎಂದೆನಿಸುತ್ತದೆ - ಪಲ್ಲವಿ
ಬೇಸಿಗೆ ಮುಗಿಯಲು ಇನ್ನೂ ಒಂದರಿಂದ ಒಂದೂವರೆ ತಿಂಗಳು ಬಾಕಿ ಇದೆ. ಆದರೆ, ಈಗಾಗಲೇ ರಾಜ್ಯದ ಜಲಮೂಲಗಳಲ್ಲಿ ನೀರಿನ ಕೊರತೆ ಕಾಣಿಸಿಕೊಂಡಿದೆ.